ಭಾರತದಿಂದ ಅತಿಹೆಚ್ಚು ರಫ್ತುಗೊಳ್ಳುವ ಕಾರುಗಳ ಪೈಕಿ ಸೆಲ್ಟೊಸ್‌ಗೆ ಮೂರನೇ ಸ್ಥಾನ..

ಮೇಕ್ ಇನ್ ಇಂಡಿಯಾ ಯೋಜನೆಯಿಂದಾಗಿ ವಿದೇಶಿ ಕಾರು ಉತ್ಪಾದನಾ ಸಂಸ್ಥೆಗಳು ಜಾಗತಿಕ ಮಾರುಕಟ್ಟೆಗಳಿಗೆ ಹೆಚ್ಚು ರಫ್ತು ಕೈಗೊಳ್ಳುತ್ತಿದ್ದು, ಇದೀಗ ಕಿಯಾ ಮೋಟಾರ್ಸ್ ಸಂಸ್ಥೆಯು 2019ರ ಡಿಸೆಂಬರ್ ಅವಧಿಯಲ್ಲಿ 6,341 ಯುನಿಟ್ ಸೆಲ್ಟೊಸ್ ರಫ್ತು ಮಾಡುವ ಮೂಲಕ ರಫ್ತು ಪ್ರಮಾಣದಲ್ಲಿ ಮೂರನೇ ಸ್ಥಾನಕ್ಕೇರಿದೆ.

ಭಾರತದಿಂದ ಅತಿಹೆಚ್ಚು ರಫ್ತುಗೊಳ್ಳುವ ಕಾರುಗಳ ಪೈಕಿ ಸೆಲ್ಟೊಸ್‌ಗೆ ಮೂರನೇ ಸ್ಥಾನ..

ಸದ್ಯ ಭಾರತದಿಂದ ಮಾರುತಿ ಸುಜುಕಿ ಮತ್ತು ಫೋರ್ಡ್ ಸಂಸ್ಥೆಗಳು ಅತಿ ಹೆಚ್ಚು ಕಾರುಗಳನ್ನು ರಫ್ತು ಕೊಳ್ಳುತ್ತಿದ್ದು, ಇದೀಗ ಕಿಯಾ ಸಂಸ್ಥೆಯು ಸೆಲ್ಟೊಸ್ ಆವೃತ್ತಿಯನ್ನು ರಫ್ತು ಮಾಡುತ್ತಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಕಾರುಗಳ ಪೈಕಿ ಸೆಲ್ಟೊಸ್ ಕಾರು ಸದ್ಯ ಅಗ್ರಸ್ಥಾನದಲ್ಲಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಪ್ರಮಾಣದಲ್ಲಿ ದೇಶಿಯ ಮಾರಕಟ್ಟೆಯಲ್ಲಿ ಮಾತ್ರವಲ್ಲದೇ ವಿದೇಶಿಯ ಮಾರುಕಟ್ಟೆಯಲ್ಲೂ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಭಾರತದಿಂದ ಅತಿಹೆಚ್ಚು ರಫ್ತುಗೊಳ್ಳುವ ಕಾರುಗಳ ಪೈಕಿ ಸೆಲ್ಟೊಸ್‌ಗೆ ಮೂರನೇ ಸ್ಥಾನ..

ಇನ್ನು ಸೆಲ್ಟೊಸ್ ಕಾರು ಮಾರಾಟದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಳ್ಳುತ್ತಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗರಿಷ್ಠ ಬೇಡಿಕೆಯೊಂದಿಗೆ ನಂ.1 ಸ್ಥಾನಕ್ಕೇರಿದ್ದು, ಅತಿ ಕಡಿಮೆ ಅವಧಿಯಲ್ಲಿ 50 ಸಾವಿರ್ ಯುನಿಟ್ ಮಾರಾಟ ಮಾಡುವ ಮೂಲಕ ಅಚ್ಚರಿಯ ಬೆಳವಣೆಗೆ ಸಾಧಿಸಿದೆ.

ಭಾರತದಿಂದ ಅತಿಹೆಚ್ಚು ರಫ್ತುಗೊಳ್ಳುವ ಕಾರುಗಳ ಪೈಕಿ ಸೆಲ್ಟೊಸ್‌ಗೆ ಮೂರನೇ ಸ್ಥಾನ..

ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿರುವ ಸೆಲ್ಟೊಸ್ ಕಾರು ಆಕರ್ಷಕ ಬೆಲೆಗಳೊಂದಿಗೆ ಎಸ್‌ಯುವಿ ಪ್ರಿಯರ ನೆಚ್ಚಿನ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಭಾರತದಿಂದ ಅತಿಹೆಚ್ಚು ರಫ್ತುಗೊಳ್ಳುವ ಕಾರುಗಳ ಪೈಕಿ ಸೆಲ್ಟೊಸ್‌ಗೆ ಮೂರನೇ ಸ್ಥಾನ..

ಆಕರ್ಷಕ ಬೆಲೆ, ಸುಧಾರಿತ ತಂತ್ರಜ್ಞಾನ ಬಳಕೆಯಿಂದಾಗಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆ ಹೊಂದುತ್ತಿರುವ ಕಿಯಾ ಸೆಲ್ಟೊಸ್ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.89 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 17.34 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ. ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 6 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 9 ವೆರಿಯೆಂಟ್‌ಗಳನ್ನು ಹೊಂದಿದೆ.

ಭಾರತದಿಂದ ಅತಿಹೆಚ್ಚು ರಫ್ತುಗೊಳ್ಳುವ ಕಾರುಗಳ ಪೈಕಿ ಸೆಲ್ಟೊಸ್‌ಗೆ ಮೂರನೇ ಸ್ಥಾನ..

ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.

ಭಾರತದಿಂದ ಅತಿಹೆಚ್ಚು ರಫ್ತುಗೊಳ್ಳುವ ಕಾರುಗಳ ಪೈಕಿ ಸೆಲ್ಟೊಸ್‌ಗೆ ಮೂರನೇ ಸ್ಥಾನ..

ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದೆ.

ಭಾರತದಿಂದ ಅತಿಹೆಚ್ಚು ರಫ್ತುಗೊಳ್ಳುವ ಕಾರುಗಳ ಪೈಕಿ ಸೆಲ್ಟೊಸ್‌ಗೆ ಮೂರನೇ ಸ್ಥಾನ..

ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದೆ.

ಭಾರತದಿಂದ ಅತಿಹೆಚ್ಚು ರಫ್ತುಗೊಳ್ಳುವ ಕಾರುಗಳ ಪೈಕಿ ಸೆಲ್ಟೊಸ್‌ಗೆ ಮೂರನೇ ಸ್ಥಾನ..

ಸುರಕ್ಷಾ ಸೌಲಭ್ಯಗಳು

ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

ಭಾರತದಿಂದ ಅತಿಹೆಚ್ಚು ರಫ್ತುಗೊಳ್ಳುವ ಕಾರುಗಳ ಪೈಕಿ ಸೆಲ್ಟೊಸ್‌ಗೆ ಮೂರನೇ ಸ್ಥಾನ..

ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು,ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.

Most Read Articles

Kannada
English summary
KIA Motors India has dispatched 6341 units Seltos SUVs in December 2019 to the overseas market.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X