ಕೋವಿಡ್ 19: 1 ಲಕ್ಷ ಮಾಸ್ಕ್‌ಗಳನ್ನು ವಿತರಿಸಿದ ಮಹೀಂದ್ರಾ

ಭಾರತದಲ್ಲಿ ಕರೋನಾ ವೈರಸ್ ಹರಡುವಿಕೆ ನಿಧಾನವಾಗಿ ಹೆಚ್ಚಾಗುತ್ತಿದೆ. ದಕ್ಷಿಣ ಭಾರತದಲ್ಲಿ ವೈರಸ್ ಹರಡುವಿಕೆ ಪ್ರಮಾಣ ಕಡಿಮೆಯಾಗಿದ್ದರೂ, ಉತ್ತರ ಭಾರತದಲ್ಲಿ ಸೋಂಕು ಹರಡುವಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಲಕ್ಷ ಮಾಸ್ಕ್‌ಗಳನ್ನು ವಿತರಿಸಿದ ಮಹೀಂದ್ರಾ

ಇದರಿಂದಾಗಿ ಆಸ್ಪತ್ರೆಗಳಲ್ಲಿ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕರೋನಾ ಸಂತ್ರಸ್ತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಡಾಕ್ಟರ್‌ಗಳು, ನರ್ಸ್‌ಗಳು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ಹರಡದಂತೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ.

ಲಕ್ಷ ಮಾಸ್ಕ್‌ಗಳನ್ನು ವಿತರಿಸಿದ ಮಹೀಂದ್ರಾ

ಡಾಕ್ಟರ್‌ಗಳು, ನರ್ಸ್‌ಗಳು ತಮ್ಮ ಜೀವದ ಹಂಗು ತೊರೆದು ಕರೋನಾ ಸಂತ್ರಸ್ತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಈ ಕಾರಣಕ್ಕೆ ಡಾಕ್ಟರ್‌ಗಳು, ನರ್ಸ್‌ಗಳ ರಕ್ಷಣೆಗಾಗಿ ಹೆಚ್ಚಿನ ಸಂಖ್ಯೆಯ ಮಾಸ್ಕ್‌ಗಳ ಅಗತ್ಯವಿದೆ.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಲಕ್ಷ ಮಾಸ್ಕ್‌ಗಳನ್ನು ವಿತರಿಸಿದ ಮಹೀಂದ್ರಾ

ಮಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಈಗಾಗಲೇ ಹಲವು ವಾಹನ ತಯಾರಾಕ ಕಂಪನಿಗಳು ತಮ್ಮದೇ ಆದ ರೀತಿಯಲ್ಲಿ ಸರ್ಕಾರದ ಜೊತೆ ಕೈಜೋಡಿಸಿ ನೆರವು ನೀಡುತ್ತಿವೆ.

ಲಕ್ಷ ಮಾಸ್ಕ್‌ಗಳನ್ನು ವಿತರಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಸಹ ದೇಣಿಗೆ ನೀಡುವುದರ ಜೊತೆಗೆ ವೈರಸ್ ಹರಡದಂತೆ ತಡೆಯಲು ಹಲವು ಸುಧಾರಿತ ವೈದ್ಯಕೀಯ ಉಪಕರಣಗಳನ್ನು ಸಿದ್ದಪಡಿಸುತ್ತಿದ್ದು ವೈರಸ್ ವಿರುದ್ಧದ ಹೋರಾಟಕ್ಕೆ ಹೊಸ ಶಕ್ತಿ ತುಂಬುತ್ತಿದೆ.

MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಲಕ್ಷ ಮಾಸ್ಕ್‌ಗಳನ್ನು ವಿತರಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಕರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಅಗತ್ಯವಿರುವ ಹ್ಯಾಂಡ್ ಸ್ಯಾನಿಟೈಜರ್‌ನಿಂದ ವೆಂಟಿಲೇಟರ್‌ವರೆಗೆ ಎಲ್ಲಾ ಮಾದರಿಯ ವೈದ್ಯಕೀಯ ಉಪಕರಣಗಳನ್ನು ತಯಾರಿಸುತ್ತಿದೆ.

ಲಕ್ಷ ಮಾಸ್ಕ್‌ಗಳನ್ನು ವಿತರಿಸಿದ ಮಹೀಂದ್ರಾ

ಲಕ್ಷಾಂತರ ಮಾಸ್ಕ್‌ಗಳಿಗೆ ಬೇಡಿಕೆ ಉಂಟಾಗಿರುವ ಕಾರಣಕ್ಕೆ ಕಾರು ತಯಾರಾಕ ಕಂಪನಿಗಳು ಮಾಸ್ಕ್‌ಗಳ ಉತ್ಪಾದನೆಯಲ್ಲಿ ತೊಡಗಿವೆ. ಮಹೀಂದ್ರಾ ಕಂಪನಿಯು ಸಹ ವೈದ್ಯಕೀಯ ಉಪಕರಣಗಳು ಹಾಗೂ ಮಾಸ್ಕ್‌ಗಳನ್ನು ತಯಾರಿಸುತ್ತಿದೆ. ಮಹೀಂದ್ರಾ ಕಂಪನಿಯು ವೈದ್ಯಕೀಯ ಸಿಬ್ಬಂದಿಗಾಗಿ 1 ಲಕ್ಷ ಮಾಸ್ಕ್‌ಗಳನ್ನು ವಿತರಿಸಿದೆ.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಲಕ್ಷ ಮಾಸ್ಕ್‌ಗಳನ್ನು ವಿತರಿಸಿದ ಮಹೀಂದ್ರಾ

ಮಹೀಂದ್ರಾ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ ಅಧ್ಯಕ್ಷರಾದ ವಿಜಯ್ ಕಲ್ರಾರವರು ಈ ಬಗ್ಗೆ ಟ್ವೀಟ್ ಮಾಡಿ, 1 ಲಕ್ಷಕ್ಕೂ ಹೆಚ್ಚು ಫೇಸ್ ಶೀಲ್ಡ್ ಹಾಗೂ ಮಾಸ್ಕ್‌ಗಳನ್ನು ಉತ್ಪಾದಿಸಿ ವಿತರಿಸಲಾಗಿದೆ ಎಂದು ಹೇಳಿದ್ದಾರೆ.

ಲಕ್ಷ ಮಾಸ್ಕ್‌ಗಳನ್ನು ವಿತರಿಸಿದ ಮಹೀಂದ್ರಾ

ಈ ಕಾರ್ಯದಲ್ಲಿ ಭಾಗಿಯಾಗಿದ್ದ ಸ್ವಯಂಸೇವಕರು ಹಾಗೂ ಸಿಬ್ಬಂದಿಗೆ ಧನ್ಯವಾದ ಹೇಳಿರುವ ಅವರು ಉತ್ಪಾದನಾ ಘಟಕವು ಚಾಲನೆಯಲ್ಲಿದ್ದು, ಕೆಲಸ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

Most Read Articles

Kannada
English summary
Mahindra delivers 1 lakh Face shileds and masks to Corona treatment centers. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X