ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಬೊಲೆರೊ

ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯ ಎಸ್‍‍ಯುವಿ ಸರಣಿಯಲ್ಲಿ ಅತಿ ಹೆಚ್ಚು ಮಾರಾಟವಾಗುವ ವಾಹನಗಳಲ್ಲಿ ಬೊಲೆರೊ ಸಹ ಒಂದಾಗಿದೆ. ಬೊಲೆರೊ ಎಸ್‍‍ಯುವಿಯು ದೇಶಿಯ ಮಾರುಕಟ್ಟೆಯಲ್ಲಿ ದೀರ್ಘಕಾಲದಿಂದ ಉತ್ತಮವಾಗಿ ಮಾರಾಟವಾಗುತ್ತಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಬೊಲೆರೊ

ಮುಂದಿನ ಏಪ್ರಿಲ್ ತಿಂಗಳಿನಲ್ಲಿ ಮಾಲಿನ್ಯ ನಿಯಂತ್ರಿಸಲು ಕೇಂದ್ರ ಸರ್ಕಾರವು ಬಿಎಸ್-6 ಮಾಲಿನ್ಯ ನಿಯಮವನ್ನು ಜಾರಿಗೊಳಿಸುತ್ತಿದೆ. ಇದೀಗ ಜನಪ್ರಿಯ ಕಾರು ಉತ್ಪಾದಕರು ತಮ್ಮ ಸರಣಿಯಲ್ಲಿರುವ ಕಾರುಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುತ್ತಿದ್ದಾರೆ. ಮಹೀಂದ್ರಾ ಕಂಪನಿಯು ಸಹ ತನ್ನ ಸರಣಿಯಲ್ಲಿನ ಪ್ರಮುಖ ಮಾದರಿಯನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವುದರಲ್ಲಿ ನಿರತವಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಬೊಲೆರೊ

ಇದರ ಭಾಗವಾಗಿ ಕಂಪನಿಯ ಜನಪ್ರಿಯ ಎಸ್‍‍ಯುವಿಯಾದ ಬೊಲೆರೊವನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುತ್ತಿದೆ. ಮಹೀಂದ್ರಾ ಕಂಪನಿಯು ತನ್ನ ಬೊಲೆರೊ ಎಸ್‍‍ಯುವಿಯಲ್ಲಿ ಬಿಎಸ್-6 ಎಂಜಿನ್‍‍ನೊಂದಿಗೆ ಸ್ಪಾಟ್ ಟೆಸ್ಟ್ ನಡೆಸಿದೆ. ಭಾರತದ ರಸ್ತೆಗಳಲ್ಲಿ ಹೊಸ ಬೊಲೆರೊ ಎಸ್‍‍ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಆಟೋಕಾರ್ ಬಹಿರಂಗಪಡಿಸಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಬೊಲೆರೊ

ಬಿಎಸ್-6 ಬೊಲೆರೊ ಎಸ್‍‍ಯುವಿನಲ್ಲಿ ಹೊಸ ಕ್ರ್ಯಾಶ್ ಟೆಸ್ಟ್ ಸುರಕ್ಷತಾ ನಿಯಮಕ್ಕೆ ಅನುಗುಣವಾಗಿ ಅದರ ಮಂಭಾಗವನ್ನು ನವೀಕರಿಸಲಾಗಿದೆ. ಮುಂಭಾಗದ ಪ್ರಯಾಣಿಕರ ಸುರಕ್ಷತೆಗೆ ಈ ಹೊಸ ನವೀಕರಣವು ಸಹಕಾರಿಯಾಗಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಬೊಲೆರೊ

