ಬಿಡುಗಡೆಗೆ ಸಿದ್ದವಾಗಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಸೆಲ್ಟೊಸ್ ಹಾಗೂ ಕಾರ್ನಿವಾಲ್ ನಂತರ ಮೂರನೇ ಕಾರು ಮಾದರಿಯಾಗಿ ಸೊನೆಟ್ ಕಾನ್ಸೆಪ್ಟ್ ಬಿಡುಗಡೆ ಮಾಡಲು ಸಿದ್ದತೆ ನಡೆಸಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಶೀಘ್ರದಲ್ಲೇ ಹೊಸ ಕಾರನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ಪರಿಶೀಲನೆಗಾಗಿ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿದೆ.

ಬಿಡುಗಡೆಗೆ ಸಿದ್ದವಾಗಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ವೆನ್ಯೂ ಮತ್ತು ಮಾರುತಿ ಬ್ರೆಝಾ ಕಾರಿಗೆ ಪೈಪೋಟಿ ಬಿಡುಗಡೆಯಾಗುತ್ತಿರುವ ಸೊನೆಟ್ ಕಾನ್ಸೆಪ್ಟ್ ಭಾರೀ ನೀರಿಕ್ಷೆ ಮೂಡಿಸಿದ್ದು, ಈ ಹೊಸ ಕಾರನ್ನು ಮೊದಲ ಬಾರಿಗೆ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾಗಿತ್ತು. ಇದೀಗ ಬಿಡುಗಡೆಯಾಗಿ ಅಂತಿಮ ಹಂತದ ಸಿದ್ದತೆ ನಡೆಸಲಾಗುತ್ತಿದ್ದು, ಹೊಸ ಕಾರು ಬಿಎಸ್-6 ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಬಿಡುಗಡೆಗೆ ಸಿದ್ದವಾಗಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಸ್ಪೋಟಿ ಲುಕ್ ಜೊತೆಗೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿರುವ ಸೊನೆಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿದೆ.

ಬಿಡುಗಡೆಗೆ ಸಿದ್ದವಾಗಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಸದ್ಯಕ್ಕೆ ಕ್ಯೂವೈಎ ಕೊಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಸೊನೆಟ್ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪ್ರಬಲ ಪೈಪೋಟಿಯಾಗಲಿದೆ.

ಬಿಡುಗಡೆಗೆ ಸಿದ್ದವಾಗಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ಈಗಾಗಲೇ ವಿವಿಧ ಸುತ್ತಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ಅನಾವರಣ ಕಾರ್ಯಕ್ರಮದಲ್ಲಿ ಹೊಸ ಕಾರಿನ ಯಾವುದೇ ತಾಂತ್ರಿಕ ಅಂಶಗಳ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಆದರೆ ಮಾಹಿತಿಗಳ ಪ್ರಕಾರ, ಹೊಸ ಕಾರಿನಲ್ಲಿ ಒಟ್ಟು 4 ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆ ಹೊಂದುವ ಸಾಧ್ಯತೆಗಳಿವೆ ಎನ್ನಬಹುದು.

ಬಿಡುಗಡೆಗೆ ಸಿದ್ದವಾಗಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಎಂಜಿನ್ ವೈಶಿಷ್ಟ್ಯತೆ

ಹೊಸ ಸೊನೆಟ್ ಕಾರಿನಲ್ಲಿ 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್, 1.6-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್ ಮತ್ತು 1.4-ಲೀಟರ್ ಟರ್ಬೋಚಾರ್ಜ್ಡ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.

ಬಿಡುಗಡೆಗೆ ಸಿದ್ದವಾಗಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಚಾರ್ಜ್ಡ್ ತ್ರೀ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆಯುವ ಸಾಧ್ಯತೆಗಳಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ.

ಬಿಡುಗಡೆಗೆ ಸಿದ್ದವಾಗಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ರೋಡ್ ಟೆಸ್ಟ್ ವೇಳೆ ಬಹಿರಂಗವಾಗಿದೆ.

ಬಿಡುಗಡೆಗೆ ಸಿದ್ದವಾಗಿರುವ ಕಿಯಾ ಸೊನೆಟ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಸೊನೆಟ್ ಕಾರಿನ ಬೆಲೆ ಮತ್ತು ಬಿಡುಗಡೆ ಅವಧಿ(ಅಂದಾಜು)

ಕಿಯಾ ಹೊಸ ಕಾರು ಮುಂದಿನ ಎರಡು ತಿಂಗಳ ಅವಧಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6 ಲಕ್ಷದಿಂದ ರೂ.9 ಲಕ್ಷ ಬೆಲೆ ಅಂತರ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

Source: Team bhp

Article Published On: Wednesday, March 4, 2020, 8:45 [IST]
English summary
Kia Sonet SUV interior spy details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+