ಮೇಡ್ ಇನ್ ಇಂಡಿಯಾ ಸೊನೆಟ್ ಎಸ್‍ಯುವಿಯ ರಫ್ತು ಆರಂಭಿಸಿದ ಕಿಯಾ ಮೋಟಾರ್ಸ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ಕಿಯಾ ಮೋಟಾರ್ಸ್ ಭಾರತದಲ್ಲಿ ಬಿಡುಗಡೆಗೊಳಿಸಿದ ಮೊದಲ ಎಸ್‍‍ಯುವಿಯಾದ ಸೆಲ್ಟೋಸ್ ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತು. ಇದಾದ ಬಳಿಕ ಇತ್ತೀಚೆಗೆ ಮೂರನೇ ಮಾದರಿಯಾಗಿ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತ್ತು.

ಮೇಡ್ ಇನ್ ಇಂಡಿಯಾ ಸೊನೆಟ್ ಎಸ್‍ಯುವಿಯ ರಫ್ತು ಆರಂಭಿಸಿದ ಕಿಯಾ ಮೋಟಾರ್ಸ್

ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ 12 ದಿನಗಳಲ್ಲಿ 9,266 ಯು‍‍ನಿ‍‍ಟ್‍ಗಳನ್ನು ಮಾರಾಟವಾಗಿವೆ. ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಸುಮಾರು 1.5 ಲಕ್ಷ ಯುನಿಟ್‌ಗಳನ್ನು ಮೊದಲ ವರ್ಷದೊಳಗೆ ಸ್ಥಳೀಯವಾಗಿ ಮತ್ತು ರಫ್ತಿನ ಮೂಲಕ ಮಾರಾಟ ಮಾಡುವ ಗುರಿ ಹೊಂದಿದೆ. ಕಿಯಾ ಮೋಟಾರ್ಸ್ ಭಾರತದಿಂದ 70 ಕ್ಕೂ ಹೆಚ್ಚು ದೇಶಗಳಿಗೆ ಸೋನೆಟ್ ರಫ್ತು ಮಾಡಲಿದ್ದು, ಬಿಡುಗಡೆಯಾದ ಮೊದಲ ವರ್ಷದೊಳಗೆ 50,000 ಯುನಿಟ್‌ಗಳನ್ನು ರಫ್ತು ಮಾಡಲಿದೆ.

ಮೇಡ್ ಇನ್ ಇಂಡಿಯಾ ಸೊನೆಟ್ ಎಸ್‍ಯುವಿಯ ರಫ್ತು ಆರಂಭಿಸಿದ ಕಿಯಾ ಮೋಟಾರ್ಸ್

ಕಳೆದ ತಿಂಗಳು ಮಾರಾಟವಾದ ಕಿಯಾ ಸೊನೆಟ್ ಎಸ್‍ಯುವಿ ತನ್ನ ವಿಭಾಗದಲ್ಲಿ ಅತಿ ಹೆಚ್ಚು ಮಾರಾಟವಾದ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಿಯಾ ಮೋಟಾರ್ಸ್ ಕಂಪನಿಯು ಮೇಡ್ ಇನ್ ಇಂಡಿಯಾ ಸೊನೆಟ್ ಎಸ್‍ಯುವಿಗಳನ್ನು ವಿದೇಶಕ್ಕೆ ರಫ್ತು ಮಾಡಲು ಪ್ರಾರಂಭಿಸಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಮೇಡ್ ಇನ್ ಇಂಡಿಯಾ ಸೊನೆಟ್ ಎಸ್‍ಯುವಿಯ ರಫ್ತು ಆರಂಭಿಸಿದ ಕಿಯಾ ಮೋಟಾರ್ಸ್

ಆಂಧ್ರಪ್ರದೇಶದ ಅನಂತಪುರದ ಕಂಪನಿಯ ಉತ್ಪಾದನಾ ಘಟಕದಿಂದ ಕಳೆದ ತಿಂಗಳು ಸೊನೆಟ್ 38 ಯು‍‍ನಿ‍‍ಟ್‍ಗಳನ್ನು ರಫ್ತು ಮಾಡಿದೆ. ಇದೀಗ ಕಂಪನಿಯು ಉತ್ಪಾದನೆಯನ್ನು ಹೆಚ್ಚಿಸಿರುವುದರಿಂದ ಈ ತಿಂಗಳಿನಿಂದ ಸೋನೆಟ್ ರಫ್ತು ಹೆಚ್ಚಾಗುವ ನಿರೀಕ್ಷೆಯಿದೆ.

