ಸ್ವಾತಂತ್ರ್ಯ ಸಂಭ್ರಮಕ್ಕಾಗಿ ಮಹೀಂದ್ರಾ ಕಾರು ಮಾದರಿಗಳ ಮೇಲೆ ಭರ್ಜರಿ ಆಫರ್

ಕಾರು ಮಾರಾಟ ಸುಧಾರಣೆಗಾಗಿ ಮಹೀಂದ್ರಾ ಕಂಪನಿಯು ತನ್ನ ವಿವಿಧ ಕಾರು ಮಾದರಿಗಳ ಮೇಲೆ ಹಲವಾರು ಆಫರ್‌ಗಳನ್ನು ಘೋಷಣೆ ಮಾಡಿದ್ದು, ಕಾರು ಮಾದರಿಗಳಿಗೆ ಅನುಗುಣವಾಗಿ ರೂ. 13,500 ದಿಂದ ರೂ.3.05 ಲಕ್ಷದ ತನಕ ಆಫರ್ ನೀಡುತ್ತಿದೆ.

ಸ್ವಾತಂತ್ರ್ಯ ಸಂಭ್ರಮಕ್ಕಾಗಿ ಮಹೀಂದ್ರಾ ಕಾರು ಮಾದರಿಗಳ ಮೇಲೆ ಆಫರ್

ಮಹೀಂದ್ರಾ ಕಂಪನಿಯು ಕಳೆದ ತಿಂಗಳು ಕಾರು ಮಾರಾಟದಲ್ಲಿ ಭಾರೀ ಪ್ರಮಾಣದ ಹಿನ್ನಡೆ ಅನುಭವಿಸಿದ್ದು, ಮುಂಬರುವ ದಿನಗಳಲ್ಲಿ ಹೊಸ ಕಾರುಗಳ ಮಾರಾಟವು ಚೇತರಿಸಿಕೊಳ್ಳುವ ವಿಶ್ವಾಸ ಹೊಂದಿದೆ. ಹೀಗಾಗಿ ಅಗಸ್ಟ್ ತಿಂಗಳ ಅವಧಿಗಾಗಿ ವಿವಿಧ ಕಾರು ಮಾದರಿಗಳ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ್ದು, ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಕಾರು ಖರೀದಿಸುವ ಗ್ರಾಹಕರಿಗೆ ಅತ್ಯುತ್ತಮ ಆಫರ್ ಘೋಷಣೆ ಮಾಡಿದೆ.

ಸ್ವಾತಂತ್ರ್ಯ ಸಂಭ್ರಮಕ್ಕಾಗಿ ಮಹೀಂದ್ರಾ ಕಾರು ಮಾದರಿಗಳ ಮೇಲೆ ಆಫರ್

ಕೆಯುವಿ100 ನೆಕ್ಸ್ಟ್

ಮಹೀಂದ್ರಾ ಎಂಟ್ರಿ ಲೆವಲ್ ಮೈಕ್ರೋ ಎಸ್‌ಯುವಿ ಕಾರು ಮಾದರಿಯಾದ ಕೆಯುವಿ100 ನೆಕ್ಸ್ಟ್ ಕಾರು ಮಾದರಿಯ ಮೇಲೆ ರೂ.62 ಸಾವಿರದಷ್ಟು ಆಫರ್ ನೀಡುತ್ತಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಬೋನಸ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿದೆ.

ಸ್ವಾತಂತ್ರ್ಯ ಸಂಭ್ರಮಕ್ಕಾಗಿ ಮಹೀಂದ್ರಾ ಕಾರು ಮಾದರಿಗಳ ಮೇಲೆ ಆಫರ್

ಎಕ್ಸ್‌ಯುವಿ300

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಎಕ್ಸ್‌ಯುವಿ300 ಕಾರು ಖರೀದಿಯ ಮೇಲೆ ಒಟ್ಟು ರೂ. 29,500 ಡಿಸ್ಕೌಂಟ್ ಲಭ್ಯವಿದ್ದು, ಹೊಸ ಆಫರ್‌ನಲ್ಲಿ ಎಕ್ಸ್‌ಚೆಂಜ್ ಬೋನಸ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿದೆ.

