ಲಾಕ್‌ಡೌನ್ ಸಂಕಷ್ಟ: ಮಹೀಂದ್ರಾ ನ್ಯೂ ಜನರೇಷನ್ ಕಾರುಗಳ ಬಿಡುಗಡೆ ಮುಂದೂಡಿಕೆ

ಮಾಹಾಮಾರಿ ಕರೋನಾ ವೈರಸ್‌ನಿಂದಾಗಿ ಆಟೋ ಉದ್ಯಮವು ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ನಿಯಂತ್ರಣ ಬಾರದ ವೈರಸ್ ಮಟ್ಟ ಹಾಕಲು ಇದೀಗ ಮತ್ತೊಮ್ಮೆ ಅನಿವಾರ್ಯವಾಗಿ ದೇಶಾದ್ಯಂತ ಲಾಕ್‌‌ಡೌನ್ ಮಾಡಲಾಗುತ್ತಿರುವುದು ಆಟೋ ಕಂಪನಿಗಳಿಗೆ ಭಾರೀ ಹೊಡೆತ ನೀಡಲಿದೆ.

ಲಾಕ್‌ಡೌನ್ ಸಂಕಷ್ಟ: ಮಹೀಂದ್ರಾ ನ್ಯೂ ಜನರೇಷನ್ ಕಾರುಗಳ ಬಿಡುಗಡೆ ಮುಂದೂಡಿಕೆ

ವೈರಸ್ ಭೀತಿಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನ ಮಾದರಿಗಳನ್ನು ಹೊರತುಪಡಿಸಿ ಹೊಸ ವಾಹನ ಬಿಡುಗಡೆಯನ್ನು ಮುಂದೂಡಿಕೆ ಮಾಡಲಾಗುತ್ತಿದ್ದು, ಕೆಲ ಹೊಸ ವಾಹನ ಮಾದರಿಗಳ ಬಿಡುಗಡೆಯ ಯೋಜನೆಯನ್ನೇ ಕೈಬಿಡಲಾಗುತ್ತಿದೆ. ಮಹೀಂದ್ರಾ ಕೂಡಾ ಲಾಕ್‌ಡೌನ್ ಸಂಕಷ್ಟದಿಂದಾಗಿ ಕೆಲವು ಹೊಸ ವಾಹನಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದು, ಇದೇ ತಿಂಗಳು ಬಿಡುಗಡೆಯಾಗಬೇಕಿದ್ದ ನ್ಯೂ ಜನರೇಷನ್ ಥಾರ್ ಮತ್ತು ಎಕ್ಸ್‌ಯುವಿ500 ಕಾರುಗಳ ಬಿಡುಗಡೆಯೂ ವರ್ಷಾಂತ್ಯಕ್ಕೆ ನಿಗದಿಮಾಡಲಿದೆ.

ಲಾಕ್‌ಡೌನ್ ಸಂಕಷ್ಟ: ಮಹೀಂದ್ರಾ ನ್ಯೂ ಜನರೇಷನ್ ಕಾರುಗಳ ಬಿಡುಗಡೆ ಮುಂದೂಡಿಕೆ

ಹೌದು, ಮುಂಬರುವ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಬೇಕಿದ್ದ ನ್ಯೂ ಜನರೇಷನ್ ಎಕ್ಸ್‌ಯುವಿ500, ಥಾರ್ ಮತ್ತು ಸ್ಕಾರ್ಪಿಯೋ ಕಾರುಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಲಾಗಿದ್ದು, 2021-22ರ ಹಣಕಾಸು ವರ್ಷದಲ್ಲಿ ಬಿಡುಗಡೆ ಮಾಡಲಿದೆ.

ಲಾಕ್‌ಡೌನ್ ಸಂಕಷ್ಟ: ಮಹೀಂದ್ರಾ ನ್ಯೂ ಜನರೇಷನ್ ಕಾರುಗಳ ಬಿಡುಗಡೆ ಮುಂದೂಡಿಕೆ

ಸದ್ಯಕ್ಕೆ ಎಕ್ಸ್‌ಯುವಿ500, ಸ್ಕಾರ್ಪಿಯೋ ಕಾರುಗಳ 2020ರ ಮಾದರಿಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಮಾತ್ರವೇ ಬಿಡುಗಡೆ ಮಾಡಲಾಗಿದ್ದು, ಹೊಸ ವಿನ್ಯಾಸ ಮತ್ತು ವಿವಿಧ ಎಂಜಿನ್ ಆಯ್ಕೆ ಹೊಂದಿದ್ದ ನ್ಯೂ ಜನರೇಷನ್ ಮಾದರಿಗಳ ಬಿಡುಗಡೆಯನ್ನು ಮುಂದೂಡಲಾಗಿದೆ.

