Just In
- 6 hrs ago
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- 6 hrs ago
2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿ ವೆರಿಯೆಂಟ್ ಮಾಹಿತಿ ಬಹಿರಂಗ
- 7 hrs ago
ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350
- 7 hrs ago
ಎಂಟೇ ನಿಮಿಷಗಳಲ್ಲಿ ರಸ್ತೆ ಗುಂಡಿಗಳನ್ನು ಸರಿ ಪಡಿಸಲಿದೆ ಜೆಸಿಬಿಯ ಈ ಹೊಸ ಯಂತ್ರ
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪೆಟ್ರೋಲ್, ಡೀಸೆಲ್ ಕಾರುಗಳ ಉತ್ಪಾದನೆಗೆ ಗುಡ್ ಬೈ ಹೇಳಿದ ಐಷಾರಾಮಿ ಕಾರು ತಯಾರಕ ಕಂಪನಿ
ವಿಶ್ವದ ಪ್ರಮುಖ ಐಷಾರಾಮಿ ಕಾರು ತಯಾರಕ ಕಂಪನಿಯೊಂದು ತನ್ನ ಪೆಟ್ರೋಲ್ ಹಾಗೂ ಡೀಸೆಲ್ ಚಾಲಿತ ವಾಹನಗಳ ಉತ್ಪಾದನೆಯನ್ನು ಶೀಘ್ರದಲ್ಲಿಯೇ ಸ್ಥಗಿತಗೊಳಿಸುವುದಾಗಿ ತಿಳಿಸಿದೆ. ಕಂಪನಿಯ ಈ ನಿರ್ಧಾರವು ಕಂಪನಿಯ ಗ್ರಾಹಕರಿಗೆ ಅಚ್ಚರಿಯನ್ನುಂಟು ಮಾಡಿದೆ.

ಇಂತಹ ಅಚ್ಚರಿಯ ನಿರ್ಧಾರವನ್ನು ಕೈಗೊಂಡಿರುವುದು ಜರ್ಮನಿಯ ಜನಪ್ರಿಯ ಐಷಾರಾಮಿ ಕಾರು ತಯಾರಕ ಕಂಪನಿಯಾದ ಬೆಂಟ್ಲಿ. ಇಂಧನ ಚಾಲಿತ ವಾಹನಗಳ ಉತ್ಪಾದನೆಯನ್ನು ಶೀಘ್ರದಲ್ಲೇ ಸ್ಥಗಿತಗೊಳಿಸುವುದಾಗಿ ಕಂಪನಿ ತಿಳಿಸಿದೆ. ಪೆಟ್ರೋಲ್ ಹಾಗೂ ಡೀಸೆಲ್ ಚಾಲಿತ ವಾಹನಗಳ ಬದಲು ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರ ಉತ್ಪಾದಿಸುವುದಾಗಿ ಕಂಪನಿ ಹೇಳಿದೆ.

2030ರ ವೇಳೆಗೆ ಈ ಯೋಜನೆಯನ್ನು ಜಾರಿಗೆ ತರುವುದಾಗಿ ಕಂಪನಿ ಹೇಳಿದೆ. ಈ ಹಿಂದೆ 2026ರ ವೇಳೆಗೆ ಹೈಬ್ರಿಡ್ ಕಾರುಗಳನ್ನು ಬಿಡುಗಡೆಗೊಳಿಸುವುದಾಗಿ ಬೆಂಟ್ಲಿ ಕಂಪನಿ ಘೋಷಿಸಿತ್ತು. ಸಂಪೂರ್ಣ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆ ಮಾಡಲು ಯೋಜಿಸಿರುವುದಾಗಿ ಬೆಂಟ್ಲಿ ಕಂಪನಿ ಹೇಳಿದೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು

ಈ ಬಗ್ಗೆ ನವೆಂಬರ್ 05ರಂದು ಕಂಪನಿಯು ಈ ಬಗ್ಗೆ ಮಾಹಿತಿ ನೀಡಿದೆ. ಬೆಂಟ್ಲಿ 100 ವರ್ಷಗಳಷ್ಟು ಹಳೆಯ ಕಾರು ಕಂಪನಿಯಾಗಿದೆ. ಬೆಂಟ್ಲಿ ಕಂಪನಿಯು ಫೋಕ್ಸ್ವ್ಯಾಗನ್ ಕಂಪನಿಯನ್ನು ಸಹ ನಿರ್ವಹಿಸುತ್ತದೆ.

