ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಉಚಿತ ಕ್ಯಾಬ್ ಸೌಲಭ್ಯವನ್ನು ಆರಂಭಿಸಿದ ಮಹೀಂದ್ರಾ
ಕರೋನಾ ವೈರಸ್ ಮಾಹಾಮಾರಿಯ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ. ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಮುಂದಾಗಿವೆ.

ದೇಶದ ಜನಪ್ರಿಯ ಕಂಪನಿಗಳಲ್ಲಿ ಒಂದಾಗಿರುವ ಮಹೀಂದ್ರಾ ಸಮೂಹ ಸಂಸ್ಥೆಗಳು ಕೂಡಾ ಕರೋನಾ ವಿರುದ್ಧ ಹೋರಾಟಕ್ಕಾಗಿ ಭಾರೀ ಪ್ರಮಾಣದ ದೇಣಿಗೆ ನೀಡಿದ್ದು, ವೈದ್ಯಕೀಯ ಉಪಕರಣಗಳ ಉತ್ಪಾದನೆಗೂ ಚಾಲನೆ ನೀಡಿದೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಇದರ ಜೊತೆಗೆ ತೆಲಂಗಾಣದಲ್ಲಿ ಆರಂಭಿಕವಾಗಿ ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸಿದ್ದು, ಅಂಗಸಂಸ್ಥೆಯಾದ ಅಲೆಟ್ ಎಂಟರ್‌ಪ್ರೈಸಸ್ ಮೊಬಿಲಿಟಿ ಬಿಸಿನೆಸ್ ಆಫ್ ಮಹೀಂದ್ರಾ ಲಾಜಿಸ್ಟಿಕ್ ಜೊತೆಗೂಡಿ ಉಚಿತ ಕ್ಯಾಬ್(ಎರ್ಮಜೆನ್ಸಿ ಕ್ಯಾಬ್) ಸೇವೆಯನ್ನು ಆರಂಭಿಸಿದೆ.

ಇನ್ನು ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆ ಮತ್ತು ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿವೆ. ಕರೋನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಈ ಹಿನ್ನಲೆಯಲ್ಲಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ.

ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧದ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬುತ್ತಿದ್ದಾರೆ.
MOST READ: ಕರೋನಾ ವೈರಸ್: ವೆಂಟಿಲೆಟರ್ ಉತ್ಪಾದನೆ ಚಾಲನೆ ನೀಡಿದ ಮಾರುತಿ ಸುಜುಕಿ

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಯ ಜೊತೆಗೆ ಧನಸಹಾಯವನ್ನು ಕೂಡಾ ಮಾಡುತ್ತಿವೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ಅಗತ್ಯ ವೈದ್ಯಕೀಯ ಉಪಕರಣಗಳ ಕೊರತೆ ಎದುರಾಗಿದ್ದು, ಸದ್ಯ ಆಟೋ ಉತ್ಪಾದನಾ ಪ್ರಕ್ರಿಯೆ ಸ್ಥಗಿತಗೊಂಡಿರುವುದರಿಂದ ಪ್ರಮುಖ ವಾಹನ ಕಂಪನಿಗಳು ವೈದ್ಯಕೀಯ ಉಪಕರಣಗಳ ತಯಾರಿಕೆ ಮತ್ತು ಅಸೆಂಬ್ಲಿಗಾಗಿ ಕೈಜೋಡಿಸಿವೆ.
MOST READ: ವಿವಾಹ ವಾರ್ಷಿಕೋತ್ಸವದ ಸಂಭ್ರಮಕ್ಕಾಗಿ ದುಬಾರಿ ಬೆಲೆಯ ಸರ್ಪ್ರೈಸ್ ಗಿಫ್ಟ್

ಮಹೀಂದ್ರಾ ಮಾತ್ರವಲ್ಲದೇ ಮಾರುತಿ ಸುಜುಕಿಯು ಸಹ ಪ್ರತಿ ತಿಂಗಳು 10 ಸಾವಿರ ವೆಂಟಲೆಟರ್ ಸಿದ್ದಪಡಿಸುವ ಯೋಜನೆ ಚಾಲನೆ ನೀಡಿದ್ದು, ವೈದ್ಯಕೀಯ ಉಪಕರಣಗಳ ಜೊತೆ ಜೊತೆಗೆ ಬಡವರ ಹಸಿವು ನೀಗಿಸಲು ಸಾಕಷ್ಟು ಶ್ರಮವಹಿಸುವ ಮೂಲಕ ಜನರ ಮೆಚ್ಚುಗೆಗೆ ಕಾರಣವಾಗಿವೆ.


Click it and Unblock the Notifications








