ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ 2020ರ ಲ್ಯಾಂಡ್ ರೋವರ್ ಡಿಫೆಂಡರ್
ಲ್ಯಾಂಡ್ ರೋವರ್ ಕಂಪನಿಯು ತನ್ನ ಬಹುನಿರೀಕ್ಷಿತ ಡಿಫೆಂಡರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಲ್ಯಾಂಡ್ ರೋವರ್ ಡಿಫೆಂಡರ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೆಚ್ಚುಗೆಯನ್ನು ಪಡೆದುಕೊಂಡ ಐಕಾನಿಕ್ ಆಫ್-ರೋಡ್ ಎಸ್‍ಯುವಿಯಾಗಿದೆ.

ಯುರೋ ಎನ್‌ಸಿಎಪಿ ಇತ್ತೀಚೆಗೆ ನಡೆಸಿದ ಕ್ರ್ಯಾಶ್ ಟೆಸ್ಟ್‌ನಲ್ಲಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯು 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದುಕೊಂಡಿದೆ. ಹೊಸ ಲ್ಯಾಂಡ್ ರೋವರ್ ಡಿಫೆಂಡರ್ 110 ಎಸ್‍ಯುವಿಯನ್ನು ಕ್ರ್ಯಾಶ್ ಟೆಸ್ಟ್ ನಲ್ಲಿ ಬಳಸಲಾಗಿದೆ. ಲ್ಯಾಂಡ್ ರೋವರ್ ಡಿಫೆಂಡರ್ ಕ್ರ್ಯಾಶ್ ಟೆಸ್ಟ್‌ನಲ್ಲಿ ಅತ್ಯುತ್ತಮ ರೇಟಿಂಗ್ ಅನ್ನು ಪಡೆದುಕೊಳ್ಳುವ ಮೂಲ ಸುರಕ್ಷತಾ ಎಸ್‍ಯುವಿ ಎಂದು ಎನಿಸಿಕೊಂಡಿದೆ.

ಯುರೋ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ನಲ್ಲಿ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ವಯಸ್ಕ ಮತ್ತು ಮಕ್ಕಳ ರಕ್ಷಣೆಗಾಗಿ ಶೇ.85 ಅಂಕ, ಸೇಫ್ಟಿ ಅಸಿಸ್ಟ್ ಶೇ,79 ರಷ್ಟು ಅಂಕ ಮತ್ತು ದುರ್ಬಲ ರಸ್ತೆ ವಿಭಾಗದಲ್ಲಿ ಶೇ.71 ರಷ್ಟು ಅಂಕವನ್ನು ಪಡೆದುಕೊಂಡಿದೆ. ಒಟ್ಟಾರೆಯಾಗಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯು 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದುಕೊಂಡಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಈ ಜನಪ್ರಿಯ ಲ್ಯಾಂಡ್ ರೋವರ್ ಡಿಫೆಂಡರ್ ಹೊಸ ಡಿ7ಎಕ್ಸ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಮತ್ತು ಮೊನೊಕೊಕ್ ಚಾಸಿಸ್ ಅನ್ನು ಹೊಂದಿದೆ. ಲ್ಯಾಂಡ್ ರೋವರ್ ಕಂಪನಿಯು ತನ್ನ ಐಕಾನಿಕ್ ಡಿಫೆಂಡರ್ ಎಸ್‍ಯುವಿ ಆಪ್-ರೋಡ್ ಗಾಗಿ ಅಕ್ಸೆಸರೀಸ್ ಗಳು ಕೂಡ ಲಭ್ಯವಿದೆ. ಡಿಫೆಂಡರ್ ಎಸ್‍ಯುವಿಗೆ ಎಕ್ಸ್‌ಪೆಡಿಶನ್ ಪ್ಯಾಕ್, ಕಂಟ್ರಿ ಪ್ಯಾಕ್, ಅರ್ಬನ್ ಪ್ಯಾಕ್ ಮತ್ತು ಅಡ್ವೆಂಚರ್ ಪ್ಯಾಕ್ ಎಂಬ ನಾಲ್ಕು ಆಫ್-ರೋಡ್ ಅಕ್ಸೆಸರೀಸ್ ಪ್ಯಾಕೇಜ್‌ಗಳ ಆಯ್ಕೆಯನ್ನು ಹೊಂದಿದೆ.

