2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

2020ರ ವರ್ಷದಲ್ಲಿ ಕೊರೋನಾ ಹೊಡೆತಕ್ಕೆ ಎಲ್ಲ ಕ್ಷೇತ್ರಗಳಲ್ಲಿ ನೆಗೆಟಿವ್‌ ಪರಿಣಾಮಗಳೇ ಬೀರಿದೆ. ಇದಕ್ಕೆ ಆಟೋಮೊಬೈಲ್ ಕ್ಷೇತ್ರವು ಕೂಡ ಹೊರತಾಗಿಲ್ಲ. ಆದರೆ ಹಬ್ಬಗಳ ಸೀಸನ್ ನಲ್ಲಿ ಆಟೋಮೊಬೈಲ್ ಕ್ಷೇತ್ರವು ಚೇತರಿಕೆಯ ಹಾದಿಯಲ್ಲಿ ಸಾಗುತ್ತಿದೆ.

2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

ಈ ವರ್ಷ ಹಲವು ಜನಪ್ರಿಯ ಮಾದರಿಗಳು ಕರೋನಾ ಭೀತಿಯ ನಡುವೆ ಬಿಡುಗಡೆಗೊಂಡಿವೆ. ಕೆಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಕೆಲವು ಮಾದರಿಗಳ ಬಿಡುಗಡೆಯನ್ನು ಮುಂದಿನ ವರ್ಷಕ್ಕೆ ಮುಂದೂಡಿಕೆ ಮಾಡಿವೆ. ಇನ್ನು ಹೊಸ ವರ್ಷದ ಮೊದಲ ತಿಂಗಳಲ್ಲಿ ಹಲವಾರು ಹೊಸ ಮಾದರಿಗಳು ಬಿಡುಗಡೆಯಾಗಲಿದ್ದು, 2021ರ ಜನವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ 7 ಕಾರುಗಳ ಮಾಹಿತಿ ಇಲ್ಲಿದೆ.

2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

ಎಂಜಿ ಹೆಕ್ಟರ್ ಪ್ಲಸ್ ಎಸ್‍ಯುವಿ

ಎಂಜಿ ಸಂಸ್ಥೆಯು ಹೆಕ್ಟರ್ ಪ್ಲಸ್ ಎಂಬ 7 ಸೀಟರ್ ವರ್ಷನ್ ಭಾರತದಲ್ಲಿ ಬಿಡುಗಡೆಗೆಗೊಳಿಸಲು ಸಜ್ಜಾಗುತ್ತಿದೆ. ವರದಿಗಳ ಪ್ರಕಾರ ಬ್ರಿಟಿಷ್ ಬ್ರ್ಯಾಂಡ್ ಎಂಜಿ ಹೆಕ್ಟರ್ ಪ್ಲಸ್ 6 ಸೀಟರ್ ಸ್ಯಾವಿ ವೆರಿಯೆಂಟ್ ಅನ್ನು ಕೂಡ ಪರಿಚಯಿಸಲಿದೆ. ಇದು ಟಾಪ್ ಎಂಡ್ ವೆರಿಯೆಂಟ್ ಗಿಂತ ಮೇಲಿರುತ್ತದೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

ಹೊಸ ಎಂಜಿ ಹೆಕ್ಟರ್ ಪ್ಲಸ್ ಎಸ್‍ಯುವಿಯಲ್ಲಿ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 170 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೋಡಿಸಲಾಗುತ್ತದೆ. ಇದರೊಂದಿಗೆ 1.5 ಲೀಟರ್ ಟರ್ಬೊ-ಪೆಟ್ರೋಲ್ ಯುನಿಟ್ ಅನ್ನು ನೀಡಬಹುದು. ಇದರೊಂದಿಗೆ ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಡಿಸಿಟಿ ಗೇರ್ ಬಾಕ್ಸ್ ಸಿಸ್ಟಂ ಅನ್ನು ಜೋಡಿಸಬಹುದು.

2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್

ಟಾಟಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್ 2021ರ ಜನವರಿ 13 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

ಹೊಸ ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ವೆರಿಯೆಂಟ್ ನಲ್ಲಿ 1.2-ಲೀಟರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 110 ಬಿಹೆಚ್‍ಪಿ ಪವರ್ ಮತ್ತು 140 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ.

