Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನವೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಬೊಲೆರೊ
ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ಬಿಎಸ್-6 ಬೊಲೆರೊ ಎಸ್‍ಯುವಿಯನ್ನು ಈ ವರ್ಷದ ಮಾರ್ಚ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ಭಾರತದಲ್ಲಿ ಈ ಜನಪ್ರಿಯ ಮಹೀಂದ್ರಾ ಬೊಲೆರೊ ಎಸ್‍ಯುವಿಯ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ.

2020ರ ನವೆಂಬರ್‌ನಲ್ಲಿ ಮಹೀಂದ್ರಾ ಬೊಲೆರೊ 6,055 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಮಹೀಂದ್ರಾ ಬೊಲೆರೊ 6,055 ಯುನಿಟ್‌ಗಳು ಮಾರಾಟವಾಗಿತ್ತು. ಕಳೆದ ವರ್ಷದ ನವೆಂಬರ್ ತಿಂಗಳಿಗೆ ಹೋಲಿಸಿದರೆ ಈ ವರ್ಷದ ಅದೇ ಅವಧಿಗೆ ಶೇ.18.10 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಈ ವರ್ಷದ ಅಕ್ಟೋಬರ್ ತಿಂಗಳಲ್ಲಿ ಬೊಲೆರೊ 7,624 ಯುನಿಟ್‌ಗಳು ಮಾರಾಟವಾಗಿತ್ತು.

ಭಾರತೀಯ ಮಾರುಕಟ್ಟೆಯಲ್ಲಿ ನವೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿ ವಿಭಾಗದ ಪಟ್ಟೆಯಲ್ಲಿ ಬೊಲೆರೊ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮಹೀಂದ್ರಾ ಬೊಲೆರೊ ಕೈಗೆಟುಕುವ ಬೆಲೆ ಮತ್ತು ಒರಟಾದ ಯುಟಿಲಿಟಿ ವಾಹನವಾಗಿದೆ.
MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಮಹೀಂದ್ರಾ ಕಂಪನಿಯು ಜನಪ್ರಿಯ ಬೊಲೆರೊ ಎಸ್‍ಯುವಿಯನ್ನು ಮೊದಲ ಬಾರಿಗೆ 2000ದಲ್ಲಿ ಬಿಡುಗಡೆಗೊಳಿಸಿದ್ದರು. ಇಂದಿಗೂ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಬಿಎಸ್-6 ಬೊಲೆರೊ ಬಿ4, ಬಿ6 ಮತ್ತು ಬಿ6(ಒ) ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಬಿಎಸ್-6 ಮಹೀಂದ್ರಾ ಬೊಲೆರೊ ಬೆಲೆಯು ದೆಹಲಿಯ ಎಕ್ಸ್ ಶೋರೂಂ ಪ್ರಕಾರ ರೂ.7.64 ಲಕ್ಷದಿಂದ ರೂ.9.01 ಲಕ್ಷಗಳಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಬೊಲೆರೊ ಮುಂಭಾಗದಲ್ಲಿ ಹೊಸ ಬಂಪರ್, ಗ್ರಿಲ್ ಮತ್ತು ಮರುವಿನ್ಯಾಸಗೊಳಿಸಲಾದ ಹೆಡ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಈ ಹೊಸ ಬೊಲೆರೊ ಆಕರ್ಷಕ ಲುಕ್ ಅನ್ನು ಹೊಂದಿದೆ.

