Just In
Don't Miss!
- News
ಖಾತೆ ಹಂಚಿಕೆ ಕುರಿತಂತೆ ಡಾ. ಸುಧಾಕರ್ ವಿಚಾರದಲ್ಲಿ ಎಲ್ಲರೂ ತಟಸ್ಥ ನಿಲುವು ತಾಳಿದ್ಯಾಕೆ?
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬುಕ್ಕಿಂಗ್ ನಂತರ ವಿತರಣೆ ಪಡೆಯಲು ಗ್ರಾಹಕರು ಅತಿ ಹೆಚ್ಚು ಕಾಯಬೇಕಾದ ಹೊಸ ಕಾರುಗಳಿವು!
ಯಾವುದೇ ಒಂದು ಹೊಸ ವಾಹನವನ್ನು ಖರೀದಿಸುವ ಮುನ್ನ ಗ್ರಾಹಕರು ಇಂತಿಷ್ಟ ಹಣ ಪಾವತಿ ಮಾಡಿ ಮುಂಗಡವಾಗಿ ಕಾಯ್ದಿರಿಸುವುದು ಇದೀಗ ಸಾಮಾನ್ಯ ಪ್ರಕ್ರಿಯೆ. ಆದರೆ ಬುಕ್ಕಿಂಗ್ ನಂತರ ಕೆಲವು ವಾಹನಗಳು ಅತಿ ಕಡಿಮೆ ಅವಧಿಯಲ್ಲಿ ವಿತರಣೆಯಾದಲ್ಲಿ ಇನ್ನು ಕೆಲವು ವಾಹನಗಳ ಕಾಯುವಿಕೆ ಅವಧಿಯು ಗ್ರಾಹಕರಿಗೆ ಜಿಗುಪ್ಸೆ ಉಂಟು ಮಾಡಬಲ್ಲವು.

ಹೌದು, ಗ್ರಾಹಕರು ಹೊಸ ವಾಹನಗಳ ಖರೀದಿಗಾಗಿ ಬುಕ್ಕಿಂಗ್ ಮಾಡಿದ ನಂತರ ಒಂದು ನಿಗದಿತ ಅವಧಿಗೆ ಕಾಯುವ ತಾಳ್ಮೆ ಹೊಂದಿರುತ್ತಾರೆ. ಆದರೆ ಕೆಲವು ವಾಹನಗಳ ಖರೀದಿಗಾಗಿ ಬುಕ್ಕಿಂಗ್ ಮಾಡಿದ ನಂತರ ಕಾಯುವಿಕೆ ಅವಧಿಯನ್ನು ಕೇಳಿದ್ರೆ ಜಿಗುಪ್ಸೆ ಉಂಟು ಮಾಡುವುದರಲ್ಲಿ ಎರಡು ಮಾತಿಲ್ಲ. ಆದರೆ ಇದು ಎಲ್ಲಾ ಅವಧಿಯಲ್ಲೂ ಒಂದೇ ರೀತಿ ಆಗಿರುವುದಿಲ್ಲವಾದರೂ ಕೆಲವೊಮ್ಮೆ ಗ್ರಾಹಕರಲ್ಲಿ ತಾಳ್ಮೆ ಕಳೆದುಕೊಳ್ಳುವಂತೆ ಮಾಡುತ್ತದೆ.

ಹಾಗಾದ್ರೆ ಸದ್ಯ ಮಾರುಕಟ್ಟೆಯಲ್ಲಿ ಯಾವ ಕಾರು ಮಾದರಿಗೆ ಹೆಚ್ಚು ಕಾಯಲೇಬೇಕು ಎಂಬ ಮಾಹಿತಿ ನೋಡಬಹುಗಾಗಿದ್ದು, ಕಾಯುವಿಕೆಯ ಅವಧಿಯ ವಾಹನ ಉತ್ಪಾದನೆಯ ಪ್ರಮಾಣ ಮತ್ತು ಬಿಡಿಭಾಗಗಳ ಲಭ್ಯತೆಯನ್ನು ಆಧರಿಸಿರುತ್ತದೆ.

