ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹಿಂದ್ರಾ ಇಕೆಯುವಿ100 ಎಲೆಕ್ಟ್ರಿಕ್ ಕಾರು

ಮಹೀಂದ್ರಾ ಕಂಪನಿಯು ತನ್ನ ಕೆಯುವಿ100 ಎಲೆಕ್ಟ್ರಿಕ್ ಕಾರ್ ಅನ್ನು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಬಹುನಿರೀಕ್ಷಿತ ಕೆಯುವಿ100 ಎಲೆಕ್ಟ್ರಿಕ್ ಕಾರ್ ಅನ್ನು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹಿಂದ್ರಾ ಇಕೆಯುವಿ100 ಎಲೆಕ್ಟ್ರಿಕ್ ಕಾರು

ಹೊಸ ಮಹೀಂದ್ರಾ ಕೆಯುವಿಯು100 ಎಲೆಕ್ಟ್ರಿಕ್ ಕಾರು ಲೀಥಿಯಂ ಅಯಾನ್ ಕೆಡಬ್ಲ್ಯುಹೆಚ್ ಬ್ಯಾಟರಿ ಅನ್ನು ಹೊಂದಿದೆ. ಸದ್ಯ ಮಹೀಂದ್ರಾ ಸಂಸ್ಥೆಯು ಹೊಸ ನಿಯಮಗಳಿಗೆ ಅನುಗುಣವಾಗಿ ತನ್ನ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಪಡಿಸುತಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆ ನೀಡುವ ಉದ್ದೇಶದಿಂದ ಈ ಹಿಂದಿನ ಇ2ಓ ಪ್ಲಸ್ ಕಾರಿನ ಉತ್ಪಾದನೆ ಸ್ಥಗಿತಗೊಳಿಸಿ ಹೊಸ ಉತ್ಪನ್ನಗಳ ಮೇಲೆ ಗಮನಹರಿಸುತ್ತಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹಿಂದ್ರಾ ಇಕೆಯುವಿ100 ಎಲೆಕ್ಟ್ರಿಕ್ ಕಾರು

ಫೋರ್ಡ್ ಜೊತೆ ಹೊಸ ಕಾರುಗಳ ಅಭಿವೃದ್ದಿ ಮತ್ತು ಮಾರಾಟಕ್ಕೆ ಕೈಜೋಡಿಸಿರುವ ಮಹೀಂದ್ರಾ ಸಂಸ್ಥೆಯು ಸಹಭಾಗಿತ್ವ ಯೋಜನೆಯಲ್ಲಿ ಆಸ್ಪೈರ್ ಎಲೆಕ್ಟ್ರಿಕ್ ಮತ್ತು ಕೆಯುವಿ100 ಎಲೆಕ್ಟ್ರಿಕ್ ಕಾರನ್ನು 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿ ಬಿಡುಗಡೆಗೊಳಿಸುವ ಸಾಧ್ಯತೆಗಳೂ ಕೂಡ ಇದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹಿಂದ್ರಾ ಇಕೆಯುವಿ100 ಎಲೆಕ್ಟ್ರಿಕ್ ಕಾರು

2018ರ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಕೆಯುವಿ100 ಎಲೆಕ್ಟ್ರಿಕ್ ಕಾರು ಅತ್ಯುತ್ತಮ ಮೈಲೇಜ್ ಸಾಮರ್ಥ್ಯವನ್ನು ಹೊಂದಿದ್ದು, ಎಲೆಕ್ಟ್ರಿಕ್ ಕೆಯುವಿ100 ಕಾರುಗಳು ಸಾಮಾನ್ಯ ಕೆಯುವಿ100 ಮಾದರಿಯ ಹೋಲಿಕೆ ಇದ್ದರೂ ಎಂಜಿನ್ ವಿಭಾಗದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹಿಂದ್ರಾ ಇಕೆಯುವಿ100 ಎಲೆಕ್ಟ್ರಿಕ್ ಕಾರು

ಫೆಬ್ರವರಿ ಹೊತ್ತಿಗೆ ಕೆಯುವಿ100 ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ಸಿದ್ದವಾಗುತ್ತಿದ್ದು, 40ಕೆವಿ ಮೋಟಾರ್ ಮೂಲಕ 120-ಎನ್ಎಂ ಟಾರ್ಕ್ ಉತ್ಪಾಸುತ್ತದೆ. ಮಹೀಂದ್ರಾ ಕೆಯುವಿ100 ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ರಶ್‍‍ಲೇನ್ ಬಹಿರಂಗಪಡಿಸಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹಿಂದ್ರಾ ಇಕೆಯುವಿ100 ಎಲೆಕ್ಟ್ರಿಕ್ ಕಾರು