ಮೇಡ್ ಇನ್ ಇಂಡಿಯಾ ಸೊನೆಟ್ ಎಸ್‍ಯುವಿಯ ರಫ್ತು ಆರಂಭಿಸಿದ ಕಿಯಾ ಮೋಟಾರ್ಸ್

ಕಿಯಾ ಸೊನೆಟ್ ಬಿಡುಗಡೆಗೊಂಡು ಒಂದು ತಿಂಗಳು ಆಗುತ್ತಿದ್ದಂತೆ ಬರೊಬ್ಬರಿ 50 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಪಡೆದುಕೊಂಡಿವೆ. ಇದರಿಂದ ಭಾರತದಲ್ಲಿ ಕಿಯಾ ಸೊನೆಟ್ ಎಸ್‍ಯುವಿಯ ವೈಟಿಂಗ್ ಪಿರೇಡ್ ಹೆಚ್ಚಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಮೇಡ್ ಇನ್ ಇಂಡಿಯಾ ಸೊನೆಟ್ ಎಸ್‍ಯುವಿಯ ರಫ್ತು ಆರಂಭಿಸಿದ ಕಿಯಾ ಮೋಟಾರ್ಸ್

ದೇಶೀಯ ಮಾರುಕಟ್ಟೆಯಲ್ಲಿ ಕಿಯಾ ಸೊನೆಟ್ ಎಸ್‍ಯುವಿಯ ವೈಟಿಂಗ್ ಪಿರೇಡ್ 10 ವಾರಗಳವರೆಗೆ ಹೆಚ್ಚಿಸಿದೆ. ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೆಟ್ರೋಲ್ ಮತ್ತು ಎರಡು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಯುನಿಟ್ ಮತ್ತು 1.0-ಲೀಟರ್ ಟರ್ಬೊ-ಚಾರ್ಜ್ಡ್ ಪೆಟ್ರೋಲ್ ಅನ್ನು ಹೊಂದಿದೆ.

ಮೇಡ್ ಇನ್ ಇಂಡಿಯಾ ಸೊನೆಟ್ ಎಸ್‍ಯುವಿಯ ರಫ್ತು ಆರಂಭಿಸಿದ ಕಿಯಾ ಮೋಟಾರ್ಸ್

ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯ 1.2-ಲೀಟರ್ ಯುನಿಟ್ 84 ಬಿಹೆಚ್‌ಪಿ ಪವರ್ ಮತ್ತು 115 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್‌ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಐಷಾರಾಮಿ ಫೋಕ್ಸ್‌ವ್ಯಾಗನ್ ಎಸ್‍ಯುವಿಯನ್ನು ಖರೀದಿಸಿದ ಜನಪ್ರಿಯ ಬಾಲಿವುಡ್ ನಟ

ಮೇಡ್ ಇನ್ ಇಂಡಿಯಾ ಸೊನೆಟ್ ಎಸ್‍ಯುವಿಯ ರಫ್ತು ಆರಂಭಿಸಿದ ಕಿಯಾ ಮೋಟಾರ್ಸ್

ಇನ್ನು ಟಾಪ್ ಸ್ಪೆಕ್ 1.0-ಲೀಟರ್ ಯುನಿಟ್ 119 ಬಿಹೆಚ್‌ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7 ಅಥವಾ 6-ಸ್ಪೀಡ್ ಐಎಂಟಿ ಅನ್ನು ಜೋಡಿಸಲಾಗಿದೆ.

ಮೇಡ್ ಇನ್ ಇಂಡಿಯಾ ಸೊನೆಟ್ ಎಸ್‍ಯುವಿಯ ರಫ್ತು ಆರಂಭಿಸಿದ ಕಿಯಾ ಮೋಟಾರ್ಸ್

ಇನ್ನು ಈ ಕಾಂಪ್ಯಾಕ್ಟ್ ಎಸ್‍ಯುವಿಯ ಡೀಸೆಲ್ ಎಂಜಿನ್ ಬಗ್ಗೆ ಹೇಳುವುದಾದರೆ, 1.5-ಲೀಟರ್ ಡೀಸೆಲ್ ಡಬ್ಲ್ಯುಜಿಟಿ ಎಂಜಿನ್ 99 ಬಿಹೆಚ್‌ಪಿ ಪವರ್ ಮತ್ತು 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ವಿಜಿಟಿ ಎಂಜಿನ್ 114 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮೇಡ್ ಇನ್ ಇಂಡಿಯಾ ಸೊನೆಟ್ ಎಸ್‍ಯುವಿಯ ರಫ್ತು ಆರಂಭಿಸಿದ ಕಿಯಾ ಮೋಟಾರ್ಸ್

ಗ್ರಾಹಕರು ಕಿಯಾ ಕಾರುಗಳ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫಿಧಾ ಆಗಿದ್ದಾರೆ. ಕಿಯಾ ಮೋಟಾರ್ಸ್ ಹಲವು ಮಾರುಕಟ್ಟೆಯಲ್ಲಿ ಕಡಿಮೆ ಅವಧಿಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ. ಅದು ಕಿಯಾ ಕಾರುಗಳ ಸ್ಪೆಷಾಲಿಟಿ ಎಂದು ಹೇಳಬಹುದು.

More from DriveSpark

Article Published On: Saturday, October 24, 2020, 16:13 [IST]
English summary
Kia Sonet Export Starts. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+