01. ಮಹೀಂದ್ರಾ ಥಾರ್
ಬುಕ್ಕಿಂಗ್ ನಂತರ ಗ್ರಾಹಕರು ಅತಿ ಕಾಯಬೇಕಾದ ಕಾರು ಮಾದರಿಗಳಲ್ಲಿ 2020ರ ಥಾರ್ ಎಸ್‌ಯುವಿ ಮೊದಲ ಸ್ಥಾನದಲ್ಲಿದೆ. ಥಾರ್ ಕಾರು ಖರೀದಿಗಾಗಿ ಇಂದು ಬುಕ್ಕಿಂಗ್ ಮಾಡಿದ್ದಲ್ಲಿ ಮುಂದಿನ 7 ತಿಂಗಳಿನಿಂದ 10 ತಿಂಗಳ ಕಾಲ ಕಾಯಬೇಕಾಗುತ್ತದೆ.

ಥಾರ್ ಕಾರು ಮಾದರಿಯು ಇದುವರೆಗೆ ಸುಮಾರು 25 ಸಾವಿರ ಯುನಿಟ್‌ಗಳಿಗಾಗಿ ಬುಕ್ಕಿಂಗ್ ಪಡೆದುಕೊಂಡಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕಾಯುವಿಕೆ ಅವಧಿಯು ನಿರ್ಧಾರವಾಗುತ್ತದೆ. ಟಾಪ್ ಎಂಡ್ ಮಾದರಿಗಳು ಅತಿ ಕಡಿಮೆ ಅವಧಿಯಲ್ಲಿ ವಿತರಣೆಯಾಗಲಿದ್ದರೆ ಬೆಸ್ ವೆರಿಯೆಂಟ್‌ಗಳಿಗೆ ಹೆಚ್ಚು ಕಾಯಬೇಕಾಗುತ್ತದೆ. ನಾಸಿಕ್ ಕಾರು ಉತ್ಪಾದನಾ ಘಟಕದಲ್ಲಿ ನಿರ್ಮಾಣವಾಗುವ ಥಾರ್ ಮಾದರಿಯು ಪ್ರತಿ ತಿಂಗಳಿಗೆ ಕೇವಲ 2 ಸಾವಿರ ಯುನಿಟ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಗ್ರಾಹಕರ ಅಸಮಾಧಾನದ ಹಿನ್ನಲೆಯಲ್ಲಿ ಮುಂಬರುವ ಜನವರಿಯಿಂದ ಪ್ರತಿ ತಿಂಗಳು 3 ಸಾವಿರ ಯುನಿಟ್ ಉತ್ಪಾದನೆಗೆ ಸಿದ್ದತೆ ನಡೆಸಲಾಗಿದೆ.

ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿರುವ ಥಾರ್ ಕಾರು ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.90 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದ್ದು, 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದೆ.

02. ಕಿಯಾ ಸೆಲ್ಟೊಸ್
2019ರ ಅಗಸ್ಟ್ ಅವಧಿಯಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಕಿಯಾ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಪ್ರೀಮಿಯಂ ಸೌಲಭ್ಯಗಳು ಮತ್ತು ಆಕರ್ಷಕ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಇದುವರೆಗೆ ಸುಮಾರು 1.35 ಲಕ್ಷ ಯುನಿಟ್ ಮಾರಾಟಗೊಂಡಿದೆ. ಹೊಸ ಕಾರು ಖರೀದಿಗಾಗಿ ಬುಕ್ಕಿಂಗ್ ಪ್ರಮಾಣವನ್ನು ತಿಂಗಳಿನಿಂದ ತಿಂಗಳಿಗೆ ಹೆಚ್ಚುತ್ತಲೇ ಇದ್ದು, ಡೀಸೆಲ್ ಟಾಪ್ ಎಂಡ್ ಮಾದರಿಗಳಿಗೆ ಹೆಚ್ಚಿನ ಬೇಡಿಕೆಯಿದೆ.

ಸೆಲ್ಟೊಸ್ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಬುಕ್ಕಿಂಗ್ ನಂತರ ಕನಿಷ್ಠ 1 ತಿಂಗಳಿನಿಂದ ಗರಿಷ್ಠ 4 ತಿಂಗಳು ಕಾಯಲೇಬೇಕಿದ್ದು, ಸೆಲ್ಟೊಸ್ ಜಿಟಿಎಕ್ಸ್ ಮಾದರಿಗಳು ಬುಕ್ಕಿಂಗ್ ನಂತರ ವೇಗವಾಗಿ ವಿತರಣೆಯಾಗಲಿದ್ದು, ಹೆಚ್‌ಟಿಎಕ್ಸ್ ಮಾದರಿಗಳಿಗೆ ಹೆಚ್ಚು ಕಾಯಬೇಕಾಗುತ್ತದೆ.

