ಮರ್ಸಿಡಿಸ್ ಬೆಂಝ್ ಟಯರ್‌ನಲ್ಲಿ ಮಿಂಚಿದ ಮಹೀಂದ್ರಾ ಬೊಲೆರೊ
ಮಹೀಂದ್ರಾ ಕಂಪನಿಯು ಜನಪ್ರಿಯ ಬೊಲೆರೊ ಎಸ್‍ಯುವಿಯನ್ನು ಮೊದಲ ಬಾರಿಗೆ 2000ದಲ್ಲಿ ಬಿಡುಗಡೆಗೊಳಿಸಿದ್ದರು. ಇಂದಿಗೂ ಮಹೀಂದ್ರಾ ಕಂಪನಿಯಎಸ್‍ಯುವಿ ಸರಣಿಯಲ್ಲಿ ಅತಿ ಹೆಚ್ಚು ಮಾರಾಟವಾಗುವ ವಾಹನಗಳಲ್ಲಿ ಬೊಲೆರೊ ಕೂಡ ಒಂದಾಗಿದೆ.

ಪಂಜಾಬ್‌ನ ಲುಧಿಯಾನದಲ್ಲಿರುವ ಕಸ್ಟಮೈಸ್ ಬೊಲೆರೊ ಅಂತರ್ಜಾಲದಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ಬೊಲೆರೊದಲ್ಲಿ ಮರ್ಸಿಡಿಸ್ ಬೆಂಝ್ ಜಿ-ವ್ಯಾಗನ್ ಎಸ್‍ಯುವಿಯ 20 ಇಂಚಿನ ರಿಪ್ಲಿಕ್ ಅಲಾಯ್ ವ್ಹೀಲ್ ಅನ್ನು ಅಳವಡಿಸಲಾಗಿದೆ.ಈ ಮಲ್ಟಿ-ಸ್ಪೋಕ್ ವ್ಹೀಲ್ ಗಳ ಸ್ಟೈಲಿಂಗ್ ಮರ್ಸಿಡಿಸ್ ಬೆಂಝ್ ಎಎಂಜಿ ಸರಣಿಯಿಂದ ಸ್ಫೂರ್ತಿ ಪಡೆದಿದೆ. ಈ ಮರ್ಸಿಡಿಸ್ ಬೆಂಜ್ ವ್ಯಾಗನ್ ಟಯರ್ ನಲ್ಲಿ ಬೊಲೆರೊ ಆಕರ್ಷಕ ಲುಕ್ ಅನ್ನು ಹೊಂದಿದೆ.

ಕಸ್ಟಮೈಸ್ ಮಾಡಿದ ಬೊಲೆರೊ ಮುಂಭಾಗದ ಆಕ್ಸಲ್ ಮತ್ತು ಹಿಂಭಾಗಕ್ಕಿಂತ ವಿಶಾಲವಾದ ಟ್ರ್ಯಾಕ್ ಅನ್ನು ಹೊಂದಿರುವುದರಿಂದ, ಕಸ್ಟಮ್ ಸ್ಪೇಸರ್‌ಗಳನ್ನು ಬಳಸಲಾಗುತ್ತದೆ. ಈ ದೊಡ್ಡ ಟಯರ್ ಬೊಲೆರೊ ಎಸ್‍ಯುವಿಗೆ ಆಗ್ರೇಸಿವ್ ಲುಕ್ ಅನ್ನು ನೀಡಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ಬಿಎಸ್-6 ಬೊಲೆರೊ ಎಸ್‍ಯುವಿಯನ್ನು ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ಹೊಸ ಬೊಲೆರೊ ಎಸ್‍ಯುವಿಗಾಗಿ ಮಹೀಂದ್ರಾ ಕಂಪನಿಯು ಬುಕ್ಕಿಂಗ್ ಅನ್ನು ಕೂಡ ಆರಂಭಿಸಿದೆ.

ಹೊಸ ಬೊಲೆರೊ ಎಸ್‍ಯುವಿಯ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.7.98 ಲಕ್ಷಗಳಾಗಿದೆ. ಗ್ರಾಹಕರು ಹೊಸ ಬೊಲೆರೊ ಎಸ್‍ಯುವಿಗಾಗಿ ಟೋಕನ್ ಮೊತ್ತ ರೂ.5,000 ಸಾವಿರ ಪಾವತಿಸಿ ಆನ್‌ಲೈನ್‌ನಲ್ಲಿ ಕಾಯ್ದಿರಿಸಬಹುದು.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಬೊಲೆರೊ ಬಿ4, ಬಿ6 ಮತ್ತು ಬಿ6(ಒ) ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಹೊಸ ಬೊಲೆರೊ ಬಿ6(ಒ) ಟಾಪ್ ಎಂಡ್ ಮಾದರಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.8.64 ಲಕ್ಷಗಳಾಗಿದೆ. ಮಹೀಂದ್ರಾ ಕಂಪನಿಯು ಈ ಬೊಲೆರೊವನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದೆ.

ಮುಂಭಾಗದ ಪ್ರಯಾಣಿಕರ ಸುರಕ್ಷತೆಗೆ ಈ ಹೊಸ ನವೀಕರಣವು ಸಹಕಾರಿಯಾಗಲಿದೆ. ಹೊಸ ಬೊಲೆರೊ ಮುಂಭಾಗದಲ್ಲಿ ಹೊಸ ಬಂಪರ್, ಗ್ರಿಲ್ ಮತ್ತು ಮರುವಿನ್ಯಾಸಗೊಳಿಸಲಾದ ಹೆಡ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಹೊಸ ಬೊಲೆರೊ ಆಕರ್ಷಕ ಲುಕ್ ಅನ್ನು ಹೊಂದಿದೆ.
MOST READ: ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಫೋಕ್ಸ್‌ವ್ಯಾಗನ್ ಪಸಾಟ್

ಹೊಸ ಬೊಲೆರೊದಲ್ಲಿ 1.5 ಎಲ್ 3-ಸಿಲಿಂಡರ್ ಎಮ್ಹಾಕ್ 75 ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ 1.5 ಲೀಟರ್ ಎಂಜಿನ್ 75 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ ಈ ಎಂಜಿನ್ 195 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮಾನ್ಯುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಹೊಸ ಬಿಎಸ್-6 ಮಹೀಂದ್ರಾ ಬೊಲೆರೊ ಬಾಕ್ಸೀ ವಿನ್ಯಾಸವನ್ನು ಹೊಂದಿದೆ. ಹೊಸ ಬೊಲೆರೊ ಎಸ್‍ಯುವಿಯಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಿದೆ. ಬೊಲೆರೊ ಎಸ್‍ಯುವಿ ವಿಭಾಗದಲ್ಲಿ ಹೆಚ್ಚು ಮಾರಾಟವಾಗುವ ಎಸ್‍ಯುವಿಗಳಲ್ಲಿ ಒಂದಾಗಿದೆ.


Click it and Unblock the Notifications