ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಕಿಯಾ ಮೋಟಾರ್ಸ್ ಕಂಪನಿಯು ಹೊಸ ಸೊನೆಟ್ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಮುಂಬರುವ ಅಗಸ್ಟ್ ಕೊನೆಯಲ್ಲಿ ಅಥವಾ ಸೆಪ್ಟೆಂಬರ್‌ ಆರಂಭದಲ್ಲಿ ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಕರೋನಾ ವೈರಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಾಕ್‌ಡೌನ್ ವಿಸ್ತರಣೆಯಾಗುತ್ತಿರುವುದರಿಂದ ಬಹುತೇಕ ವಾಣಿಜ್ಯ ಚಟುವಟಿಕೆಗಳು ಮಂದಗತಿಯಲ್ಲಿ ಸಾಗುತ್ತಿದ್ದು, ಆಟೋ ಉದ್ಯಮ ಕೂಡಾ ವೈರಸ್ ಭೀತಿ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಉದ್ಯಮ ವ್ಯವಹಾರಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಿರುವಾಗ ವಿವಿಧ ಕಂಪನಿಗಳ ಹಲವಾರು ಹೊಸ ಕಾರುಗಳ ಬಿಡುಗಡೆಯು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದ್ದು, ಕಿಯಾ ಸೊನೆಟ್ ಕಾರು ಕೂಡಾ ಈ ವರ್ಷ ಬಿಡುಗಡೆಯಾಗುವುದು ಅನುಮಾನ ಎನ್ನಲಾಗಿತ್ತು.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಸೊನೆಟ್ ಕಾರಿನ ಬಿಡುಗಡೆಯು 2021ಕ್ಕೆ ಮುಂದೂಡಿಕೆಯಾಗುತ್ತಿದೆ ಎನ್ನುವ ಕುರಿತು ಸ್ಪಷ್ಟಪಡಿಸಿರುವ ಕಿಯಾ ಕಂಪನಿಯು ಸೊನೆಟ್ ಕಾರು ಈ ಮೊದಲು ನಿಗದಿಪಡಿಸಿದ ಅವಧಿಯಲ್ಲೇ ಬಿಡುಗಡೆಯಾಗಲಿದ್ದು, ಬಿಡುಗಡೆ ಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರನ್ನು ಮೊದಲ ಬಾರಿಗೆ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದ್ದ ಕಿಯಾ ಕಂಪನಿಯು ಇದೀಗ ಬಿಡುಗಡೆಯಾಗಿ ಅಂತಿಮ ಹಂತದ ಸಿದ್ದತೆ ನಡೆಸಲಾಗುತ್ತಿದ್ದು, ಹೊಸ ಕಾರು ಬಿಎಸ್-6 ಎಂಜಿನ್‌ ಜೊತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಸ್ಪೋಟಿ ಲುಕ್ ಜೊತೆಗೆ ಹಲವು ಐಷಾರಾಮಿ ಫೀಚರ್ಸ್‌ಗಳನ್ನು ಹೊಂದಿರುವ ಸೊನೆಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಎಂಜಿನ್ ವೈಶಿಷ್ಟ್ಯತೆ

ಹೊಸ ಸೊನೆಟ್ ಕಾರಿನಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆಗಳನ್ನು ನೀಡುವ ಸಾಧ್ಯತೆಗಳಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದುವ ಸಾಧ್ಯತೆಗಳಿದ್ದು, ಟರ್ಬೋ ಎಂಜಿನ್‌ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾಮಿಷನ್ ಹೊಂದಲಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಹಾಗೆಯೇ ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಫ್ಲ್ಯಾಟ್ ಬಾಟಮ್ ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ರೋಡ್ ಟೆಸ್ಟ್ ವೇಳೆ ಬಹಿರಂಗವಾಗಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಇದರೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಕಿಯಾ ಮೋಟಾರ್ಸ್ ಕಂಪನಿಯು 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಂಡರ್ಡ್ ಆಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಫೀಚರ್ಸ್‌ಗಳಿರಲಿವೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಸೊನೆಟ್ ಕಾರಿನ ಬೆಲೆ(ಅಂದಾಜು)

ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕವಾಗಿರಲಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

Article Published On: Wednesday, May 20, 2020, 11:50 [IST]
English summary
KIA to launch Sonnet Compact SUV in 2020 itself. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+