ಹೊಸ ಥಾರ್ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಮಹೀಂದ್ರಾ
ಮಹೀಂದ್ರಾ ಕಂಪನಿಯು ನ್ಯೂ ಜನರೇಷನ್ ಥಾರ್ ಕಾರು ಮಾದರಿಯ ಮಾರಾಟದಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿದ್ದು, ಅಕ್ಟೋಬರ್ 2ರಂದು ಬಿಡುಗಡೆಯಾದ ಹೊಸ ಕಾರು ಇದುವರೆಗೆ ಬರೋಬ್ಬರಿ 20 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದೆ.

ಥಾರ್ ಹೊಸ ಕಾರು ಖರೀದಿಗೆ ಬುಕ್ಕಿಂಗ್ ನಂತರ ಕನಿಷ್ಠ 6 ವಾರಗಳಿಂದ ಗರಿಷ್ಠ 25 ವಾರಗಳ ಕಾಲ ಕಾಯಲೇಬೇಕಿದ್ದು, ಕಾಯುವಿಕೆ ಅವಧಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದೆ. ಸಾಫ್ಟ್ ಟಾಪ್ ಮತ್ತು ಹಾರ್ಡ್ ಟಾಪ್ ಮಾದರಿಗಳಲ್ಲಿ ಖರೀದಿ ಲಭ್ಯವಿರುವ ಹೊಸ ಕಾರು ಮಾದರಿಯು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿರುವುದರಿಂದ ಆರಂಭಿಕ ವೆರಿಯೆಂಟ್‌ಗಳ ಬುಕ್ಕಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳಿಗೆ ಹೆಚ್ಚು ಬೇಡಿಕೆಯಿದ್ದು, ಕೆಲ ದಿನಗಳ ತನಕ ಆಯ್ದ ಮಾದರಿಗಳ ಬುಕ್ಕಿಂಗ್ ಸ್ವಿಕಾರವನ್ನು ತಡೆಹಿಡಿಯಲಾಗಿದೆ.

ಕಾರು ವಿತರಣೆಯು ಸುಧಾರಿಸಿದ ನಂತರ ಮತ್ತೆ ಬುಕ್ಕಿಂಗ್ ಆರಂಭವಾಗಲಿದ್ದು, ಟಾಪ್ ಎಂಡ್ ಮಾದರಿಗಳ ಮಾರಾಟಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಟಾಪ್ ಎಂಡ್ ಮಾದರಿಗಳ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆಯಿಲ್ಲ ಎನ್ನಲಾಗಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಸೇರಿದಂತೆ ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 9.80 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತ್ಯುತ್ತಮ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ. ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಹೊಸ ಕಾರಿನ ಹೊರಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಲಾಗಿದೆ.

ಮರುವಿನ್ಯಾಸಗೊಳಿಸಲಾದ ಸೆವೆನ್ ಸ್ಲಾಟ್ ಗ್ರಿಲ್, ವೃತ್ತಾಕಾರವಾದ ಹೆಡ್‌ಲ್ಯಾಂಪ್, 18-ಇಂಚಿನ ಆಕರ್ಷಕ ಅಲಾಯ್ ವೀಲ್ಹ್, ಡ್ಯುಯಲ್ ಟೋನ್ ಬಂಪರ್, ಸ್ಕಫ್ ಪ್ಲೇಟ್, ಬಾಕ್ಸಿ ಮಾದರಿಯಲ್ಲಿರುವ ಟೈಲ್ ಲೈಟ್‌ನೊಂದಿಗೆ ಮಾರ್ಡನ್ ಶೈಲಿ ಪಡೆದುಕೊಂಡಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದ್ದು, ಗ್ರಾಹಕರು ತಮ್ಮ ಬೇಡಿಕೆ ಅನುಗುಣವಾಗಿ ಎಎಕ್ಸ್ ಮ್ಯಾನುವಲ್ ಸಾಫ್ಟ್ ಟಾಪ್ ಮತ್ತು ಎಲ್ಎಕ್ಸ್ ಮಾದರಿಯಲ್ಲಿ ಕನ್ವರ್ಟಿಬಲ್ ಹಾಗೂ ಹಾರ್ಡ್ ಟಾಪ್ ಆಯ್ಕೆ ಮಾಡಬಹುದಾಗಿದೆ.

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಥಾರ್ ಡೀಸೆಲ್ ಮಾದರಿಯು 132-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಪೆಟ್ರೋಲ್ ಮಾದರಿಯು 152-ಬಿಎಚ್‌ಪಿ, 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು. ಈ ಮೂಲಕ ಪ್ರಯಾಣಿಕರ ಸುರಕ್ಷತೆಯಲ್ಲೂ ಗಮನಸೆಳೆಯಲಿದೆ.


Click it and Unblock the Notifications