ಹೊಸ ಬಿಎಸ್-6 ಮಹೀಂದ್ರಾ ಬೊಲೆರೊ ಬಾಕ್ಸೀ ವಿನ್ಯಾಸವನ್ನು ಹೊಂದಿದೆ. ಹೊಸ ಬೊಲೆರೊ ಎಸ್‍‍ಯುವಿಯಲ್ಲಿ ಹೆಚ್ಚಿನ ಸುರಕ್ಷತೆಯನ್ನು ನೀಡುವುದರಿಂದ ದೇಶಿಯ ಮಾರುಕಟ್ಟೆಯಲ್ಲಿ ಇನ್ನಷ್ಟು ಗ್ರಾಹಕರನ್ನು ಸೆಳೆಯಬಹುದು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಬೊಲೆರೊ

ಸ್ಪಾಟ್ ಟೆಸ್ಟ್ ನಲ್ಲಿ ಕಂಡು ಬಂದ ಬೊಲೆರೊದ ಮುಂಭಾಗದಲ್ಲಿ ನವೀಕರಿಸಿದ ಬಂಪರ್ ಮತ್ತು ನವೀಕರಿಸಿದ ಹೆಡ್‍‍ಲ್ಯಾಂಪ್‍‍ಗಳನ್ನು ಅಳವಡಿಸಲಾಗಿದೆ. ಈ ಹೊಸ ನವೀಕರಣದಿಂದ ಬೊಲೆರೊ ಮುಂಭಾಗವು ಆಕರ್ಷಕ ಲುಕ್ ಅನ್ನು ಹೊಂದಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಬೊಲೆರೊ

ಇನ್ನು ಹೊಸ ಬೊಲೆರೊ ಎಸ್‍‍ಯುವಿಯ ಇಂಟಿರಿಯರ್‍‍ನಲ್ಲಿ ಕೆಲವು ಹೆಚ್ಚುವರಿ ಫೀಚರ್ಸ್‍‍ಗಳನ್ನು ಅಳವಡಿಸುವ ಸಾಧ್ಯತೆಗಳಿವೆ. ಬೊಲೆರೊ ಎಸ್‍‍ಯುವಿಯು 1.5 ಲೀಟರ್ ಡೀಸೆಲ್ ಎಂಜಿನ್ ಅನ್ನು ನವೀಕರಿಸುವ ಸಾಧ್ಯತೆಗಳಿವೆ. ಈ 1.5 ಲೀಟರ್‍‍ನ ಎಂಜಿನ್ ಟಿ‍ಯುವಿ ಎಸ್‍‍ಯುವಿ ಮಾದರಿಯಲ್ಲಿ 75 ಬಿ‍‍ಹೆಚ್‍‍ಪಿ ಪವರ್ ಅನ್ನು ಉತ್ಪಾದಿಸುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಬೊಲೆರೊ

ಹೊಸ ಮಹೀಂದ್ರಾ ಬೊಲೆರೊ ಎಸ್‍‍ಯುವಿಯಲ್ಲಿ ಸುರಕ್ಷತೆಗಾಗಿ ಏರ್‍‍ಬ್ಯಾಗ್‍‍ಗಳು, ರೇರ್ ಪಾರ್ಕಿಂಗ್ ಸೆನ್ಸಾರ್ ಮತ್ತು ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ(ಎ‍‍ಬಿಎಸ್) ಅನ್ನು ಅಳವಡಿಸಬಹುದು. ಬೊಲೆರೊ ಎಸ್‍‍ಯು‍ವಿ ವಿಭಾಗದಲ್ಲಿ ಹೆಚ್ಚು ಮಾರಾಟವಾದ ಎಸ್‍ಯುವಿಗಳಲ್ಲಿ ಒಂದಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಬೊಲೆರೊ

2020ರ ಬೊಲೆರೊ ಎಸ್‍‍ಯುವಿಯ ಬೆಲೆಯು ಪ್ರಸ್ತುತ ಮಾದರಿಗಿಂತ ರೂ.50 ಸಾವಿರಗಳಷ್ಟು ಹೆಚ್ಚಾಗಿರಲಿದೆ. ಹೊಸ ಬೊಲೆರೊ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.

Article Published On: Friday, March 13, 2020, 19:20 [IST]
English summary
BS6-compliant Mahindra Bolero ready for launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+