ಹೊಸ ಡಿಫೆಂಡರ್ ಭಾರತಕ್ಕೆ ಕಂಪ್ಲೀಟ್ ಬಿಲ್ಟ್ ಯುನಿಟ್ (ಸಿಬಿಯು) ಆಗಿ ತರಲಾಗಿದೆ. ಇದು ಬೇಸ್, ಎಸ್, ಎಸ್ಇ, ಹೆಚ್ಎಸ್ಇ ಮತ್ತು ಫಸ್ಟ್ ಎಡಿಷನ್ ಎಂಬ ಐದು ರೂಪಾಂತರಗಳಲ್ಲಿ ಲಭ್ಯವಿದೆ. 3-ಡೋರಿನ ಮಾದರಿಯನ್ನು ಡಿಫೆಂಡರ್ 90 ಆದರೆ 5-ಡೋರಿನ ಮಾದರಿಯು ಡಿಫೆಂಡರ್ 110 ಎಂದು ಕರೆಯಲಾಗುತ್ತದೆ.
MOST READ: ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಲ್ಯಾಂಡ್ ರೋವರ್ ಡಿಫೆಂಡರ್ 5,018 ಎಂಎಂ ಉದ್ದ, 2,105 ಎಂಎಂ ಅಗಲ ಮತ್ತು 1,967 ಎಂಎಂ ಎತ್ತರವನ್ನು ಹೊಂದಿದೆ. ಈ ಎಸ್‍ಯುವಿಯು 3,022 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಡಿಸಿ 100 ಡಿಫೆಂಡರ್ ಕಾನ್ಸೆಪ್ಟ್ ನಿಂದ ಹೆಚ್ಚು ಪ್ರೇರಿತವಾಗಿದೆ ಮೂಲ ಆವೃತ್ತಿಯಿಂದ ಸಿಲೂಯೆಟ್ ಅನ್ನು ಉಳಿಸಿಕೊಂಡಿದೆ.

ಇಂಡಿಯಾ-ಸ್ಪೆಕ್ ಡಿಫೆಂಡರ್ ಎಸ್‍ಯುವಿಯಲ್ಲಿ 2.0-ಲೀಟರ್, ನಾಲ್ಕು ಸಿಲಿಂಡರ್, ಬಿಎಸ್ 6 ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 92 ಬಿಹೆಚ್‌ಪಿ ಮತ್ತು 400 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತದೆ. ಹೊಸ ಡಿಫೆಂಡರ್ ಲ್ಯಾಂಡ್ ರೋವರ್‌ನ ಟೆರೈನ್ ರೆಸ್ಪಾನ್ಸ್ 2 ಸಿಸ್ಟಂ ಅನ್ನು ಸಹ ಪಡೆಯುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಇದರ ಟ್ಯಾಕ್ಷನ್ ಅತ್ಯುತ್ತಮವಾಗಿಸಲು ಕಾನ್ಫಿಗರ್ ಮಾಡಬಹುದು ಮತ್ತು ಆಫ್-ರೋಡ್ಗೆ ಹೋಗುವಾಗ ಆಟೋಮ್ಯಾಟಿಕ್ 145 ಎಂಎಂ ನ್ಯೂಮ್ಯಾಟಿಕ್ ಸಸ್ಪೆಂಕ್ಷನ್ ಮತ್ತು ಗ್ರೌಂಡ್ ಕ್ಲಿಯರೆನ್ಸ್ 50 ಎಂಎಂ ವರಗೆ ಹೆಚ್ಚಾಗುತ್ತದೆ.

ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯಲ್ಲಿ ಟಾರ್ಕ್ ವೆಕ್ಟರಿಂಗ್, ಕ್ರೂಸ್ ಕಂಟ್ರೋಲ್, ಆಲ್ ವ್ಹೀಲ್ ಡ್ರೈವ್, ಹಿಲ್ ಲಾಂಚ್ ಅಸಿಸ್ಟ್, ಟ್ರ್ಯಾಕ್ಷನ್ ಕಂಟ್ರೋಲ್, ಅಡಾಪ್ಟಿವ್ ಡೈನಾಮಿಕ್ಸ್, ಟ್ವಿನ್-ಸ್ಪೀಡ್ ಟ್ರಾನ್ಸ್ಫರ್ ಬಾಕ್ಸ್ ಮತ್ತು ಹೆಚ್ಚಿನ ಎಲೆಕ್ಟ್ರಾನಿಕ್ ಫೀಚರ್ ಗಳನ್ನು ಒಳಗೊಂಡಿದೆ. ಡಿಫೆಂಡರ್‌ನ ನ್ಯೂಮ್ಯಾಟಿಕ್ ಸಸ್ಪೆಂಕ್ಷನ್ ಹೊಂದಿದ ರೂಪಾಂತರವು ಗರಿಷ್ಠ 291 ಮಿಮೀ ಗ್ರೌಂಡ್ ಕ್ಲಿಯರೆನ್ಸ್ ಪಡೆಯುತ್ತದೆ.

ಈ ಎಸ್‍ಯುವಿಯನ್ನು ಸಕ್ರಿಯಗೊಳಿಸಲು ಎರಡು ಸಿಮ್ ಕಾರ್ಡ್‌ಗಳನ್ನು ಸಹ ಹೊಂದಿರುತ್ತದೆ. ಓವರ್-ದಿ-ಏರ್ (ಒಟಿಎ) ನವೀಕರಣಗಳು. ವಿಭಿನ್ನ ಡೇಟಾವನ್ನು ಪ್ರದರ್ಶಿಸಲು ಕಾನ್ಫಿಗರ್ ಮಾಡಬಹುದಾದ 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಹೊಂದಿದೆ.


Click it and Unblock the Notifications