ಬಿಎಸ್-6 ಬೊಲೆರೊ ಎಸ್‍ಯುವಿನಲ್ಲಿ ಹೊಸ ಕ್ರ್ಯಾಶ್ ಟೆಸ್ಟ್ ಸುರಕ್ಷತಾ ನಿಯಮಕ್ಕೆ ಅನುಗುಣವಾಗಿ ಅದರ ಮಂಭಾಗವನ್ನು ನವೀಕರಿಸಲಾಗಿದೆ. ಮುಂಭಾಗದ ಪ್ರಯಾಣಿಕರ ಸುರಕ್ಷತೆಗೆ ಈ ಹೊಸ ನವೀಕರಣವು ಸಹಕಾರಿಯಾಗಲಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಫಾಗ್ ಲ್ಯಾಂಪ್, ಮತ್ತು ಪ್ರಯಾಣಿಕರ ಬದಿಯ ಏರ್‌ಬ್ಯಾಗ್ ಅನ್ನು ಈ ಬಿಎಸ್-6 ಬೊಲೆರೊ ಎಸ್‍ಯುವಿಯ ಟಾಪ್-ಎಂಡ್ ಮಾದರಿಯಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತದೆ. ಇದರಲ್ಲಿ ಎಸಿ ವೆಂಟ್ಸ್ ಗಳನ್ನು ನೀಡಲಾಗಿಲ್ಲ.

ಬಿಎಸ್-6 ಬೊಲೆರೊದಲ್ಲಿ 1.5 ಎಲ್ 3-ಸಿಲಿಂಡರ್ ಎಮ್ಹಾಕ್ 75 ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ 1.5 ಲೀಟರ್ ಎಂಜಿನ್ 75 ಬಿಹೆಚ್‍ಪಿ ಪವರ್ ಮತ್ತು 195 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮಾನ್ಯುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಮಹೀಂದ್ರಾ ಬೊಲೆರೊವನ್ನು ಮೊದಲ ಬಾರಿಗೆ ಭಾರತದಲ್ಲಿ 2000 ರಲ್ಲಿ ಪರಿಚಯಿಸಲಾಯಿತು, ಮತ್ತು ವರ್ಷಗಳಲ್ಲಿ ಕೆಲವು ಫೇಸ್‌ಲಿಫ್ಟ್‌ಗಳ ಹೊರತಾಗಿ, ವಾಹನವು ಒಂದೇ ಆಗಿರುತ್ತದೆ. ಅದರ ಇತ್ತೀಚಿನ ಅವತಾರದಲ್ಲಿ, ಬೊಲೆರೊ ಉಪ -4 ಮೀಟರ್ ವಾಹನವಾಗಿದೆ; ಇದರ ಉದ್ದ 3,995 ಮಿಮೀ, ಅಗಲ 1,745 ಎಂಎಂ, ಎತ್ತರ 1,880 ಎಂಎಂ, 2,680 ಎಂಎಂ ಉದ್ದದ ವೀಲ್‌ಬೇಸ್ ಹೊಂದಿದೆ.

ಬಿಎಸ್-6 ಮಹೀಂದ್ರಾ ಬೊಲೆರೊ ಸಬ್-4 ಮೀಟರ್ ವಾಹನವಾಗಿದೆ. ಹೊಸ ಮಹೀಂದ್ರಾ ಬೊಲೆರೊ 3,995 ಎಂಎಂ ಉದ್ದ, 1,745 ಎಂಎಂ ಅಗಲ ಮತ್ತು 1,880 ಎಂಎಂ ಎತ್ತರವನ್ನು ಹೊಂದಿದೆ. ಇದರೊಂದಿಗೆ ಬೊಲೆರೊ 2,680 ಎಂಎಂ ಉದ್ದದ ವ್ಹೀಲ್‌ಬೇಸ್ ಅನ್ನು ಹೊಂದಿದೆ.

ಬಿಎಸ್-6 ಮಹೀಂದ್ರಾ ಬೊಲೆರೊ ಬಾಕ್ಸೀ ವಿನ್ಯಾಸವನ್ನು ಹೊಂದಿದೆ. ಹೊಸ ಬೊಲೆರೊ ಎಸ್‍ಯುವಿಯಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಿದೆ. ಮಹೀಂದ್ರಾ ಬೊಲೆರೊ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡೀಕೆಯನ್ನು ಪಡೆದುಕೊಂಡಿದೆ.