ಭಾರತದಲ್ಲಿ ಮಾತ್ರವಲ್ಲ ವಿದೇಶಿ ಮಾರುಕಟ್ಟೆಯಲ್ಲೂ ಸದ್ದು ಮಾಡಲಿದೆ ಎಕ್ಸ್‌ಯುವಿ300 ಎಲೆಕ್ಟ್ರಿಕ್
2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಂಡಿದ್ದ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು ಮಾದರಿಯು ಮುಂದಿನ ಕೆಲವೇ ದಿನಗಳಲ್ಲಿ ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗುತ್ತಿದ್ದು, ಹೊಸ ಎಲೆಕ್ಟ್ರಿಕ್ ಕಾರು ದೇಶಿಯ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡುವ ನೀರಿಕ್ಷೆಯಲ್ಲಿದೆ.

2020-21ರ ಹಣಕಾಸು ವರ್ಷದಲ್ಲಿ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಮಾದರಿಯನ್ನು ಸೇರಿ ಮೂರು ಹೊಸ ಇವಿ ಕಾರುಗಳನ್ನು ಬಿಡುಗಡೆಯ ಯೋಜನೆಯಲ್ಲಿದ್ದ ಮಹೀಂದ್ರಾ ಕಂಪನಿಯು ಕರೋನಾ ವೈರಸ್ ಪರಿಣಾಮ ಹೊಸ ವಾಹನಗಳ ಬಿಡುಗಡೆ ಯೋಜನೆಯನ್ನು ಮುಂದಿನ ಹಣಕಾಸು ವರ್ಷಕ್ಕೆ ಮುಂದೂಡಿಕೆ ಮಾಡಿದ್ದು, ಹೊಸ ಕಾರಿನ ಅಭಿವೃದ್ದಿ ಪ್ರಕ್ರಿಯೆಗೆ ಇದೀಗ ಚಾಲನೆ ನೀಡಿದೆ. ಹೊಸ ಕಾರು ದೇಶಿಯ ಮಾರುಕಟ್ಟೆಯಲ್ಲಿ ಮಾತ್ರವಲ್ಲ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲೂ ಬಿಡುಗಡೆಯಾಗಲಿದೆ.

ಮಹೀಂದ್ರಾ ಕಂಪನಿಯು ಸದ್ಯ ಹೊಸ ನಿಯಮಗಳಿಗೆ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆ ನೀಡುವ ಉದ್ದೇಶದಿಂದ ಈ ಹಿಂದಿನ ಇ2ಓ ಪ್ಲಸ್ ಕಾರಿನ ಉತ್ಪಾದನೆ ಸ್ಥಗಿತಗೊಳಿಸಿ ಹೊಸ ಕಾರು ಉತ್ಪನ್ನಗಳ ಮೇಲೆ ಹೆಚ್ಚಿನ ಗಮನಹರಿಸುತ್ತಿದೆ.

ಗ್ರಾಹಕರ ಬೇಡಿಕೆಯೆಂತೆ ವಿಶೇಷ ಫೀಚರ್ಸ್ ಮತ್ತು ಅತ್ಯುತ್ತಮ ಬ್ಯಾಟರಿ ಆಯ್ಕೆ ಹೊಂದಲಿರುವ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು, ಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯ ವಿತರಣೆಗೆ ಚಾಲನೆ ನೀಡಲಿದೆ.

