ಕಿಯಾ ಮೋಟಾರ್ಸ್ ಅಧಿಕೃತ ವೆಬ್‌ಸೈಟ್‌ನಲ್ಲಿ ಸೇರ್ಪಡೆಗೊಂಡ ಸೊನೆಟ್ ಕಾನ್ಸೆಪ್ಟ್ ಕಾರು

ಸೆಲ್ಟೊಸ್ ಮತ್ತು ಕಾರ್ನಿವಾಲ್ ನಂತರ ಮೂರನೇ ಕಾರು ಮಾದರಿಯಾಗಿ ಸೆೊನೆಟ್ ಕಾನ್ಸೆಪ್ಟ್ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿರುವ ಕಿಯಾ ಮೋಟಾರ್ಸ್ ಕಂಪನಿಯು ಹೊಸ ಕಾರು ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಹೊಸ ಕಾರಿನ ಮಾಹಿತಿಗಾಗಿ ತನ್ನ ಅಧಿಕೃತ ವೆಬ್‌ತಾಣದಲ್ಲಿ ಸೇರ್ಪಡೆಗೊಳಿಸಿದೆ.

ಕಿಯಾ ಮೋಟಾರ್ಸ್ ಅಧಿಕೃತ ವೆಬ್‌ಸೈಟ್‌ನಲ್ಲಿ ಸೇರ್ಪಡೆಗೊಂಡ ಸೊನೆಟ್

ಮಾಹಿತಿಗಳ ಪ್ರಕಾರ, ಹೊಸ ಕಾರಿನ ಉತ್ಪಾದನಾ ಆವೃತ್ತಿಯನ್ನು ಮುಂದಿನ ಅಗಸ್ಟ್ 7ರಂದು ಅನಾವರಣಗೊಳಿಸಲಿರುವ ಕಿಯಾ ಮೋಟಾರ್ಸ್ ಕಂಪನಿಯು ಅನಾವರಣಗೊಳಿಸಿದ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ಹೊಸ ಕಾರನ್ನು ಕಂಪ್ಯಾಕ್ಟ್ ಎಸ್‌ಯುವಿ ವಿನ್ಯಾಸದಲ್ಲಿ ಅಭಿವೃದ್ದಿಗೊಳಿಸಲಾಗಿದೆ. ಹೊಸ ಕಾರಿನ ವಿನ್ಯಾಸದ ಕುರಿತಾಗಿ ಈಗಾಗಲೇ ವಿವಿಧ ಮಾದರಿಯ ಟೀಸರ್ ಬಿಡುಗಡೆ ಮಾಡಲಾಗಿದ್ದು, ವಿಶೇಷ ವಿನ್ಯಾಸದೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಕಿಯಾ ಮೋಟಾರ್ಸ್ ಅಧಿಕೃತ ವೆಬ್‌ಸೈಟ್‌ನಲ್ಲಿ ಸೇರ್ಪಡೆಗೊಂಡ ಸೊನೆಟ್

ಹೊಸ ಸೊನೆಟ್ ಕಾನ್ಸೆಪ್ಟ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಜನಪ್ರಿಯ ಹ್ಯುಂಡೈ ವೆನ್ಯೂ, ಮಾರುತಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಕಾರಿನ ಬೆಲೆ ಕೂಡಾ ಆಕರ್ಷಕವಾಗಿರಲಿದೆ ಎನ್ನಲಾಗಿದೆ.

ಕಿಯಾ ಮೋಟಾರ್ಸ್ ಅಧಿಕೃತ ವೆಬ್‌ಸೈಟ್‌ನಲ್ಲಿ ಸೇರ್ಪಡೆಗೊಂಡ ಸೊನೆಟ್

ಹೊಸ ಕಾರು ಬಿಎಸ್-6 ಎಂಜಿನ್‌ ಜೊತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ಸ್ಪೋಟಿ ಲುಕ್ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಂಡಿದೆ.

ಕಿಯಾ ಮೋಟಾರ್ಸ್ ಅಧಿಕೃತ ವೆಬ್‌ಸೈಟ್‌ನಲ್ಲಿ ಸೇರ್ಪಡೆಗೊಂಡ ಸೊನೆಟ್

ಹೊಸ ಕಾರಿನಲ್ಲಿ ಫ್ಲ್ಯಾಟ್ ಬಾಟಮ್ ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ರೋಡ್ ಟೆಸ್ಟ್ ವೇಳೆ ಬಹಿರಂಗವಾಗಿದೆ.

ಕಿಯಾ ಮೋಟಾರ್ಸ್ ಅಧಿಕೃತ ವೆಬ್‌ಸೈಟ್‌ನಲ್ಲಿ ಸೇರ್ಪಡೆಗೊಂಡ ಸೊನೆಟ್

ಹಾಗೆಯೇ ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 10.25-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಂಡಿದ್ದು, ಹೈ ಎಂಡ್ ಮಾದರಿಯಲ್ಲಿ ಆ್ಯಂಬಿಯೆಂಟ್ ಲೈಟಿಂಗ್, ಸನ್‌ರೂಫ್ ನೀಡಲಾಗಿದೆ.

ಕಿಯಾ ಮೋಟಾರ್ಸ್ ಅಧಿಕೃತ ವೆಬ್‌ಸೈಟ್‌ನಲ್ಲಿ ಸೇರ್ಪಡೆಗೊಂಡ ಸೊನೆಟ್

ಇದರೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಕಿಯಾ ಮೋಟಾರ್ಸ್ ಕಂಪನಿಯು 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಂಡರ್ಡ್ ಆಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಫೀಚರ್ಸ್‌ಗಳಿರಲಿವೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಕಿಯಾ ಮೋಟಾರ್ಸ್ ಅಧಿಕೃತ ವೆಬ್‌ಸೈಟ್‌ನಲ್ಲಿ ಸೇರ್ಪಡೆಗೊಂಡ ಸೊನೆಟ್

ಎಂಜಿನ್ ವೈಶಿಷ್ಟ್ಯತೆ

ಹೊಸ ಸೊನೆಟ್ ಕಾರಿನಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆಗಳನ್ನು ನೀಡುವ ಸಾಧ್ಯತೆಗಳಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಿದೆ.

ಕಿಯಾ ಮೋಟಾರ್ಸ್ ಅಧಿಕೃತ ವೆಬ್‌ಸೈಟ್‌ನಲ್ಲಿ ಸೇರ್ಪಡೆಗೊಂಡ ಸೊನೆಟ್

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದುವ ಸಾಧ್ಯತೆಗಳಿದ್ದು, ಟರ್ಬೋ ಎಂಜಿನ್‌ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾಮಿಷನ್ ಹೊಂದಲಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಕಿಯಾ ಮೋಟಾರ್ಸ್ ಅಧಿಕೃತ ವೆಬ್‌ಸೈಟ್‌ನಲ್ಲಿ ಸೇರ್ಪಡೆಗೊಂಡ ಸೊನೆಟ್

ಸೊನೆಟ್ ಕಾರಿನ ಬೆಲೆ(ಅಂದಾಜು)

ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕವಾಗಿರಲಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Kia Sonet Compact SUV Listed In Indian Website. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more