ಒಂದೇ ದಿನದಲ್ಲಿ 34 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಕರೋನಾ ವೈರಸ್‌ನಿಂದಾಗಿ ಪ್ರಮುಖ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಆಟೋ ಉದ್ಯಮವು ಕೂಡಾ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದೆ. ಲಾಕ್‌ಡೌನ್ ವಿನಾಯ್ತಿ ನಂತರ ಆಟೋ ಉತ್ಪಾದನಾ ಚಟುವಟಿಕೆಗಳಿಗೆ ಅವಕಾಶ ಸಿಕ್ಕಿದ್ದರೂ ಗ್ರಾಹಕರಿಲ್ಲದೆ ಬಹುತೇಕ ಕಾರು ಮಾರಾಟ ಕಂಪನಿಗಳು ಕದಮುಚ್ಚುವ ಸ್ಥಿತಿಗೆ ತಲುಪಿವೆ.

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಸದ್ಯ ಕರೋನಾ ವೈರಸ್ ಪರಿಣಾಮ ದೇಶದಲ್ಲಿ ಆಟೋ ಉದ್ಯಮವು ಮಂದಗತಿಯಲ್ಲಿ ಸಾಗಿದ್ದು, ಹೊಸ ವಾಹನ ಖರೀದಿ ಯೋಜನೆಯಲ್ಲಿದ್ದ ಹಲವು ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಿದ್ದಾರೆ. ಈ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವ ಬಹುತೇಕ ಆಟೋ ಕಂಪನಿಗಳು ಹೊಸ ವಾಹನಗಳ ಮಾರಾಟದ ಜೊತೆಗೆ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟದ ಉದ್ಯಮದ ಮೇಲೂ ಭಾರೀ ಹೂಡಿಕೆ ಮಾಡುತ್ತಿವೆ.

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಸದ್ಯ ವೈರಸ್ ಭೀತಿ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಮಹೀಂದ್ರಾ ಕಾರುಗಳು ಸೇರಿದಂತೆ ಬಹುತೇಕ ಕಂಪನಿಗಳ ಕಾರು ಮಾರಾಟದಲ್ಲಿ ಶೇ.70ರಿಂದ ಶೇ.97ರಷ್ಟು ಕುಸಿತ ಕಂಡುಬಂದಿದೆ.

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಹೊಸ ಕಾರುಗಳು ಮಾರಾಟವು ಕುಸಿದ ಬೆನ್ನಲ್ಲೇ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಮತ್ತು ಮಾರಾಟ ಪ್ರಮಾಣವು ತೀವ್ರಗತಿಯಲ್ಲಿ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಮಹೀಂದ್ರಾ ಕಂಪನಿಯು ತನ್ನ ಫಸ್ಟ್ ಛಾಯ್ಸ್ ಮಾರಾಟ ಮಳಿಗೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿದೆ.

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ನಿನ್ನೆ ಒಂದೇ ದಿನದಲ್ಲಿ ದೇಶದ ವಿವಿಧ ನಗರಗಳಲ್ಲಿ 34 ಸೆಕೆಂಡ್ ಹ್ಯಾಂಡ್ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿರುವ ಮಹೀಂದ್ರಾ ಕಂಪನಿಯು ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸ ಮಳಿಗೆಗಳನ್ನು ತೆರೆಯಲು ನಿರ್ಧರಿಸಿದ್ದು, ಅಸಂಘಟಿತವಾಗಿ ಕಾರ್ಯನಿರ್ವಹಿಸುತ್ತಿರುವ ಸೆಕೆಂಡ್ ಹ್ಯಾಂಡ್ ಕಾರು ಮಾರಾಟವನ್ನು ವ್ಯವಸ್ಥಿತವಾಗಿ ಮಾರಾಟಗೊಳಿಸುವ ಗುರಿ ಯೋಜನೆ ಹೊಂದಿದೆ.

MOST READ: ಎಲೆಕ್ಟ್ರಿಕ್ ವಾಹನಗಳಿಗಾಗಿ ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ಗ್ರಿನ್ ಸಿಗ್ನಲ್

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಅಸಂಘಟಿತವಾಗಿರುವ ಸ್ಥಳೀಯ ವ್ಯಾಪಾರಿಗಳ ಬಳಿ ಸೆಕೆಂಡ್ ಹ್ಯಾಂಡ್ ವಾಹನ ಖರೀದಿಯು ಕೆಲವು ಸಂದರ್ಭಗಳಲ್ಲಿ ಲಾಭಕ್ಕಿಂತ ಹೆಚ್ಚು ನಷ್ಟ ಅನುಭವಿಸಬೇಕಾದ ಸಂದರ್ಭಗಳು ಎದುರಾಗಬಹುದಾಗಿದ್ದು, ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳು ಗ್ರಾಹಕರ ಆಯ್ಕೆಗೆ ಉತ್ತಮ ಎನ್ನಬಹುದು.

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಜೊತೆಗೆ ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆಗಳಲ್ಲಿ ಖರೀದಿಸುವ ವಾಹನಗಳಿಗೆ ಹೆಚ್ಚುವರಿಯಾಗಿ ವಾರಂಟಿ ಸಹ ದೊರೆಯಲಿದ್ದು, ಮೋಸ ವ್ಯವಹಾರಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಈ ನಿಟ್ಟಿನಲ್ಲಿ ಫಸ್ಟ್ ಛಾಯ್ಸ್ ಮಾರಾಟ ಮಳಿಗೆಗಳನ್ನು ಹೆಚ್ಚಿಸುತ್ತಿರುವ ಮಹೀಂದ್ರಾ ಕಂಪನಿಯು ಮುಂದಿನ 2 ವರ್ಷಗಳಲ್ಲಿ ಭಾರೀ ಪ್ರಮಾಣದ ವಹಿವಾಟು ನಡೆಸುವ ಯೋಜನೆಯಲ್ಲಿದ್ದು, ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಮಹಾನಗರಗಳಿಂತಲೂ ಹೆಚ್ಚು 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಕಂಡುಬರುತ್ತಿದೆ.

Article Published On: Tuesday, June 30, 2020, 19:19 [IST]
English summary
Mahindra First Choice Wheels Launches 34 Used Car Dealerships. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+