ಇನ್ನು ಕಾರಿನ ಇಂಟಿರಿಯರ್ ಹೊಸ ಕಾರು ಸಾಮಾನ್ಯ ಕಾರಿನ ಮಾದರಿಯಲ್ಲೇ ಸೀಟು‍‍ಗಳ ಸೌಲಭ್ಯವನ್ನು ಹೊಂದಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣಗಾಗಿ ಗುಣಮಟ್ಟದ ಸುರಕ್ಷಾ ಸೌಲಭ್ಯಗಳು ಮತ್ತು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.9 ಲಕ್ಷದಿಂದ ರೂ. 10 ಲಕ್ಷ ಬೆಲೆಯಲ್ಲಿ ದೊರಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹಿಂದ್ರಾ ಇಕೆಯುವಿ100 ಎಲೆಕ್ಟ್ರಿಕ್ ಕಾರು

ಕೆಯು‍ವಿ100 ಎಲೆಕ್ಟ್ರಿಕ್ ಕಾರು ಒಂದು ಬಾರಿ ಪೂರ್ಣ ಪ್ರಮಾಣದ ಚಾರ್ಜ್ ಮಾಡಿದರೆ 120 ಕಿ.ಮಿ ಚಲಿಸುತ್ತದೆ. ಈ ಕಾರಿನ ವೇಗ ಮತ್ತು ಎಂಜಿನ್ ಕ್ಷಮತೆಯು ಒದಗಿಸಲು ಇದು ಸಹಕಾರಿಯಾಗಿದೆ. ಈ ಕಾರಿನ ಅತ್ಯಾಧುನಿಕ ಫೀಚರ್ಸ್‍‍ಗಳನ್ನು ಹೊಂದಿರಲಿದೆ. ಡಿಸಿ ಚಾರ್ಜಿಂಗ್ ಸೌಲಭ್ಯಗಳೊಂದಿಗೆ ಮಾರುತಿ ಸುಜುಕಿ ಕಂಪನಿಯ ವ್ಯಾಗನ್‍ಆರ್ ಎಲೆಕ್ಟ್ರಿಕ್ ಕಾರಿಗೆ ಪೈಪೋಟಿಯನ್ನು ನೀಡುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹಿಂದ್ರಾ ಇಕೆಯುವಿ100 ಎಲೆಕ್ಟ್ರಿಕ್ ಕಾರು

ದೇಶದಲ್ಲಿ ಅಲ್ಲೊಂದು ಇಲ್ಲೊಂದು ಕಾಣುತ್ತಿದ್ದ ಎಲೆಕ್ಟ್ರಿಕ್‌ ವಾಹನಗಳು, ಇಂದು ಎಲ್ಲೆಡೆಯು ಕಾಣುತ್ತವೆ. ಇದರಿಂದ ಜನಪ್ರಿಯ ಕಂಪನಿಗಳು ಪೈಪೋಟಿಗೆ ಇಳಿದು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸುತ್ತಿವೆ. ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚಾಗಿದೆ. ನಗರ ಪ್ರದೇಶದ ಜನರು ಹೆಚ್ಚಾಗಿ ಎಲೆಕ್ಟ್ರಿಕ್ ಕಾರುಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದ್ದಾರೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹಿಂದ್ರಾ ಇಕೆಯುವಿ100 ಎಲೆಕ್ಟ್ರಿಕ್ ಕಾರು

ಪ್ರಸ್ತುತ ಮಾರುಕಟ್ಟೆಯಲ್ಲಿ ಇ-ವೆರಿಟೊ ಸೆಡಾನ್ ಕಾರನ್ನು ಮಾತ್ರವೇ ಮಾರಾಟ ಮಾಡುತ್ತಿರುವ ಮಹೀಂದ್ರಾ ಸಂಸ್ಥೆಯು ಮುಂಬರುವ ಮೇ ಅಥವಾ ಜೂನ್ ಹೊತ್ತಿಗೆ ಕೆಯುವಿ100 ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ಸಿದ್ದವಾಗುತ್ತಿದ್ದು, ತದನಂತರವಷ್ಟೇ ಎಕ್ಸ್‌ಯುವಿ300 ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

Article Published On: Tuesday, January 14, 2020, 8:45 [IST]
English summary
Mahindra eKUV100 electric mini SUV spied testing. Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+