ಕಂಪನಿಯು ಶೀಘ್ರದಲ್ಲೇ ತನ್ನ ಶತಮಾನೋತ್ಸವವನ್ನು ಆಚರಿಸಲು ಸಜ್ಜಾಗಿದೆ. ಬಿಯಾಂಡ್ 100 ನೀತಿಯ ಆಧಾರದ ಮೇಲೆ ಮುಂದಿನ ವರ್ಷ ವಿಶ್ವದಾದ್ಯಂತ ಎರಡು ಹೈಬ್ರಿಡ್ ಕಾರುಗಳನ್ನು ಬಿಡುಗಡೆಗೊಳಿಸುವುದಾಗಿ ಕಂಪನಿ ಹೇಳಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ವಿಶ್ವಾದ್ಯಂತ ಎಲೆಕ್ಟ್ರಿಕ್ ವಾಹನಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದೆ. ಪ್ರಪಂಚದ ಬಹುತೇಕ ಎಲ್ಲಾ ದೇಶಗಳು ಜನರಿಗೆ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳನ್ನು ಬಳಸುವಂತೆ ಉತ್ತೇಜನ ನೀಡುತ್ತಿವೆ.

ಆದರೆ ಮೂಲಸೌಕರ್ಯಗಳ ಕೊರತೆ ಹಾಗೂ ದುಬಾರಿ ಬೆಲೆಯ ಕಾರಣಕ್ಕೆ ಜನರು ಎಲೆಕ್ಟ್ರಿಕ್ ವಾಹನ ಬಳಕೆಗೆ ಹಿಂದೇಟು ಹಾಕುತ್ತಿದ್ದಾರೆ. ಈ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರಗಳು ಮಾತ್ರವಲ್ಲದೆ ಕೆಲವು ವಾಹನ ತಯಾರಕ ಕಂಪನಿಗಳು ಸಹ ಕಾರ್ಯನಿರ್ವಹಿಸುತ್ತಿವೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಈ ಕಾರಣಕ್ಕೆ ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳು ಸಮರ್ಪಕವಾಗಿ ಲಭ್ಯವಾಗಲಿವೆ ಎಂದು ನಿರೀಕ್ಷಿಸಲಾಗಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಅಗತ್ಯವಾಗಿರುವ ಮೂಲಸೌಕರ್ಯಗಳನ್ನು ಹೆಚ್ಚಿಸಲು ಭಾರತದಲ್ಲಿಯೂ ಪ್ರಯತ್ನಗಳು ನಡೆಯುತ್ತಿರುವುದು ಗಮನಾರ್ಹ.

ಇದರಿಂದಾಗಿ ಎಲೆಕ್ಟ್ರಿಕ್ ವಾಹನಗಳ ಭವಿಷ್ಯವು ಉಜ್ವಲವಾಗಿರಲಿದೆ. ಈ ಹಿನ್ನೆಲೆಯಲ್ಲಿ ಬೆಂಟ್ಲಿ ಕಂಪನಿಯು ಈ ನಿರ್ಧಾರವನ್ನು ಕೈಗೊಂಡಿದೆ. ಬೆಂಟ್ಲಿ ಕಂಪನಿಯ ಈ ನಿರ್ಧಾರವು ಕೆಲವರಿಗೆ ಆಘಾತವನ್ನುಂಟು ಮಾಡಿರಬಹುದಾದರೂ, ಪರಿಸರ ಸ್ನೇಹಿ ವಾಹನಗಳಿಗೆ ಆದ್ಯತೆ ನೀಡಲು ಈ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದೆ.