ದುಬಾರಿ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಬೊಲೆರೊ

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಕಂಪನಿಯು ಈಗಾಗಲೇ ಬಿಎಸ್-6 ಕಾರುಗಳ ಮಾರಾಟಕ್ಕೆ ಚಾಲನೆ ನೀಡಿದ್ದು, ಶೀಘ್ರದಲ್ಲೇ ಎಲ್ಲಾ ಕಾರು ಮಾದರಿಗಳಲ್ಲೂ ಹೊಸ ಎಂಜಿನ್ ಆವೃತ್ತಿಗಳನ್ನು ಬಿಡುಗಡೆ ಮಾಡಲಿದೆ.

ದುಬಾರಿ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಬೊಲೆರೊ

ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಹೊಸ ಎಮಿಷನ್ ನಿಯಮ ಅನ್ವಯ ಬಿಎಸ್-6 ವೈಶಿಷ್ಟ್ಯತೆಯ ಕಾರು ಆವೃತ್ತಿಗಳನ್ನು ಅಭಿವೃದ್ದಿಗೊಳಿಸಿದ್ದು, ಈ ತಿಂಗಳಾಂತ್ಯಕ್ಕೆ ಹೊಸ ಕಾರುಗಳ ಬಿಡುಗಡೆಗೆ ಸಿದ್ದತೆ ಮಾಡಿಕೊಂಡಿತ್ತು. ಆದರೆ ಕರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಬಿಎಸ್-6 ಕಾರುಗಳ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದ್ದು, ಇದರಲ್ಲಿ ಹೊಸದಾಗಿ ವಿನ್ಯಾಸಗೊಂಡಿರುವ ಬೊಲೆರೊ ಫೇಸ್‌ಲಿಫ್ಟ್ ಕೂಡಾ ಒಂದಾಗಿದೆ.

ದುಬಾರಿ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಬೊಲೆರೊ

ಬೊಲೆರೊ ಬಿಎಸ್-6 ಆವೃತ್ತಿಯು ಈಗಾಗಲೇ ಮಹೀಂದ್ರಾ ಪ್ರಮುಖ ಡೀಲರ್ಸ್‌ಗಳ ಬಳಿಯಲ್ಲಿ ಕಳೆದ ತಿಂಗಳಿನಿಂದಲೇ ಸ್ಟಾಕ್ ಮಾಡಲಾಗಿದ್ದು, ಕಾರು ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡುವುದು ಮಾತ್ರವೇ ಬಾಕಿಯಿದೆ.

ದುಬಾರಿ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಬೊಲೆರೊ

ಮಾಹಿತಿಗಳ ಪ್ರಕಾರ ಹೊಸ ಬೊಲೆರೊ ಕಾರು ಈ ಹಿಂದಿನ ಆೃತ್ತಿಗಿಂತಲೂ ಸಾಕಷ್ಟು ಬದಲಾವಣೆಗಳೊಂದಿಗೆ ಬಿಡುಗಡೆಗೊಳ್ಳುತ್ತಿದ್ದು, ಬೆಲೆಯಲ್ಲೂ ಕೂಡಾ ಹೊಸ ಕಾರು ಹಳೆಯ ಆವೃತ್ತಿಗಿಂತಲೂ ಹೆಚ್ಚು ದುಬಾರಿಯಾಗಿದೆ.

ದುಬಾರಿ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಬೊಲೆರೊ

ಹೊಸ ಬೊಲೆರೊ ಕಾರು ಬಿಎಸ್-4 ಆವೃತ್ತಿಗಿಂತಲೂ ರೂ.70 ಸಾವಿರಯಷ್ಟು ದುಬಾರಿಯಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಬಿ4, ಬಿ6 ಮತ್ತು ಬಿ6 ಆಪ್ಷನ್ ಆವೃತ್ತಿಗಳನ್ನು ಪಡೆದುಕೊಂಡಿದೆ. ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.98 ಲಕ್ಷ, ಮಧ್ಯಮದ ಆವೃತ್ತಿಯು ರೂ.8.64 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 8.99 ಲಕ್ಷ ಬೆಲೆ ಹೊಂದಿದೆ.

ದುಬಾರಿ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಬೊಲೆರೊ

ಇದರೊಂದಿಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಮುಂಭಾಗದಲ್ಲಿ ಬದಲಾವಣೆಗೊಳಿಸಲಾಗಿರುವ ಗ್ರಿಲ್, ಬಂಪರ್, ಹೆಡ್‌ಲ್ಯಾಂಪ್ಸ್ ಸೇರಿದಂತೆ ಒಳಭಾಗದ ವಿನ್ಯಾಸಗಳಲ್ಲೂ ಭಾರೀ ಬದಲಾವಣೆ ತರಲಾಗಿದೆ.

ದುಬಾರಿ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಬೊಲೆರೊ

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್

ಹೊಸ ಬೊಲೆರೊ ಕಾರಿನಲ್ಲಿ ಈ ಬಾರಿ ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ತ್ರಿ ಸಿಲಿಂಡರ್ ಡೀಸೆಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಹೊಸ ಎಂಜಿನ್ ನಂತರ ಮಾಲಿನ್ಯ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆಯಾಗಿರುವುದಲ್ಲದೆ ಮೈಲೇಜ್ ಪ್ರಮಾಣದಲ್ಲೂ ಸಾಕಷ್ಟು ಕಂಡಿದೆ.

ದುಬಾರಿ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಬೊಲೆರೊ

ಈ ಹಿಂದಿನಂತೆಯೇ ಹೊಸ ಕಾರಿನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 75 -ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಬಿಎಸ್-6 ಎಮಿಷನ್‌ನಿಂದ ಕಾರಿನ ಮಾಲಿನ್ಯ ಉತ್ಪಾದನೆಯು ಶೇ.25ರಷ್ಟು ಕಡಿತಗೊಂಡಿದ್ದರೆ ಮೈಲೇಜ್ ಪ್ರಮಾಣವು ಶೇ.15ರಷ್ಟು ಹೆಚ್ಚಳವಾಗಿದೆ.

ದುಬಾರಿ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಬೊಲೆರೊ

ಇನ್ನು ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಮಹೀಂದ್ರಾ ಹೊಸ ಕಾರುಗಳ ಎಂಜಿನ್ ಜೊತೆಗೆ ಪ್ರಯಾಣಿಕ ಸುರಕ್ಷತೆಯಲ್ಲೂ ಗಮನಸೆಳೆಯಲಿದ್ದು, ಸ್ಟ್ಯಾಂಡರ್ಡ್ ಫೀಚರ್ಸ್‌ಗಳಾದ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ದುಬಾರಿ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಬೊಲೆರೊ

ಹಾಗೆಯೇ ಟಾಪ್ ಎಂಡ್‌ ಆವೃತ್ತಿಗಳಲ್ಲಿ 6 ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

Source:Autocar India

Most Read Articles

Kannada
English summary
2020 Mahindra Bolero BS6 Facelift Launched In India. Read in Kannada.
Story first published: Tuesday, March 24, 2020, 18:03 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X