Just In
Don't Miss!
- Movies
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- News
ಕರ್ನಾಟಕ ಆಕ್ರಮಿತ ಪ್ರದೇಶ ಶೀಘ್ರ ಮಹಾರಾಷ್ಟ್ರಕ್ಕೆ ಸೇರ್ಪಡೆ: ಉದ್ಧವ್ ಠಾಕ್ರೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸೊನೆಟ್ ಉತ್ಪಾದನಾ ಆವೃತ್ತಿಯ ಹೊಸ ಟೀಸರ್ ಬಿಡುಗಡೆ ಮಾಡಿದ ಕಿಯಾ ಮೋಟಾರ್ಸ್
ಕಿಯಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಸೊನೆಟ್ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಅಗಸ್ಟ್ 7ರಂದು ನಡೆಲಿರುವ ಅನಾವರಣಕ್ಕೂ ಮುನ್ನ ಹೊಸ ಕಾರಿನ ಉತ್ಪಾದನಾ ಆವೃತ್ತಿಯ ಟೀಸರ್ ಚಿತ್ರವನ್ನು ಬಹಿರಂಗಪಡಿಸಿದೆ.

ಹೊಸ ಟೀಸರ್ ಚಿತ್ರದಲ್ಲಿ ಸೊನೆಟ್ ಕಾರಿನ ಫ್ರಂಟ್ ಫಾಸಿಯಾ ವಿನ್ಯಾಸದ ಜೊತೆಗೆ ಹೆಡ್‌ಲ್ಯಾಂಪ್ ವಿನ್ಯಾಸವನ್ನು ಬಹಿರಂಗಗೊಳಿಸಲಾಗಿದ್ದು, ಹೊಸ ಕಾರು ಮುಂದಿನ ತಿಂಗಳು ಅಗಸ್ಟ್ 7ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ. ತದನಂತರವಷ್ಟೇ ಬಿಡುಗಡೆಯಾಗಲಿರುವ ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದ್ದು, ಹ್ಯುಂಡೈ ವೆನ್ಯೂ, ಮಾರುತಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.
View this post on InstagramA post shared by Kia Motors India (@kiamotorsin) on
ಹೊಸ ಕಾರು ಬಿಎಸ್-6 ಎಂಜಿನ್ ಜೊತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ಸ್ಪೋಟಿ ಲುಕ್ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಂಡಿದೆ.

ಹೊಸ ಕಾರಿನಲ್ಲಿ ಫ್ಲ್ಯಾಟ್ ಬಾಟಮ್ ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ರೋಡ್ ಟೆಸ್ಟ್ ವೇಳೆ ಬಹಿರಂಗವಾಗಿದೆ.

ಹಾಗೆಯೇ ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 10.25-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಂಡಿದ್ದು, ಹೈ ಎಂಡ್ ಮಾದರಿಯಲ್ಲಿ ಆ್ಯಂಬಿಯೆಂಟ್ ಲೈಟಿಂಗ್, ಸನ್‌ರೂಫ್ ನೀಡಲಾಗಿದೆ.

ಇದರೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಕಿಯಾ ಮೋಟಾರ್ಸ್ ಕಂಪನಿಯು 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಂಡರ್ಡ್ ಆಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಫೀಚರ್ಸ್‌ಗಳಿರಲಿವೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಎಂಜಿನ್ ವೈಶಿಷ್ಟ್ಯತೆ
ಹೊಸ ಸೊನೆಟ್ ಕಾರಿನಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆಗಳನ್ನು ನೀಡುವ ಸಾಧ್ಯತೆಗಳಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಿದೆ.

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದುವ ಸಾಧ್ಯತೆಗಳಿದ್ದು, ಟರ್ಬೋ ಎಂಜಿನ್‌ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾಮಿಷನ್ ಹೊಂದಲಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಸೊನೆಟ್ ಕಾರಿನ ಬೆಲೆ(ಅಂದಾಜು)
ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕವಾಗಿರಲಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.