ಸ್ವಾತಂತ್ರ್ಯ ಸಂಭ್ರಮಕ್ಕಾಗಿ ಮಹೀಂದ್ರಾ ಕಾರು ಮಾದರಿಗಳ ಮೇಲೆ ಆಫರ್

ಇದಲ್ಲದೆ ಕಳೆದ ವಾರವಾರಷ್ಟೆ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಕಾರಿನ ಬೆಲೆಯಲ್ಲಿ ಇಳಿಕೆ ಸಹ ಮಾಡಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.1 ಸಾವಿರದಿಂದ ರೂ.87 ಸಾವಿರ ತನಕ ಬೆಲೆ ಇಳಿಕೆ ಮಾಡಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಗ್ರಾಹಕರ ಆಕರ್ಷಣೆಗಾಗಿ ಬೆಲೆ ಇಳಿಕೆಯ ನಿರ್ಧಾರ ಪ್ರಕಟಿಸಿದೆ.

ಸ್ವಾತಂತ್ರ್ಯ ಸಂಭ್ರಮಕ್ಕಾಗಿ ಮಹೀಂದ್ರಾ ಕಾರು ಮಾದರಿಗಳ ಮೇಲೆ ಆಫರ್

ಬೊಲೆರೊ

ಮಹೀಂದ್ರಾ ಜನಪ್ರಿಯ ಬೊಲೆರೊ ಕಾರು ಖರೀದಿ ಮೇಲೆ ರೂ.13,500 ಡಿಸ್ಕೌಂಟ್ ಲಭ್ಯವಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್ ಆಫರ್, ಕಾರ್ಪೊರೆಟ್ ಬೊನಸ್ ಮತ್ತು ಕ್ಯಾಶ್ ಡಿಸ್ಕೌಂಟ್ ಸಹ ಲಭ್ಯವಿರಲಿವೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಸ್ವಾತಂತ್ರ್ಯ ಸಂಭ್ರಮಕ್ಕಾಗಿ ಮಹೀಂದ್ರಾ ಕಾರು ಮಾದರಿಗಳ ಮೇಲೆ ಆಫರ್

ಸ್ಕಾರ್ಪಿಯೋ

ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ ಕಾರು ಖರೀದಿಯ ಮೇಲೆ ರೂ.60 ಸಾವಿರ ತನಕ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳು ಎಕ್ಸ್‌ಚೆಂಜ್ ಬೋನಸ್, ಕ್ಯಾಶ್ ಡಿಸ್ಕೌಂಟ್ ಮತ್ತು ಎಸ್5 ವೆರಿಯೆಂಟ್ ಮೇಲೆ ಹೆಚ್ಚುವರಿಯಾಗಿ ರೂ.10 ಸಾವಿರ ಕ್ಯಾಶ್ ಡಿಸ್ಕೌಂಟ್ ಲಭ್ಯವಿದೆ.

ಸ್ವಾತಂತ್ರ್ಯ ಸಂಭ್ರಮಕ್ಕಾಗಿ ಮಹೀಂದ್ರಾ ಕಾರು ಮಾದರಿಗಳ ಮೇಲೆ ಆಫರ್

ಎಕ್ಸ್‌ಯುವಿ500

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ500 ಕಾರು ಖರೀದಿಯ ಮೇಲೆ ರೂ.48,800 ಡಿಸ್ಕೌಂಟ್ ನೀಡುತ್ತಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಡಿಸ್ಕೌಂಟ್ ಲಭ್ಯವಿದೆ. ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಕ್ಯಾಶ್ ಬ್ಯಾಕ್ ಆಫರ್ ನೀಡಲಾಗುತ್ತಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಸ್ವಾತಂತ್ರ್ಯ ಸಂಭ್ರಮಕ್ಕಾಗಿ ಮಹೀಂದ್ರಾ ಕಾರು ಮಾದರಿಗಳ ಮೇಲೆ ಆಫರ್

ಅಲ್ಟುರಾಸ್ ಜಿ4

ಮಹೀಂದ್ರಾ ಕಂಪನಿ ತನ್ನ ಹೈ ಎಂಡ್ ಎಸ್‌ಯುವಿ ಕಾರು ಮಾದರಿಯಾದ ಅಲ್ಟುರಾಸ್ ಜಿ4 ಕಾರು ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ್ದು, ಹೊಸ ಕಾರು ಖರೀದಿಸುವ ಗ್ರಾಹಕರಿಗೆ ರೂ. 3.05 ಲಕ್ಷದಷ್ಟು ಆಫರ್ ನೀಡುತ್ತಿದೆ. ಹೊಸ ಆಫರ್‌ನಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಲಭ್ಯವಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯಕ್ಕೆ ಮುಕ್ತಾಯಗೊಳ್ಳಲಿವೆ.

Article Published On: Friday, August 14, 2020, 10:17 [IST]
English summary
Mahindra Car Discounts & Independence Day Offers. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+