ಅಚ್ಚರಿಯ ಬೆಲೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಬಿಎಸ್-6 ಡೀಸೆಲ್ ವರ್ಷನ್ ಬಿಡುಗಡೆ

ಮಹೀಂದ್ರಾ ಕಂಪನಿಯು ಈಗಾಗಲೇ ತನ್ನ ಜನಪ್ರಿಯ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯಾದ ಎಕ್ಸ್‌ಯುವಿ300 ಕಾರಿನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಪೆಟ್ರೋಲ್ ಮಾದರಿಯನ್ನು ಬಿಡುಗಡೆಗೊಳಿಸಿದ್ದು, ಇದೀಗ ಹೊಸ ಡೀಸೆಲ್ ಮಾದರಿಯನ್ನು ಸಹ ಅಚ್ಚರಿಯ ಬೆಲೆಯೊಂದಿಗೆ ಬಿಡುಗಡೆ ಮಾಡಿದೆ.

ಅಚ್ಚರಿಯ ಬೆಲೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಬಿಎಸ್-6 ಡೀಸೆಲ್ ವರ್ಷನ್ ಬಿಡುಗಡೆ

ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ಎಮಿಷನ್ ನಿಯಮದಂತೆ ಹೊಸ ಕಾರುಗಳನ್ನು ಅಭಿವೃದ್ದಿಗೊಳಿಸಿರುವ ಮಹೀಂದ್ರಾ ಕಂಪನಿಯು ಈಗಾಗಲೇ ವಿವಿಧ ಕಾರು ಮಾದರಿಗಳನ್ನು ಬಿಎಸ್-6 ಎಂಜಿನ್ ಜೊತೆ ಬಿಡುಗಡೆ ಮಾಡಿದ್ದು, ಇದೀಗ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲಿ ಪ್ರಮುಖವಾಗಿರುವ ಎಕ್ಸ್‌ಯುವಿ300 ಡೀಸೆಲ್ ಮಾದರಿಯನ್ನು ಸಹ ಹೊಸ ಬಿಡುಗಡೆ ಮಾಡಿದೆ.

ಅಚ್ಚರಿಯ ಬೆಲೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಬಿಎಸ್-6 ಡೀಸೆಲ್ ವರ್ಷನ್ ಬಿಡುಗಡೆ

ಕರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್‌ಡೌನ್ ವಿಧಿಸಿರುವುದರಿಂದ ಹೊಸ ಕಾರನ್ನು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕವೇ ಬಿಡುಗಡೆ ಮಾಡಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, ಲಾಕ್‌ಡೌನ್ ತೆರವುಗೊಂಡ ಬಳಿಕ ಹೊಸ ಕಾರು ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದೆ.

ಅಚ್ಚರಿಯ ಬೆಲೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಬಿಎಸ್-6 ಡೀಸೆಲ್ ವರ್ಷನ್ ಬಿಡುಗಡೆ

ಬಿಎಸ್-6 ಎಂಜಿನ್ ಹೊಂದಿರುವ ಎಕ್ಸ್‌ಯುವಿ300 ಡೀಸೆಲ್ ಮಾದರಿಯು ಬಿಎಸ್-4 ಆವೃತ್ತಿಗಿಂತಲೂ ಬೆಲೆಯಲ್ಲಿ ತುಸು ದುಬಾರಿಯಾಗಿದ್ದರೂ ಕೂಡಾ ಇತರೆ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆ ಏರಿಕೆಯನ್ನು ಪಡೆದುಕೊಂಡಿದೆ.

ಅಚ್ಚರಿಯ ಬೆಲೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಬಿಎಸ್-6 ಡೀಸೆಲ್ ವರ್ಷನ್ ಬಿಡುಗಡೆ

ಹೊಸ ಎಕ್ಸ್‌ಯುವಿ300 ಡೀಸೆಲ್ ಎಂಜಿನ್ ಮಾದರಿಯು ಹೊಸ ಎಂಜಿನ್‌ನೊಂದಿಗೆ ಈ ಹಿಂದಿನಂತೆಯೇ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.8.69 ಲಕ್ಷ ಬೆಲೆ ಹೊಂದಿದ್ದು, ಟಾಪ್ ಎಂಡ್ ಮಾದರಿಯು ರೂ.12.69 ಲಕ್ಷ ಬೆಲೆ ಪಡೆದುಕೊಂಡಿದೆ.

