2020ರ 'ವರ್ಲ್ಡ್ ಅರ್ಬನ್ ಕಾರ್ ಆಫ್ ದಿ ಇಯರ್' ಪ್ರಶಸ್ತಿ ಪಡೆದ ಕಿಯಾ ಸೊಲ್ ಇವಿ

ಜಾಗತಿಕ ಆಟೋ ಉದ್ಯಮದಲ್ಲಿನ ಬದಲಾವಣೆಗಾಗಿ ನೀಡಲಾಗುವ ವರ್ಲ್ಡ್ ಅರ್ಬನ್ ಕಾರ್ ಆಫ್ ದಿ ಇಯರ್ ಪ್ರಶಸ್ತಿ ಪಟ್ಟಿ ಪ್ರಕಟಗೊಂಡಿದ್ದು, ಪ್ರಮುಖ ಐಷಾರಾಮಿ ಕಾರುಗಳನ್ನು ಹಿಂದಿಕ್ಕಿರುವ ಕಿಯಾ ಸೊಲ್ ಎಲೆಕ್ಟ್ರಿಕ್ ಕಾರು ಪ್ರತಿಷ್ಠಿತ ಪ್ರಶಸ್ತಿಯನ್ನು ಬಾಚಿಕೊಂಡಿದೆ.

2020ರ 'ವರ್ಲ್ಡ್ ಅರ್ಬನ್ ಕಾರ್ ಆಫ್ ದಿ ಇಯರ್' ಪ್ರಶಸ್ತಿ ಪಡೆದ ಕಿಯಾ ಸೊಲ್ ಇವಿ

ವರ್ಲ್ಡ್ ಅರ್ಬನ್ ಕಾರ್ ಆಫ್ ದಿ ಇಯರ್ ಪ್ರಶಸ್ತಿಗಾಗಿ ನಡೆದ ಪೈಪೋಟಿಯಲ್ಲಿ ಮಿನಿ ಎಲೆಕ್ಟ್ರಿಕ್ ಮತ್ತು ಫೋರ್ಕ್ಸ್‌ವ್ಯಾಗನ್ ಟಿ-ಕ್ರಾಸ್ ಹಿಂದಿಕ್ಕಿದ ಕಿಯಾ ಸೊಲ್ ಎಲೆಕ್ಟ್ರಿಕ್ ಕಾರು ಮೊದಲ ಪ್ರಶಸ್ತಿ ಬಾಚಿಕೊಂಡಿದ್ದು, ಬೆಲೆ, ಗುಣಮಟ್ಟ ಮತ್ತು ಎಂಜಿನ್ ಕಾರ್ಯಕ್ಷಮತೆಯ ಆಧಾರದ ಮೇಲೆ ಈ ಪ್ರಶಸ್ತಿಯನ್ನು ಹಂಚಿಕೆ ಮಾಡಲಾಗಿದೆ. ಇನ್ನು ಸೊಲ್ ಇವಿ ಕಾರು ಸದ್ಯ ದಕ್ಷಿಣ ಕೊರಿಯಾ, ಯುಎಸ್ಎ ಮತ್ತು ಯುರೋಪಿನ ಕೆಲವೇ ರಾಷ್ಟ್ರಗಳಲ್ಲಿ ಖರೀದಿಗೆ ಲಭ್ಯವಿದ್ದು, ಈ ಕಾರು ಶೀಘ್ರದಲ್ಲೇ ಭಾರತದಲ್ಲೂ ಬಿಡುಗಡೆಯಾಗಲಿದೆ.

2020ರ 'ವರ್ಲ್ಡ್ ಅರ್ಬನ್ ಕಾರ್ ಆಫ್ ದಿ ಇಯರ್' ಪ್ರಶಸ್ತಿ ಪಡೆದ ಕಿಯಾ ಸೊಲ್ ಇವಿ

ಕಿಯಾ ಮೋಟಾರ್ಸ್ ಸಂಸ್ಥೆಯು ಭಾರತದಲ್ಲಿ ಹಲವಾರು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಸಾಮಾನ್ಯ ಕಾರು ಮಾದರಿಗಳಲ್ಲದೇ ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರು ಆವೃತ್ತಿಗಳನ್ನು ಸಹ ಬಿಡುಗಡೆಗೊಳಿಸಲು ಭರ್ಜರಿ ಸಿದ್ದತೆ ನಡೆಸಿದೆ.

