ಲಾಕ್‌ಡೌನ್ ಸಂಕಷ್ಟ: ಮಹೀಂದ್ರಾ ಅಟಾಮ್ ಕ್ವಾರ್ಡ್ರಿಸೈಕಲ್ ಬಿಡುಗಡೆ ಇನ್ನಷ್ಟು ವಿಳಂಬ!
ಕರೋನಾ ವೈರಸ‌್‌ನಿಂದಾಗಿ ಆಟೋ ಉದ್ಯಮವು ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಹಲವಾರು ಕಾರು ಮಾದರಿಗಳ ಬಿಡುಗಡೆಯು ಮುಂದೂಡಿಕೆಯಾಗಿರುವುದಲ್ಲದೆ ಕೆಲ ಕಾರು ಮಾದರಿಗಳ ಬಿಡುಗಡೆಯ ಯೋಜನೆಯನ್ನೇ ಕೈಬಿಡುವ ಪರಿಸ್ಥಿತಿ ಎದುರಾಗಿದೆ.

ಮಹೀಂದ್ರಾ ಕಂಪನಿಯು ಸಹ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ಕೈಜೋಡಿಸುವ ಮೂಲಕ ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ದೇಣಿಗೆ ನೀಡಿರುವುದಲ್ಲದೇ ಹೊಸ ಸುರಕ್ಷಾ ಕ್ರಮಗಳೊಂದಿಗೆ ಉದ್ಯಮ ವ್ಯವಹಾರಗಳನ್ನು ಮುನ್ನಡೆಸುತ್ತಿದ್ದು, ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾಗಿದ್ದ ಎಲೆಕ್ಟ್ರಿಕ್ ಕಾರುಗಳು ಮತ್ತು ಕ್ವಾರ್ಡ್ರಿಸೈಕಲ್ ಬಿಡುಗಡೆಯನ್ನು ಸದ್ಯಕ್ಕೆ ಮುಂದೂಡಿಕೆ ಮಾಡಲಾಗಿದೆ.

ಕೆಯುವಿ100 ಎಲೆಕ್ಟ್ರಿಕ್ ಕಾರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದರೂ ವಿತರಣಾ ಪ್ರಕ್ರಿಯೆಯನ್ನು 2021ಕ್ಕೆ ಮುಂದೂಡಲಾಗಿದ್ದು, ಇನ್ನೇರಡು ಬಹುನೀರಿಕ್ಷಿತ ಎಲೆಕ್ಟ್ರಿಕ್ ವಾಹನ ಮಾದರಿಗಳಾದ ಇಎಕ್ಸ್‌ಯುವಿ300 ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ಅನ್ನು 2021ಕ್ಕೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಕಳೆದ ಫೆಬ್ರುವರಿ ಆರಂಭದಲ್ಲಿ ನಡೆದಿದ್ದ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನ ಮಾಡಿ ಬಿಡುಗಡೆ ಮಾಡಿದ್ದ ಮಹೀಂದ್ರಾ ಕಂಪನಿಯು ಇದೇ ವರ್ಷ ಜೂನ್ ಅಥವಾ ಜುಲೈ ಆರಂಭದಲ್ಲಿ ಬಿಡುಗಡೆ ಮತ್ತು ವಿತರಣಾ ಪ್ರಕ್ರಿಯೆಗೆ ಚಾಲನೆ ನೀಡುವ ಯೋಜನೆಯಲ್ಲಿತ್ತು.

ಆದರೆ ಮಾಹಾಮಾರಿ ಕರೋನಾ ವೈರಸ್ ಭೀತಿ ಹೆಚ್ಚಿದ್ದರಿಂದ ಎಲೆಕ್ಟ್ರಿಕ್ ಕಾರು ಮಾದರಿಗಳ ಬಿಡುಗಡೆಯನ್ನು ಸದ್ಯಕ್ಕೆ ಮುಂದೂಡಿಕೆ ಮಾಡಿರುವ ಮಹೀಂದ್ರಾ ಕಂಪನಿಯು ಹೊಸ ಕಾರುಗಳನ್ನು 2021ರ ಆರಂಭದಲ್ಲಿ ಮಾರುಕಟ್ಟೆಗೆ ಪರಿಚಯಿಸಲಿದ್ದು, ಸದ್ಯಕ್ಕೆ ಸಾಮಾನ್ಯ ಕಾರುಗಳ ಮಾದರಿಗಳ ಮಾರಾಟದ ಮೇಲೆ ಹೆಚ್ಚಿನ ಒತ್ತು ನೀಡಲಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಇನ್ನು ಮಹೀಂದ್ರಾ ಕಂಪನಿಯು ಸದ್ಯ ಹೊಸ ನಿಯಮಗಳಿಗೆ ಅನುಗುಣವಾಗಿ ತನ್ನ ಭವಿಷ್ಯದ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆ ನೀಡುವ ಉದ್ದೇಶದಿಂದ ಈ ಹಿಂದಿನ ಇ2ಓ ಪ್ಲಸ್ ಕಾರಿನ ಉತ್ಪಾದನೆ ಸ್ಥಗಿತಗೊಳಿಸಿ ಹೊಸ ಕಾರು ಉತ್ಪನ್ನಗಳ ಮೇಲೆ ಹೆಚ್ಚಿನ ಗಮನಹರಿಸುತ್ತಿದೆ.

ಗ್ರಾಹಕರ ಬೇಡಿಕೆಯೆಂತೆ ವಿಶೇಷ ಫೀಚರ್ಸ್ ಮತ್ತು ಅತ್ಯುತ್ತಮ ಬ್ಯಾಟರಿ ಆಯ್ಕೆ ಹೊಂದಲಿರುವ ಎಲೆಕ್ಟ್ರಿಕ್ ಪ್ರಯಾಣಿಕರ ಕಾರುಗಳು ಮತ್ತು ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಯ ಮೇಲೂ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಇದರಲ್ಲಿ ಅಟಾಮ್ ಕ್ವಾರ್ಡ್ರಿಸೈಕಲ್ ಎಲೆಕ್ಟ್ರಿಕ್ ವಾಹನವು ಒಂದಾಗಿದ್ದು, ಈ ವಾಹನವು 15kW ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಅನಾವರಣ ಹೊರತುಪಡಿಸಿ ಅಟಾಮ್ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿ ಬಿಟ್ಟುಕೊಟ್ಟಿಲ್ಲವಾದರೂ ಈ ಹೊಸ ಎಲೆಕ್ಟ್ರಿಕ್ ವಾಹನವು ಬಜಾಜ್ ಬಿಡಗಡೆ ಮಾಡಲಿರುವ ಎಲೆಕ್ಟ್ರಿಕ್ ಕ್ಯೂಟ್ ಕ್ವಾರ್ಡ್ರಿಸೈಕಲ್‌ಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.


Click it and Unblock the Notifications