Just In
- 1 hr ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 1 hr ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
- 1 hr ago ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- 2 hrs ago Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
Don't Miss!
- News Karnataka Lok Sabha Election 2024: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ!
- Movies ಸ್ವಿಮ್ಮಿಂಗ್ ಪೂಲ್ನಲ್ಲಿ ಪತಿ ಜೊತೆ ನಟಿಯ ರೊಮ್ಯಾನ್ಸ್; ಟ್ರೋಲ್ ಆಗಿದ್ದು ಚಹಾಲ್ ಪತ್ನಿ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಕ್ಷಿಣ ಆಫ್ರಿಕಾಗೂ ಲಗೆಯಿಟ್ಟ ಮೇಡ್ ಇನ್ ಇಂಡಿಯಾ ಎಸ್-ಪ್ರೆಸ್ಸೊ
2019ರಲ್ಲಿ ಬಿಡುಗಡೆಯಾದ ಮಾರುತಿ ಎಸ್-ಪ್ರೆಸ್ಸೊ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಮಿನಿ ಎಸ್ಯುವಿಯು ಭಾರತದಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿದೆ.
ಮುಂದಿನ ಆರು ತಿಂಗಳುಗಳಲ್ಲಿ ಸುಜುಕಿ ಎಸ್-ಪ್ರೆಸ್ಸೊ ಲ್ಯಾಟಿನ್ ಅಮೆರಿಕ, ಫಿಲಿಪೈನ್ಸ್ ಮತ್ತು ಶ್ರೀಲಂಕಾದಂತಹ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ. ಇದೀಗ ಮೇಡ್ ಇನ್ ಇಂಡಿಯಾ ಎಸ್-ಪ್ರೆಸ್ಸೊ ಕಾರು ದಕ್ಷಿಣ ಆಫ್ರಿಕಾದಲಿ ಬಿಡುಗಡೆಗೊಳಿಸಿದೆ. ಈ ಕಾರನ್ನು ದಕ್ಷಿಣ ಆಫ್ರಿಕಾದಲ್ಲಿ ಆರಂಭಿಕ ಬೆಲೆ ರೂ.5.89 ಲಕ್ಷಗಳಿಗೆ ಬಿಡುಗಡೆಗೊಳಿಸಿದೆ. ಎಸ್-ಪ್ರೆಸ್ಸೊ ಕಾರಿನ 283 ಯುನಿಟ್ಗಳನ್ನು ಬಿಡುಗಡೆಗೊಳಿಸಿದೆ.
ಕಳೆದ ತಿಂಗಳಲ್ಲಿ ದೇಶದ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಮಾರುತಿ ಎಸ್-ಪ್ರೆಸ್ಸೊ ಆರನೇ ಸ್ಥಾನವನ್ನು ಪಡೆದುಕೊಂಡಿದೆ. ತನ್ನ ಪ್ರತಿಸ್ಪರ್ಧಿ ರೆನಾಲ್ಟ್ ಕ್ವಿಡ್ ಗಿಂತ ಮುಂದಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿ
ದಕ್ಷಿಣ ಆಫ್ರಿಕಾದಲ್ಲಿ ಬಿಡುಗಡೆಗೊಳಿಸಿದ ಸುಜುಕಿ ಎಸ್-ಪ್ರೆಸ್ಸೊ ಕಾರಿನಲ್ಲಿ 1.0-ಲೀಟರ್ ಮೂರು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 67 ಬಿಎಚ್ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಆರಂಭಿಕ ಕಾರು ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮತ್ತು ಹೈ ಎಂಡ್ ಮಾದರಿಯಲ್ಲಿ 5-ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.