2020ರ 'ವರ್ಲ್ಡ್ ಅರ್ಬನ್ ಕಾರ್ ಆಫ್ ದಿ ಇಯರ್' ಪ್ರಶಸ್ತಿ ಪಡೆದ ಕಿಯಾ ಸೊಲ್ ಇವಿ

ಸೆಲ್ಟೊಸ್ ಮತ್ತು ಕಾರ್ನಿವಾಲ್ ಮೂಲಕ ಗ್ರಾಹಕರ ಗಮನಸೆಳೆಯುವಲ್ಲಿ ಯಶಸ್ವಿಯಾಗಿರುವ ಕಿಯಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಎಲೆಕ್ಟ್ರಿಕ್ ಕಾರು ಮಾದರಿಗಳ ಮಾರಾಟಕ್ಕೂ ಚಾಲನೆ ನೀಡಲಿದ್ದು, ತನ್ನ ಬಹುನೀರಿಕ್ಷಿತ ನಿರೋ ಎಲೆಕ್ಟ್ರಿಕ್ ಎಸ್‌ಯುವಿ ಜೊತೆಗೆ ಸೊಲ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆವೃತ್ತಿಯನ್ನು ಸಹ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿತ್ತು.

2020ರ 'ವರ್ಲ್ಡ್ ಅರ್ಬನ್ ಕಾರ್ ಆಫ್ ದಿ ಇಯರ್' ಪ್ರಶಸ್ತಿ ಪಡೆದ ಕಿಯಾ ಸೊಲ್ ಇವಿ

ನಿರೋ ಮತ್ತು ಸೊಲ್ ಇವಿ ಕಾರು ಈಗಾಗಲೇ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದೀಗ ಭಾರತದಲ್ಲೂ ಹೊಸ ಕಾರು ಬಿಡುಗಡೆಗೊಳ್ಳಲು ಅಂತಿಮ ಹಂತದ ಸಿದ್ದತೆಯಲ್ಲಿವೆ. ಸಹೋದರ ಸಂಸ್ಥೆ ಹ್ಯುಂಡೈಗಿಂತಲೂ ಅತ್ಯುತ್ತಮ ಕಾರು ಉತ್ಪನ್ನಗಳನ್ನು ಹೊಂದಿರುವ ಕಿಯಾ ಕಂಪನಿಯು ಭಾರತದಲ್ಲಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಅಗ್ಗದ ಬೆಲೆಯಲ್ಲಿ ಉತ್ತಮ ಮಾದರಿಯ ಹ್ಯಾಚ್‌ಬ್ಯಾಕ್, ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಯೋಜನೆಯಲ್ಲಿದೆ.

2020ರ 'ವರ್ಲ್ಡ್ ಅರ್ಬನ್ ಕಾರ್ ಆಫ್ ದಿ ಇಯರ್' ಪ್ರಶಸ್ತಿ ಪಡೆದ ಕಿಯಾ ಸೊಲ್ ಇವಿ

ಸೆಲ್ಟೊಸ್ ನಂತರ ಕಾರ್ನಿವಾಲ್ ಕಾರನ್ನು ಬಿಡುಗಡೆಗೊಳಿಸಿರುವ ಕಿಯಾ ಸಂಸ್ಥೆಯು ಮುಂದಿನ ಕಾರು ಮಾದರಿಯಾಗಿ ಎಲೆಕ್ಟ್ರಿಕ್ ಕಾರು ಆವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದು, ಸೊಲ್ ಹ್ಯಾಚ್‌ಬ್ಯಾಕ್ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಬಿಡುಗಡೆಯಾಗುತ್ತಿರುವುದು ಭಾರೀ ನೀರಿಕ್ಷೆ ಹುಟ್ಟುಹಾಕಿದೆ.