ಲಾಕ್‌ಡೌನ್ ಸಂಕಷ್ಟ: ಮಹೀಂದ್ರಾ ನ್ಯೂ ಜನರೇಷನ್ ಕಾರುಗಳ ಬಿಡುಗಡೆ ಮುಂದೂಡಿಕೆ

ಇನ್ನು ಆಟೋ ಉದ್ಯಮ ಸೇರಿದಂತೆ ಎಲ್ಲಾ ವಲಯದಲ್ಲೂ ಕರೋನಾ ಮಹಾಮಾರಿಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದೆ. ಸದ್ಯಕ್ಕೆ ಆಟೋ ಉದ್ಯಮಕ್ಕೆ ಕೆಲವು ವಿನಾಯ್ತಿಗಳನ್ನು ನೀಡಲಾಗಿದ್ದರೂ ಪರಿಸ್ಥಿತಿಗೆ ಅನುಗುಣವಾಗಿ ಇದೀಗ ಮತ್ತೊಮ್ಮೆ ಲಾಕ್‌ಡೌನ್ ಜಾರಿ ಮಾಡಲಾಗುತ್ತಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಲಾಕ್‌ಡೌನ್ ಸಂಕಷ್ಟ: ಮಹೀಂದ್ರಾ ನ್ಯೂ ಜನರೇಷನ್ ಕಾರುಗಳ ಬಿಡುಗಡೆ ಮುಂದೂಡಿಕೆ

ಲಾಕ್‌ಡೌನ್‌ ಸಂಕಷ್ಟಕ್ಕೆ ಸಿಲುಕಿರುವ ವಾಹನ ಕಂಪನಿಗಳು ಹೊಸ ವಾಹನಗಳ ಮಾರಾಟವನ್ನು ಸರಿದಾರಿಗೆ ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದು, ಹೊಸ ವಾಹನ ಖರೀದಿದಾರರಿಗೆ ಇಎಂಐ ತಗ್ಗಿಸಿ ಅತಿ ಸುಲಭವಾದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಲಾಕ್‌ಡೌನ್ ಸಂಕಷ್ಟ: ಮಹೀಂದ್ರಾ ನ್ಯೂ ಜನರೇಷನ್ ಕಾರುಗಳ ಬಿಡುಗಡೆ ಮುಂದೂಡಿಕೆ

ಲಾಕ್‌ಡೌನ್‌ಗೂ ಮೊದಲು ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಲಾಕ್‌ಡೌನ್ ಸಡಿಲಿಕೆ ನಂತರ ಆರ್ಥಿಕ ಪರಿಸ್ಥಿತಿ ಅವಲೋಕಿಸಿ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಮಾರಾಟ ಮಳಿಗೆಗಳು ಪುನಾರಂಭಗೊಂಡ ನಂತರವೂ ವಾಹನ ಖರೀದಿ ಬದಲು ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆಯಿಡುತ್ತಿರುವುದು ಆಟೋ ಕಂಪನಿಗಳನ್ನು ಚಿಂತೆಗೀಡು ಮಾಡಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಲಾಕ್‌ಡೌನ್ ಸಂಕಷ್ಟ: ಮಹೀಂದ್ರಾ ನ್ಯೂ ಜನರೇಷನ್ ಕಾರುಗಳ ಬಿಡುಗಡೆ ಮುಂದೂಡಿಕೆ

ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಕಾರುಗಳ ಮಾರಾಟದ ಮೇಲೆ ಮಾತ್ರವೇ ಹೆಚ್ಚು ಗಮನಹರಿಸಿರುವ ಆಟೋ ಕಂಪನಿಗಳು ಹೊಸ ಮಾದರಿಯ ಕಾರುಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡುತ್ತಿದ್ದು, ಪರಿಸ್ಥಿತಿ ಸುಧಾರಣೆ ನಂತರವಷ್ಟೇ ಹಲವು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ.

Most Read Articles

Kannada
English summary
Mahindra Announces Delay in Launches Of New XUV500 And New Thar. Read in Kannada.
Story first published: Monday, July 13, 2020, 18:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X