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.89 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.34 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರಿನಲ್ಲಿ 1.4-ಲೀಟರ್ ಟಿ-ಜಿಡಿಐ ಟರ್ಬೋ ಪೆಟ್ರೋಲ್ ಎಂಜಿನ್, 1.5-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

03. ನಿಸ್ಸಾನ್ ಮ್ಯಾಗ್ನೈಟ್
ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಬಿಡುಗಡೆಗೊಂಡ ಒಂದೇ ವಾರದಲ್ಲಿ ಸುಮಾರು 7 ಸಾವಿರ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಟಾಪ್ ಎಂಡ್ ಮಾದರಿಗೆ ಅತಿ ಹೆಚ್ಚು ಬೇಡಿಕೆ ಹರಿದುಬಂದಿದೆ.

ಸೆಗ್ಮೆಂಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿರುವ ನಿಸ್ಸಾನ್ ಕಾರು ಮಾದರಿಯ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ತನ್ನತ್ತ ಸೆಳೆಯುತ್ತಿದೆ. ಈ ಹಿನ್ನಲೆಯಲ್ಲಿ ಹೊಸ ಕಾರು ವಿತರಣೆಯ ಅವಧಿಯು ಬುಕ್ಕಿಂಗ್ ಆಧಾರದ ಏರಿಕೆಯಾಗುತ್ತಲೇ ಇದ್ದು, ಸದ್ಯ ಹೊಸ ಕಾರು ಖರೀದಿಗೆ ಬುಕ್ಕಿಂಗ್ ದಾಖಲಿಸುವ ಗ್ರಾಹಕರು ಉತ್ಪಾದನೆ ಆಧಾರದ ಮೇಲೆ ಕನಿಷ್ಠ 5 ತಿಂಗಳಿನಿಂದ 6 ತಿಂಗಳು ಕಾಲ ಕಾಯಬೇಕಿದೆ.

ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿರುವ ಮ್ಯಾಗ್ನೈಟ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರಿನಲ್ಲಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

04. ಕಿಯಾ ಸೊನೆಟ್
ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಕಿಯಾ ಸೊನೆಟ್ ಆವೃತ್ತಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಬಿಡುಗಡೆಯಾದ ಕೇವಲ ಎರಡೂವರೆ ತಿಂಗಳ ಅವಧಿಯಲ್ಲಿ ಬರೋಬ್ಬರಿ 70 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದೆ.

ಬುಕ್ಕಿಂಗ್ ಆಧಾರದ ಮೇಲೆ ಸೊನೆಟ್ ಕಾರಿನ ವಿತರಣೆಯನ್ನು ತೀವ್ರಗೊಳಿಸಿರುವ ಕಿಯಾ ಮೋಟಾರ್ಸ್ ಕಂಪನಿಯು ಇದುವರೆಗೆ ಸುಮಾರು 25 ಸಾವಿರ ಯುನಿಟ್ ವಿತರಣೆ ಮಾಡಿದ್ದು, ಇನ್ನುಳಿದ ಗ್ರಾಹಕರಿಗೂ ಶೀಘ್ರದಲ್ಲೇ ಹೊಸ ಕಾರು ವಿತರಣೆ ಮಾಡುವ ಸಿದ್ದತೆಯಲ್ಲಿದೆ. ಉತ್ಪಾದನೆಯ ಆಧಾರದ ಮೇಲೆ ವೆರಿಯೆಂಟ್ ಮತ್ತು ಪ್ರದೇಶಗಳಿಗೆ ಅನುಗುಣವಾಗಿ ಹೊಸ ಕಾರಿನ ವಿತರಣೆಯು ತುಸು ಸಮಯಾವಕಾಶ ತೆಗೆದುಕೊಳ್ಳಲಿದ್ದು, ಸೊನೆಟ್ ಕಾರಿಗೆ ಇಂದು ಬುಕ್ಕಿಂಗ್ ಮಾಡಿದ್ದಲ್ಲಿ ಕನಿಷ್ಠ ಒಂದೂವರೆ ತಿಂಗಳಿನಿಂದ ಗರಿಷ್ಠ ನಾಲ್ಕು ತಿಂಗಳು ಕಾಯಲೇಬೇಕಿದೆ.

ಆಕರ್ಷಕ ಬೆಲೆಯೊಂದಿಗೆ ವಿವಿಧ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿರುವ ಕಿಯಾ ಸೊನೆಟ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದ್ದು,1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.