ಎಸ್-ಪ್ರೆಸ್ಸೊ ಕಾರಿನಲ್ಲಿ ಮೈಕ್ರೋ ಎಸ್ಯುವಿ ವಿನ್ಯಾಸದೊಂದಿಗೆ ಆಕರ್ಷಕ ಗ್ರೌಂಡ್ ಕ್ಲಿಯೆರೆನ್ಸ್, 14-ಇಂಚಿನ ಸ್ಟೀಲ್ ವೀಲ್ಹ್, ಸ್ಲಿಕ್ ಫ್ರಂಟ್ ಗ್ರಿಲ್, ಕ್ರೋಮ್ ಇನ್ಸರ್ಟ್, ಹೆಡ್ಲ್ಯಾಂಪ್, ವಿಸ್ತರಿತ ಸೆಂಟರ್ ಏರ್ ಇನ್ಟೆಕ್, ಸಿ ಶೇಫ್ ಟೈಲ್ಗೆಟ್ ಸೌಲಭ್ಯವು ಕಾರಿನ ಅಂದಕ್ಕೆ ಮತ್ತಷ್ಟು ಮೆರಗು ನೀಡುತ್ತವೆ.
MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ
ಎಸ್-ಪ್ರೆಸ್ಸೊ ಕಾರಿನ ಇಂಟಿರಿಯರ್ ನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳಿದ್ದು, ಬಾಡಿ ಕಲರ್ ಡ್ಯಾಶ್ಬೋರ್ಡ್, ಸೆಂಟರ್ ಕನ್ಸೊಲ್ನಲ್ಲಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟ್ಯಾಕೊ ಮೀಟರ್, ಇನ್ಸ್ಟ್ರುಮೆಂಟ್ ಡಿಸ್ಪ್ಲೇ, ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, ಸ್ಮಾರ್ಟ್ಪ್ಲೇ ಸ್ಟುಡಿಯೋ ಸಿಸ್ಟಂ,ಆ್ಯಪಲ್ ಕಾರ್ ಪ್ಲೇ/ಆಂಡ್ರಾಯ್ಡ್ ಆಟೋ, ಆರೇಂಜ್ ಕಲರ್ ಆಕ್ಸೆಂಟ್ ಸೌಲಭ್ಯವಿದೆ.
ಇದರೊಂದಿಗೆ ಈ ಕಾರಿನಲ್ಲಿ ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್, ಮ್ಯಾನುವಲ್ ಹೊಂದಾಣಿಕೆಯ ರೇರ್ ವ್ಯೂ ಮಿರರ್, 12ವೊಲ್ಟ್ ಚಾರ್ಜಿಂಗ್ ಸ್ಯಾಕೆಟ್ ಮತ್ತು ಯುಎಸ್ಬಿ ಕನೆಕ್ಟ್ ಸಹ ಹೊಂದಿದೆ. ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಈ ಕಾರಿನಲ್ಲಿ ಕೀ ಲೆಸ್ ಎಂಟ್ರಿ, ಬ್ಲೂಥೂತ್ ಕನೆಕ್ಟಿವಿಟಿ, ಪವರ್ ವಿಂಡೋ, ಡ್ಯುಯಲ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಪೀಡ್ ವಾರ್ನಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವು ಫೀಚರ್ಸ್ಗಳನ್ನು ನೀಡಲಾಗಿದೆ.
ದಕ್ಷಿಣ ಆಪ್ರಿಕಾದಲ್ಲಿ ಬಿಡುಗಡೆಗೊಳಿಸಿದ ಸುಜುಕಿ ಎಸ್-ಪ್ರೆಸ್ಸೊ ಕಾರಿಗೆ ಐದು ವರ್ಷ/ಎರಡು ಲಕ್ಷ ಕಿ.ಮೀ ವಾರಂಟಿಯನ್ನು ನೀಡಿದೆ. ಇದರೊಂದಿಗೆ 30,000 ಕಿ.ಮೀ ಸರ್ವಿಸ್ ಪ್ಲಾನ್ ಮತ್ತು ಒಂದು ವರ್ಷದ ವಿಮಾ ಸೌಲಭ್ಯವನ್ನು ಒಳಗೊಂಡಿದೆ.