MOST READ: ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು

ಅಚ್ಚರಿಯ ಬೆಲೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಬಿಎಸ್-6 ಡೀಸೆಲ್ ವರ್ಷನ್ ಬಿಡುಗಡೆ

ಆದರೆ ಕಳೆದ ಜನವರಿಯಲ್ಲಿ ಬಿಡುಗಡೆಗೊಂಡಿದ್ದ ಎಕ್ಸ್‌ಯುವಿ300 ಬಿಎಸ್-6 ಪೆಟ್ರೋಲ್ ಮಾದರಿಯು ಮಾತ್ರ ಈ ಹಿಂದಿನ ಬಿಎಸ್-4 ಎಂಜಿನ್‌ಗಿಂತ ರೂ.20 ಸಾವಿರ ಹೆಚ್ಚುವರಿ ಬೆಲೆ ಪಡೆದುಕೊಂಡಿತ್ತು. ಹೀಗಾಗಿ ಹೊಸ ಡೀಸೆಲ್ ಎಂಜಿನ್ ಬೆಲೆಯಲ್ಲೂ ಹಳೆಯ ಮಾದರಿಗಿಂತ ರೂ.40 ಸಾವಿರದಿಂದ ರೂ.60 ಸಾವಿರ ದುಬಾರಿಯಾಗಬಹುದೆಂಬ ನೀರಿಕ್ಷೆಯಲ್ಲಿದ್ದ ಗ್ರಾಹಕರಿಗೆ ಅಚ್ಚರಿ ಉಂಟು ಮಾಡಿರುವ ಮಹೀಂದ್ರಾ ಕಂಪನಿಯು ಯಾವುದೇ ಬೆಲೆ ಬದಲಾವಣೆ ಮಾಡದೆ ಹೊಸ ಕಾರನ್ನು ಬಿಡುಗಡೆ ಮಾಡಿದೆ.

ಅಚ್ಚರಿಯ ಬೆಲೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಬಿಎಸ್-6 ಡೀಸೆಲ್ ವರ್ಷನ್ ಬಿಡುಗಡೆ

ಇನ್ನು ಎಕ್ಸ್‌ಯುವಿ300 ಕಾರು ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಡಬ್ಲ್ಯು4, ಡಬ್ಲ್ಯು6, ಡಬ್ಲ್ಯು8 ಮತ್ತು ಡಬ್ಲ್ಯು8 ಆಪ್ಷನ್ ಎನ್ನುವ ಪ್ರಮುಖ ಐದು ವೆರಿಯೆಂಟ್‌ಗಳನ್ನು ಹೊಂದಿದ್ದು, ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 8.10 ಲಕ್ಷದಿಂದ ಟಾಪ್ ಎಂಡ್ ಮಾದರಿಯು 12.69 ಲಕ್ಷ ಬೆಲೆ ಪಡೆದುಕೊಂಡಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಅಚ್ಚರಿಯ ಬೆಲೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಬಿಎಸ್-6 ಡೀಸೆಲ್ ವರ್ಷನ್ ಬಿಡುಗಡೆ

ಎಕ್ಸ್‌ಯುವಿ300 ಡಿಸೇಲ್ ಕಾರಿನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆಗಳನ್ನು ನೀಡಲಾಗಿದ್ದು, 1.5-ಲೀಟರ್ ಡೀಸೆಲ್ ಮತ್ತು 1.2-ಲೀಟರ್ ಪೆಟ್ರೋಲ್ ಎಂಜಿನ್‌ ಮೂಲಕ ಅತ್ಯುತ್ತಮ ಇಂಧನ ಕಾರ್ಯಕ್ಷಮತೆ ಹೊಂದಿದೆ.

ಅಚ್ಚರಿಯ ಬೆಲೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಬಿಎಸ್-6 ಡೀಸೆಲ್ ವರ್ಷನ್ ಬಿಡುಗಡೆ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿಗಳಲ್ಲಿ ವಿಶೇಷ ಎನ್ನಿಸುವ ಎಕ್ಸ್‌ಯುವಿ300 ಮಾದರಿಯು ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಕ್ರೋಮ್ ಬಳಕೆ, ಬೂಟ್ ಲಿಡ್, ಡ್ಯುಯಲ್ ಟೋನ್ ಇಂಟಿರಿಯರ್, ಎಸಿ ವೆಂಟ್ಸ್, ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಹೊಂದಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಅಚ್ಚರಿಯ ಬೆಲೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಬಿಎಸ್-6 ಡೀಸೆಲ್ ವರ್ಷನ್ ಬಿಡುಗಡೆ

ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್, 7 ಏರ್‌ಬ್ಯಾಗ್, ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್, ಪ್ರತಿ ಸೀಟುಗಳಲ್ಲೂ ಸೀಟ್ ಬೆಲ್ಟ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟ್ ಸೌಲಭ್ಯವು ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.

ಅಚ್ಚರಿಯ ಬೆಲೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಬಿಎಸ್-6 ಡೀಸೆಲ್ ವರ್ಷನ್ ಬಿಡುಗಡೆ

ಈ ಮೂಲಕ ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿರುವ ಎಕ್ಸ್‌ಯುವಿ300 ಮಾದರಿಯು ಬಿಎಸ್-6 ನಂತರ ಮತ್ತಷ್ಟು ಬಲಿಷ್ಠ ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಾಗಿದೆ.

Most Read Articles

Kannada
English summary
Mahindra Launches The XUV300 Diesel BS6 Variant. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X