ಕೆಯುವಿ100 ಎಲೆಕ್ಟ್ರಿಕ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 8.25 ಲಕ್ಷ ಬೆಲೆಯೊಂದಿಗೆ ಬಿಡುಗಡೆಯಾಗಿದ್ದು, 40kW ಎಲೆಕ್ಟ್ರಿಕ್ ಮೋಟಾರ್ ಪ್ರತಿ ಚಾರ್ಜ್‌ಗೆ 150 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಕೆಯುವಿ100 ಎಲೆಕ್ಟ್ರಿಕ್ ಕಾರು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಬಿಡುಗಡೆಗೊಂಡಿದ್ದರು ವಿತರಣೆಗೆ ಇದುವರೆಗೂ ಚಾಲನೆ ನೀಡಿಲ್ಲ. ಮುಂಬರುವ ಫೆಬ್ರವರಿ ತಿಂಗಳಿನಲ್ಲಿ ವಿತರಣೆಗೆ ಚಾಲನೆ ಸಿಗಲಿದ್ದು, ತದನಂತರವಷ್ಟೇ ಎಕ್ಸ್‌ಯುವಿ300 ಬಿಡುಗಡೆಯಾಗಲಿದೆ.

ಎಕ್ಸ್‌ಯುವಿ300 ಎಲೆಕ್ಟ್ರಿಕ್ ಮಾದರಿಯು ತುಸು ದುಬಾರಿ ಬೆಲೆಯೊಂದಿಗೆ ಅತಿ ಹೆಚ್ಚು ಮೈಲೇಜ್ ಪ್ರೇರಿತ ಲೀಥಿಯಂ ಅಯಾನ್ ಬ್ಯಾಟರಿ ಬಳಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಹೊಸ ಕಾರಿನ ಬ್ಯಾಟರಿ ಕ್ಷಮತೆ ಕುರಿತಂತೆ ಇದೀಗ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹೊಸ ಕಾರಿನ ಮೈಲೇಜ್ ಪ್ರಮಾಣವು ಪ್ರತಿಸ್ಪರ್ಧಿ ಕಾರುಗಳಿಂತಲೂ ಉತ್ತಮ ಎನ್ನುವ ಮಾಹಿತಿ ಲಭ್ಯವಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು ಮಾದರಿಯು ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಎಂಜಿ ಜೆಡ್ಎಸ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದ್ದು, 312 ಕಿ.ಮೀ ಮೈಲೇಜ್ ಪ್ರೇರಿತ ನೆಕ್ಸಾನ್ ಇವಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14 ಲಕ್ಷದಿಂದ ರೂ. 16 ಲಕ್ಷಕ್ಕೆ ಮತ್ತು 340 ಕಿ.ಮೀ ಮೈಲೇಜ್ ಹೊಂದಿರುವ ಎಂಜಿ ಜೆಡ್ಎಸ್ ಇವಿ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 21 ಲಕ್ಷದಿಂದ ರೂ.24 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.

ಆದರೆ ಹೊಸದಾಗಿ ಬಿಡುಗಡೆಯಾಗುತ್ತಿರುವ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು ನೆಕ್ಸಾನ್ ಮಾದರಿಯಲ್ಲೇ ಬೆಲೆ ಪಡೆದುಕೊಳ್ಳಲಿದ್ದರೂ ನೆಕ್ಸಾನ್ ಕಾರಿಗಿಂತಲೂ ಹೆಚ್ಚು ಮೈಲೇಜ್ ಹೊಂದಿದ್ದು, ಪ್ರತಿ ಚಾರ್ಜ್‌ಗೆ 350 ಕಿ.ಮೀ ನಿಂದ 370ಕಿ.ಮೀ ಮೈಲೇಜ್ ರೇಂಜ್ ಪಡೆದುಕೊಳ್ಳಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಮೈಲೇಜ್ ಮಾಹಿತಿಯ ಹೊರತಾಗಿ ಲೀಥಿಯಂ ಅಯಾನ್ ಬ್ಯಾಟರಿ ವೈಶಿಷ್ಟ್ಯತೆಯ ಕುರಿತಾಗಿ ಯಾವುದೇ ಮಾಹಿತಿ ಬಿಟ್ಟುಕೊಡದ ಮಹೀಂದ್ರಾ ಸಂಸ್ಥೆಯು ಶೀಘ್ರದಲ್ಲೇ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ.15 ಲಕ್ಷದಿಂದ ರೂ.17 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.


Click it and Unblock the Notifications