ಬಿಡುಗಡೆಯಾಯ್ತು ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿ

ಮಹೀಂದ್ರಾ ಕಂಪನಿಯು ತನ್ನ ಬಿಎಸ್-6 ಅಲ್ಟುರಾಸ್ ಜಿ4 ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಹೊಸ ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.28.69 ಲಕ್ಷಗಳಾಗಿದೆ.

ಬಿಡುಗಡೆಯಾಯ್ತು ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿ

ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಹೊರತುಪಡಿಸಿ ಇತರ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ. ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯಲ್ಲಿ 2.2 ಲೀಟರ್ ಇ-ಎಕ್ಸ್‌ಡಿ 220 ಟರ್ಬೋಚಾರ್ಜ್ಡ್ ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 180-ಬಿಹೆಚ್‍ಪಿ ಪವರ್ ಮತ್ತು 420-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಮರ್ಸಿಡೀಸ್ ಬೆಂಝ್‍ನಿಂದ ಎರವಲು ಪಡೆದ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಜೋಡಿಸಲಾಗಿದೆ.

ಬಿಡುಗಡೆಯಾಯ್ತು ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿ

ಬಿಎಸ್-6 ಮಾಲಿನ್ಯ ನಿಯಮಕ್ಕೆ ನವೀಕರಿಸಿದರೂ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳಲ್ಲಿ ಬದಲಾವಣೆಯಾಗಿಲ್ಲ. ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯಲ್ಲಿ ಎಂಜಿನ್ ನವೀಕರಣ ಹೊರತುಪಡಿಸಿ ಹೊಸ ಅಲಾಯ್ ವ್ಹೀಲ್ ಗಳನ್ನು ಒಳಗೊಂಡಿರಬಹುದು.

MOST READ: ಬಿಎಸ್-6 ಮಹೀಂದ್ರಾ ಸ್ಕಾರ್ಪಿಯೋ ಎಸ್‍‍‍ಯುವಿಯ ಖರೀದಿಗೆ ಬುಕ್ಕಿಂಗ್ ಆರಂಭ

ಬಿಡುಗಡೆಯಾಯ್ತು ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿ

ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಬೇಸ್ ಮಾದರಿಯು 2ಡಬ್ಲ್ಯೂಡಿ ಮತ್ತು ಹೈ ಮಾದರಿಯಲ್ಲಿ 4ಡಬ್ಲೂಡಿ ಸಿಸ್ಟಂ ಅನ್ನು ಹೊಂದಿದೆ. ಹಿಂದಿನ ಮಾದರಿಗಳಿಗೆ ಹೋಲಿಸಿದರೆ ಹೊಸ ಮಾದರಿಗಳಿಗೆ ರೂ.1 ಲಕ್ಷದಷ್ಟು ದರವನ್ನು ಹೆಚ್ಚಿಸಿದೆ.

ಬಿಡುಗಡೆಯಾಯ್ತು ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿ

ಹೊಸ ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯಲ್ಲಿ ಹಿಂದಿನ ಮಾದರಿಯ ರೀತಿಯ ಫೀಚರ್ ಗಳನ್ನು ಹೊಂದಿದೆ. ಇಂಡಿಯಾನ್ ಬ್ರ್ಯಾಂಡ್ ನ ಈ ಪೂರ್ಣ ಪ್ರಮಾಣದ ಎಸ್‍ಯುವಿಯು ಹಲವಾರು ಪ್ರೀಮಿಯಂ ಮತ್ತು ಐಷಾರಾಮಿ ಫೀಚರ್ ಗಳನ್ನು ಹೊಂದಿದೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಮಹೀಂದ್ರಾ ಕೆಯುವಿ 100 ಎನ್‌ಎಕ್ಸ್‌ಟಿ

ಬಿಡುಗಡೆಯಾಯ್ತು ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿ

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಇಂಟಿರಿಯರ್ ನಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಿರುವ ಟಚ್‌ಸ್ಕ್ರೀನ್ ಇನ್ಪೋಟೇನ್‍ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿ

ಇದರೊಂದಿಗೆ ಎಲೆಕ್ಟ್ರಾನಿಕಲ್ ಆಗಿ ಹೊಂದಾಣಿಕೆ ಮಾಡಬಹುದಾದ ಮುಂಭಾಗದ ಸೀಟುಗಳು, ಟೇಲ್ ಗೇಡ್, ಡ್ಯುಯಲ್-ಜೋನ್ ಕ್ಲೈಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವ್ಹೀಲ್ ಅನ್ನು ಹೊಂದಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಬಿಡುಗಡೆಯಾಯ್ತು ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿ

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ ಒಂಬತ್ತು ಏರ್‌ಬ್ಯಾಗ್, ಫ್ರಂಟ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳು, 360 ಡಿಗ್ರಿ ಕ್ಯಾಮೆರಾ, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ, ಹಿಲ್ ಸ್ಟಾರ್ಟ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಎಬಿಎಸ್ ಜೊತೆ ಇಬಿಡಿ, ಕ್ರೂಸ್ ಕಂಟ್ರೋಲ್, ಹೈಸ್ಪೀಡ್ ಅಲರ್ಟ್ ಮತ್ತು ಸೀಟ್‌ಬೆಲ್ಟ್ ರಿಮೈಂಡರ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿ

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್, ಸ್ಕೋಡಾ ಕೊಡಿಯಾಕ್ ಮತ್ತು ಫೋಕ್ಸ್‌ವ್ಯಾಗನ್ ಟಿಗುವಾನ್ ಆಲ್‌ಸ್ಪೇಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
BS6 Mahinda Alturas G4 launched. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X