Just In
- 39 min ago
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- 1 hr ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 2 hrs ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 3 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
Don't Miss!
- News
ಕೊವ್ಯಾಕ್ಸಿನ್ ಬಗ್ಗೆ ಎಚ್ಚರ: ಲಸಿಕೆಯು ಯಾರಿಗೆ ಸೂಕ್ತ, ಯಾರಿಗೆ ಸೂಕ್ತವಲ್ಲ?
- Finance
34,000 ರುಪಾಯಿ ತನಕ ಕಾರುಗಳ ಬೆಲೆ ಏರಿಕೆ ಮಾಡಿದ ಮಾರುತಿ ಸುಜುಕಿ
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನವೆಂಬರ್ ಅವಧಿಯಲ್ಲಿ ಗರಿಷ್ಠ ಪ್ರಮಾಣದ ಥಾರ್ ವಿತರಣೆ ಮಾಡಿದ ಮಹೀಂದ್ರಾ
ಮಹೀಂದ್ರಾ ಕಂಪನಿಯು 2020ರ ಥಾರ್ ಕಾರು ಮಾದರಿಗೆ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಂಡಿದ್ದು, ಬೇಡಿಕೆ ಅನುಸಾರವಾಗಿ ಹೊಸ ಕಾರಿನ ಉತ್ಪಾದನೆಯನ್ನು ಪ್ರತಿ ತಿಂಗಳು 2 ಸಾವಿರದಿಂದ 3 ಸಾವಿರಕ್ಕೆ ಏರಿಕೆ ಮಾಡಲಾಗಿದೆ.

ಥಾರ್ ಕಾರಿಗೆ ಭಾರೀ ಪ್ರಮಾಣದ ಬೇಡಿಕೆ ಸಲ್ಲಿಕೆಯಾಗಿರುವುದರಿಂದ ಹೊಸ ಕಾರು ಕಾರು ಖರೀದಿಗೆ ಕನಿಷ್ಠ 6ರಿಂದ 8 ತಿಂಗಳು ಕಾಯಲೇಬೇಕಿದ್ದು, ಹೊಸ ಕಾರಿಗೆ ಇದುವರೆಗೆ ಸುಮಾರು 25 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ದಾಖಲಾಗಿವೆ. ಆದರೆ ಮಹೀಂದ್ರಾ ಕಂಪನಿಯು ಪ್ರತಿ ತಿಂಗಳು ಥಾರ್ ಮಾದರಿಗಾಗಿ 2 ಸಾವಿರ ಯುನಿಟ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಗ್ರಾಹಕರ ಬೇಡಿಕೆ ಪೂರೈಕೆಗಾಗಿ ಇದೀಗ ಉತ್ಪಾದನಾ ಪ್ರಮಾಣವನ್ನು 3 ಸಾವಿರಕ್ಕೆ ಹೆಚ್ಚಿಸಲಾಗಿದೆ.

ಉತ್ಪಾದನಾ ಪ್ರಮಾಣವು ಹೆಚ್ಚಳವಾಗಿರುವುದರಿಂದ ಕಾಯುವಿಕೆಯ ಅವಧಿಯಲ್ಲಿ ಸಾಕಷ್ಟು ಇಳಿಕೆಯಾಗಲಿದ್ದು, ನವೆಂಬರ್ ಅವಧಿಯಲ್ಲಿ ಒಟ್ಟು 2,569 ಯುನಿಟ್ ವಿತರಣೆ ಮಾಡಿದೆ. ಉತ್ಪಾದನಾ ಪ್ರಮಾಣ ಹೆಚ್ಚಿರುವ ಹಿನ್ನಲೆ ಈ ತಿಂಗಳಿನಿಂದ ವಿತರಣೆ ಹೆಚ್ಚಾಗಲಿದ್ದು, ಆಫ್ ರೋಡ್ ಕಾರು ಖರೀದಿಗೆ ಭಾರೀ ಬೇಡಿಕೆ ಹರಿದುಬರುತ್ತಿದೆ.

ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ನ್ಯೂ ಜನರೇಷನ್ ಮಾದರಿಯೊಂದಿಗೆ ಎಂಜಿನ್, ವಿನ್ಯಾಸ ಮತ್ತು ತಾಂತ್ರಿಕ ಅಂಶಗಳಲ್ಲಿ ಸಾಕಷ್ಟು ಬದಲಾವಣೆ ಪಡೆದುಕೊಂಡಿದೆ.

ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ. ವೆರಿಯೆಂಟ್ ಬದಲಾವಣೆ ನಂತರ ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.90 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್ಬೋರ್ಡ್ನೊಂದಿಗೆ ಆ್ಯಪಲ್ ಕಾರ್ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.