ಹೊಸ ಸೊನೆಟ್ ಅನಾವರಣಕ್ಕೂ ಮುನ್ನ ಮತ್ತೊಂದು ಟೀಸರ್ ಬಿಡುಗಡೆ ಮಾಡಿದ ಕಿಯಾ ಮೋಟಾರ್ಸ್

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಕಿಯಾ ಮೋಟಾರ್ಸ್ ಹೊಚ್ಚ ಹೊಸ ಸೊನೆಟ್ ಕಾನ್ಸೆಪ್ಟ್ ಕಾರು ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಸೆಲ್ಟೊಸ್ ಮಾದರಿಗಿಂತಲೂ ಅಧಿಕ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದ್ದು, ಅಗಸ್ಟ್ 7ರಂದು ಅನಾವರಣಗೊಳ್ಳಲಿರುವ ಹೊಸ ಕಾರಿನ ವಿನ್ಯಾಸದ ಕುರಿತಾಗಿ ಸರಣಿ ಟೀಸರ್‌‌ಗಳನ್ನು ಬಿಡುಗಡೆ ಮಾಡಲಾಗುತ್ತಿದೆ.

ಸೊನೆಟ್ ಅನಾವರಣಕ್ಕೂ ಮುನ್ನ ಮತ್ತೊಂದು ಟೀಸರ್ ಬಿಡುಗಡೆ

ಅಗಸ್ಟ್ 7ರಂದು ಹೊಸ ಸೊನೆಟ್ ಅನಾವರಣಗೊಳಿಸಲಿರುವ ಕಿಯಾ ಮೋಟಾರ್ಸ್ ಕಂಪನಿಯು ಅನಾವರಣಗೊಳಿಸಿದ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ಹೊಸ ಕಾರನ್ನು ಕಂಪ್ಯಾಕ್ಟ್ ಎಸ್‌ಯುವಿ ವಿನ್ಯಾಸದಲ್ಲಿ ಅಭಿವೃದ್ದಿಗೊಳಿಸಲಾಗಿದೆ. ಹೊಸ ಕಾರಿನ ವಿನ್ಯಾಸದ ಕುರಿತಾಗಿ ಈಗಾಗಲೇ ವಿವಿಧ ಮಾದರಿಯ ಟೀಸರ್ ಬಿಡುಗಡೆ ಮಾಡಲಾಗಿದ್ದು, ವಿಶೇಷ ವಿನ್ಯಾಸದೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಸೊನೆಟ್ ಅನಾವರಣಕ್ಕೂ ಮುನ್ನ ಮತ್ತೊಂದು ಟೀಸರ್ ಬಿಡುಗಡೆ

ಹೊಸ ಸೊನೆಟ್ ಕಾನ್ಸೆಪ್ಟ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಜನಪ್ರಿಯ ಹ್ಯುಂಡೈ ವೆನ್ಯೂ, ಮಾರುತಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಕಾರಿನ ಬೆಲೆ ಕೂಡಾ ಆಕರ್ಷಕವಾಗಿರಲಿದೆ ಎನ್ನಲಾಗಿದೆ.

ಸೊನೆಟ್ ಅನಾವರಣಕ್ಕೂ ಮುನ್ನ ಮತ್ತೊಂದು ಟೀಸರ್ ಬಿಡುಗಡೆ

ಹೊಸ ಕಾರು ಬಿಎಸ್-6 ಎಂಜಿನ್‌ ಜೊತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ಸ್ಪೋಟಿ ಲುಕ್ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಂಡಿದೆ.

ಸೊನೆಟ್ ಅನಾವರಣಕ್ಕೂ ಮುನ್ನ ಮತ್ತೊಂದು ಟೀಸರ್ ಬಿಡುಗಡೆ

ಹೊಸ ಕಾರಿನಲ್ಲಿ ಫ್ಲ್ಯಾಟ್ ಬಾಟಮ್ ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ರೋಡ್ ಟೆಸ್ಟ್ ವೇಳೆ ಬಹಿರಂಗವಾಗಿದೆ.

ಸೊನೆಟ್ ಅನಾವರಣಕ್ಕೂ ಮುನ್ನ ಮತ್ತೊಂದು ಟೀಸರ್ ಬಿಡುಗಡೆ

ಹಾಗೆಯೇ ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 10.25-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಂಡಿದ್ದು, ಹೈ ಎಂಡ್ ಮಾದರಿಯಲ್ಲಿ ಆ್ಯಂಬಿಯೆಂಟ್ ಲೈಟಿಂಗ್, ಸನ್‌ರೂಫ್ ನೀಡಲಾಗಿದೆ.

ಸೊನೆಟ್ ಅನಾವರಣಕ್ಕೂ ಮುನ್ನ ಮತ್ತೊಂದು ಟೀಸರ್ ಬಿಡುಗಡೆ

ಇದರೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಕಿಯಾ ಮೋಟಾರ್ಸ್ ಕಂಪನಿಯು 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಂಡರ್ಡ್ ಆಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಫೀಚರ್ಸ್‌ಗಳಿರಲಿವೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಸೊನೆಟ್ ಅನಾವರಣಕ್ಕೂ ಮುನ್ನ ಮತ್ತೊಂದು ಟೀಸರ್ ಬಿಡುಗಡೆ

ಎಂಜಿನ್ ವೈಶಿಷ್ಟ್ಯತೆ

ಹೊಸ ಸೊನೆಟ್ ಕಾರಿನಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆಗಳನ್ನು ನೀಡುವ ಸಾಧ್ಯತೆಗಳಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಿದೆ.

ಸೊನೆಟ್ ಅನಾವರಣಕ್ಕೂ ಮುನ್ನ ಮತ್ತೊಂದು ಟೀಸರ್ ಬಿಡುಗಡೆ

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದುವ ಸಾಧ್ಯತೆಗಳಿದ್ದು, ಟರ್ಬೋ ಎಂಜಿನ್‌ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾಮಿಷನ್ ಹೊಂದಲಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಸೊನೆಟ್ ಅನಾವರಣಕ್ಕೂ ಮುನ್ನ ಮತ್ತೊಂದು ಟೀಸರ್ ಬಿಡುಗಡೆ

ಸೊನೆಟ್ ಕಾರಿನ ಬೆಲೆ(ಅಂದಾಜು)

ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕವಾಗಿರಲಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

More from DriveSpark

Article Published On: Thursday, July 23, 2020, 18:39 [IST]
English summary
Kia Sonet SUV First Production-Ready Teaser Image Released. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+