ಆಟೋ ಎಕ್ಸ್‌ಪೋ 2020: ಕಿಯಾ ಐಷಾರಾಮಿ ಸ್ಪೋರ್ಟಿ ಕಂಪ್ಯಾಕ್ಟ್ ಕ್ರಾಸ್ಓವರ್ ಅನಾವರಣ
ಕಿಯಾ ಮೋಟಾರ್ಸ್ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಹಲವಾರು ಹೊಸ ಕಾರು ಮಾದರಿಗಳನ್ನು ಪರಿಚಯಿಸುತ್ತಿದ್ದು, ಸೆಲ್ಟೊಸ್ ಮತ್ತು ಕಾರ್ನಿವಾಲ್ ನಂತರ ಮತ್ತಷ್ಟು ಹೊಸ ಕಾರು ಉತ್ಪನ್ನಗಳೊಂದಿಗೆ ಗ್ರಾಹಕರ ಆಕರ್ಷಿಸುತ್ತಿದೆ.

ಸೆಲ್ಟೊಸ್ ಮತ್ತು ಕಾರ್ನಿವಾಲ್ ಕಾರನ್ನು ಮಾತ್ರವೇ ಬಿಡುಗಡೆ ಮಾಡಿರುವ ಕಿಯಾ ಸಂಸ್ಥೆಯು ಶೀಘ್ರದಲ್ಲೇ ಹೊಸ ಮಾದರಿ ಹ್ಯಾಚ್‌ಬ್ಯಾಕ್, ಸೆಡಾನ್, ಎಸ್‌ಯುವಿ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಇದರ ನಡುವೆ ಭಾರತದಲ್ಲಿ ಮೊದಲ ಬಾರಿಗೆ ಸ್ಪೋರ್ಟಿ ಕಂಪ್ಯಾಕ್ಟ್ ಕ್ರಾಸ್ಓವರ್ ಕಾರು ಮಾದರಿಯೊಂದನ್ನು 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದೆ.

ಯುರೋಪ್ ಮಾರುಕಟ್ಟೆಯಲ್ಲಿ ಸದ್ಯ ಭಾರೀ ಬೇಡಿಕೆ ಹೊಂದಿರುವ ಎಕ್ಸಿಡ್ ಸ್ಪೋರ್ಟಿ ಕಂಪ್ಯಾಕ್ಟ್ ಕ್ರಾಸ್ಓವರ್ ಕಾರನ್ನು ಭಾರತದಲ್ಲೂ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಮೊದಲ ಬಾರಿಗೆ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದೆ.

ಸೆಡಾನ್ ಮತ್ತು ಎಸ್‌ಯುವಿ ನಡುವಿನ ಸ್ಥಾನ ಹೊಂದಿರುವ ಎಕ್ಸಿಡ್ ಕಾರು ವಿನೂತನ ವಿನ್ಯಾಸದೊಂದಿಗೆ ಸ್ಪೋರ್ಟಿ ಕಂಪ್ಯಾಕ್ಟ್ ಕ್ರಾಸ್ಓವರ್ ವೈಶಿಷ್ಟ್ಯತೆ ಪಡೆದುಕೊಂಡಿದ್ದು, ಐಷಾರಾಮಿ ಕಾರು ವಿಭಾಗದಲ್ಲಿ ಈ ಕಾರು ಗುರುತಿಸಿಕೊಂಡಿದೆ.

ಹೊಸ ಎಕ್ಸಿಕ್ ಕಾರು 4,395-ಎಂಎಂ ಉದ್ದ, 1,826-ಎಂಎಂ ಅಗಲ, 1,495-ಎಂಎಂ ಎತ್ತರ ಪಡೆದುಕೊಂಡಿದ್ದು, ಹೋಂಡಾ ಸಿಆರ್-ವಿ ಮಾದರಿಯಲ್ಲಿ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಮಾಡಲಾಗಿದೆ. ಸದ್ಯ ಯುರೋಪ್‌ನಲ್ಲಿ ಮಾತ್ರವೇ ಮಾರಾಟವಾಗುತ್ತಿರುವ ಎಕ್ಸಿಡ್ ಕಾರು ಗ್ರಾಹಕರ ಬೇಡಿಕೆಯೆಂತೆ ನಾಲ್ಕು ಎಂಜಿನ್ ಆಯ್ಕೆಯನ್ನು ಹೊಂದಿದೆ.

1.0-ಲೀಟರ್ ಟರ್ಬೋ ಪೆಟ್ರೋಲ್, 14.-ಲೀಟರ್ ಪೆಟ್ರೋಲ್, 1.6-ಲೀಟರ್ ಡೀಸೆಲ್, 1.6-ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಪೆಟ್ರೋಲ್ ಹೈಬ್ರಿಡ್ ಆವೃತ್ತಿಯು ಹೈ ಎಂಡ್ ಮಾದರಿಯಾಗಿ ಮಾರಾಟವಾಗುತ್ತಿದೆ.

ಆದರೆ ಭಾರತದಲ್ಲಿ ಬಿಡುಗಡೆಯಾಗಲಿರುವ ಎಕ್ಸಿಡ್ ಕಾರು ಸೆಲ್ಟೊಸ್ ಮಾದರಿಯಲ್ಲೇ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆಯುವ ಸಾಧ್ಯತೆಗಳಿದ್ದು, ಬೆಲೆ ತಗ್ಗಿಸುವುದಕ್ಕಾಗಿ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಕಡಿತಗೊಳಿಸುವ ಸಾಧ್ಯತೆಗಳಿವೆ.

ಅಂದಾಜು ಬೆಲೆ(ಎಕ್ಸ್‌ಶೋರೂಂ ಪ್ರಕಾರ)
ಸ್ಪೋರ್ಟಿ ಕಂಪ್ಯಾಕ್ಟ್ ಕ್ರಾಸ್ಓವರ್ ಮಾದರಿಯಾಗಿರುವ ಎಕ್ಸಿಡ್ ಕಾರು ಯುರೋಪಿನ್ ಪ್ರಮುಖ ಮಾರುಕಟ್ಟೆಗಳಲ್ಲಿ ಭಾರತೀಯ ರೂಪಾಯಿ ಲೆಕ್ಕಾಚಾರದಲ್ಲಿ ಆರಂಭಿಕವಾಗಿ 20 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.29 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.

ಆದರೆ ಭಾರತದಲ್ಲಿ ಹೊಸ ಕಾರಿನ ಬೆಲೆ ಕಡಿತಗೊಳಿಸಲು ಕೆಲವು ಪ್ರೀಮಿಯಂ ಕಡಿತಗೊಳಿಸುವ ಸಾಧ್ಯತೆಗಳಿದ್ದು, ಹೊಸ ಕಾರು ಸೆಲ್ಟೊಸ್ ಎಂಜಿನ್‌ನೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ.18 ಲಕ್ಷದಿಂದ ರೂ.22 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗಲಿದೆ.


Click it and Unblock the Notifications