2020ರ 'ವರ್ಲ್ಡ್ ಅರ್ಬನ್ ಕಾರ್ ಆಫ್ ದಿ ಇಯರ್' ಪ್ರಶಸ್ತಿ ಪಡೆದ ಕಿಯಾ ಸೊಲ್ ಇವಿ

ಪ್ರತಿ ಚಾರ್ಜ್‌ಗೆ 400ಕಿ.ಮೀ ನಿಂದ 450 ಕಿ.ಮೀ ಮೈಲೇಜ್ ಹೊಂದಿರುವ ಸೊಲ್ ಕಾರು ರೂ.15 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಐಷಾರಾಮಿ ಫೀಚರ್ಸ್ ಹೊಂದಿರುವ ನಿರೋ ಕಾರು ಸೊಲ್ ಇವಿ ಕಾರಿಗಿಂತಲೂ ತುಸು ದುಬಾರಿಯಾಗಿರಲಿದೆ.

2020ರ 'ವರ್ಲ್ಡ್ ಅರ್ಬನ್ ಕಾರ್ ಆಫ್ ದಿ ಇಯರ್' ಪ್ರಶಸ್ತಿ ಪಡೆದ ಕಿಯಾ ಸೊಲ್ ಇವಿ

ನಿರೋ ಕಾರು ಸಹ ಪ್ರತಿ ಚಾರ್ಜ್‌ಗೆ 450 ಕಿ.ಮೀ ನಿಂದ 480 ಮೈಲೇಜ್‌ನೊಂದಿಗೆ ಹಲವು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿರಲಿದ್ದು, ಕೇವಲ 50 ನಿಮಿಷಗಳಲ್ಲಿ ಶೇ.80 ರಷ್ಟು ಚಾರ್ಜ್ ಮಾಡಿಕೊಳ್ಳಬಹುದಾದ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಈ ಕಾರಿನಲ್ಲಿದೆ.

2020ರ 'ವರ್ಲ್ಡ್ ಅರ್ಬನ್ ಕಾರ್ ಆಫ್ ದಿ ಇಯರ್' ಪ್ರಶಸ್ತಿ ಪಡೆದ ಕಿಯಾ ಸೊಲ್ ಇವಿ

ಸುಧಾರಿತ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳಿಂದಾಗಿ ನಿರೋ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.25 ಲಕ್ಷದಿಂದ ರೂ.30 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಭಾರತೀಯ ಮಾರುಕಟ್ಟೆಗಾಗಿ ಕೆಲವು ತಾಂತ್ರಿಕ ಅಂಶಗಳನ್ನು ಬದಲಾವಣೆ ಮಾಡುವ ಸಾಧ್ಯತೆಗಳಿವೆ.

2020ರ 'ವರ್ಲ್ಡ್ ಅರ್ಬನ್ ಕಾರ್ ಆಫ್ ದಿ ಇಯರ್' ಪ್ರಶಸ್ತಿ ಪಡೆದ ಕಿಯಾ ಸೊಲ್ ಇವಿ

ಇನ್ನು ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಗಾಗಿ ಹ್ಯುಂಡೈ ಜೊತೆಗೂಡಿರುವ ಕಿಯಾ ಮೋಟಾರ್ಸ್ ಕಂಪನಿಯು ಸ್ವತಂತ್ರವಾಗಿ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ದಿಗೊಳಿಸಿ ಮಾರಾಟ ಮಾಡಲಿದ್ದರೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಳ್ಳಲಿವೆ.

Most Read Articles

Kannada
English summary
Kia Soul EV Wins The ‘2020 World Urban Car Of The Year’ Award. Read in Kannada.
Story first published: Thursday, April 9, 2020, 15:21 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X