2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್‍ಯುವಿಯಾಗಿದೆ. ಈ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು 2021ರ ಜನವರಿ 6 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. 2021ರ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿ 9 ಬಣ್ಣಗಳು, 10 ರೂಪಾಂತರಗಳು ಮತ್ತು ಎರಡು ಎಂಜಿನ್ ಮತ್ತು ಮೂರು ಗೇರ್ ಬಾಕ್ಸ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 2.8 ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 204 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 2.7 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

ಟೊಯೊಟಾ ಫಾರ್ಚೂನರ್ ಲೆಜೆಂಡರ್

ಹೊಸ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚು ಪವರ್ ಫುಲ್ ಮತ್ತು ಪ್ರೀಮಿಯಂ ಆವೃತ್ತಿಯಾಗಿದೆ. ಈ ಟೊಯೊಟಾ ಫಾರ್ಚೂನರ್ ಲೆಜೆಂಡರ್ ತನ್ನ ಉತ್ತಮ ಆಫ್-ರೋಡ್ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಎಂಜಿ ಗ್ಲೊಸ್ಟರ್ ಮತ್ತು ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ. ಟೊಯೊಟಾ ಫಾರ್ಚೂನರ್ ಲೆಜೆಂಡರ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಎಸ್‍ಯುವಿಗಳಲ್ಲಿ ಒಂದಾಗಿದೆ.

2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

ಬಿಎಂಡಬ್ಲ್ಯು 3 ಸೀರಿಸ್ ಗ್ರ್ಯಾನ್ ಲಿಮೋಸಿನ್

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರನ್ನು ಬಿಡುಗಡೆಗೆ ಸಜ್ಜಾಗಿದೆ. ಈ ಹೊಸ ಬಿಎಂಡಬ್ಲ್ಯು 3 ಸೀರಿಸ್ ಹೊಸ ಲಾಂಗ್-ವ್ಹೀಲ್‌ಬೇಸ್ ಆವೃತ್ತಿಯು 2021ರ ಜನವರಿ 21 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ.

2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

ಹೊಸ ಆಡಿ ಎ4 ಸೆಡಾನ್

ಜನಪ್ರಿಯ ಐಷಾರಾಮಿ ಕಾರು ತಯಾರಕ ಕಂಪನಿಯಾದ ಆಡಿ ತನ್ನ ಹೊಸ ಎ4 ಸೆಡಾನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಆಡಿ ಎ4 ಕಾರಿಗಾಗಿ ಭಾರತೀಯ ಮಾರುಕಟ್ಟೆಯಲ್ಲಿ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಿದ್ದಾರೆ.

2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

ಹೊಸ ಆಡಿ ಎ4 ಕಾರಿನಲ್ಲಿ 2.0 ಲೀಟರಿನ ಪೆಟ್ರೋಲ್ ಎಂಜಿನ್‌ ಅಳವಡಿಸಲಾಗುವುದು. ಈ ಎಂಜಿನ್ ಅನ್ನು ಇತ್ತೀಚೆಗೆ ಬಿಡುಗಡೆಯಾದ ಆಡಿ ಕ್ಯೂ2 ಎಸ್‌ಯುವಿಯಿಂದ ಎರವಲು ಪಡೆಯಲಾಗಿದೆ. ಈ ಎಂಜಿನ್ 188 ಬಿಹೆಚ್‌ಪಿ ಪವರ್ ಹಾಗೂ 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

2021ರ ಜನವರಿಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು

ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತದಲ್ಲಿ ಹಲವಾರು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಹಲವಾರು ಹೊಸ ಅಪ್ದೇಟ್ ಗಳೊಂದಿಗೆ ಭಾರತದಲ್ಲಿ ಬಿಡುಗಡೆಯಾಗಲಿದೆ. ವರದಿಗಳ ಪ್ರಕಾರ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಮುಂದಿನ ಜನವರಿ ತಿಂಗಳ 23ರಂದು ಬಿಡುಗಡೆಯಾಗಲಿದೆ.

Most Read Articles

Kannada
English summary
7 Cars To Be Launched In January 2021 Details. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X