ಬಿಎಸ್-6 ಎಫೆಕ್ಟ್- 2020ರ ಮರಾಜೋ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ

ಏಪ್ರಿಲ್ 1ರಿಂದ ದೇಶಾದ್ಯಂತ ಬಿಎಸ್-6 ಎಮಿಷನ್ ನಿಯಮವು ಕಡ್ಡಾಯವಾಗಿ ಜಾರಿಗೆ ಬರುತ್ತಿದ್ದು, ಮಹೀಂದ್ರಾ ಸಂಸ್ಥೆಯು ತನ್ನ ಜನಪ್ರಿಯ ಡೀಸೆಲ್ ಕಾರುಗಳ ಎಂಜಿನ್ ಆಯ್ಕೆ ಭಾರೀ ಬದಲಾವಣೆ ಪರಿಚಯಿಸುತ್ತಿದೆ.

ಬಿಎಸ್-6 ಎಫೆಕ್ಟ್- 2020ರ ಮರಾಜೋ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ

ಹೊಸ ಎಮಿಷನ್ ನಿಯಮದಿಂದಾಗಿ ಮರಾಜೊ ಎಂಪಿವಿ ಕಾರಿನ ವೆರಿಯೆಂಟ್‌ಗಳಲ್ಲಿ ಕೆಲವು ಬದಲಾವಣೆ ತಂದಿರುವ ಮಹೀಂದ್ರಾ ಸಂಸ್ಥೆಯು ಟಾಪ್ ಎಂಡ್ ಮಾದರಿಯಾದ ಎಂ8 ವೆರಿಯೆಂಟ್ ಅನ್ನು 2020ರ ಆವೃತ್ತಿಯಲ್ಲಿ ಕೈಬಿಟ್ಟಿದ್ದು, ಎಂಜಿನ್ ಸಾಮರ್ಥ್ಯಕ್ಕೆ ಅನುಗುಣವಾಗಿ ಪರ್ಫಾಮೆನ್ಸ್‌ನಲ್ಲೂ ಕೆಲವು ಬದಲಾವಣೆಗಳನ್ನು ತರಲಾಗಿದೆ. ಹೀಗಾಗಿ ಎರಡನೇ ಟಾಪ್ ಎಂಡ್ ಮಾದರಿಯಾಗಿದ್ದ ಎಂ6 ಆವೃತ್ತಿಯೇ ಇದೀಗ ಅಗ್ರಸ್ಥಾನದಲ್ಲಿ ಮಾರಾಟವಾಗಲಿದ್ದು, ಹೊಸ ಕಾರು ಮತ್ತಷ್ಟು ದುಬಾರಿಯಾಗಲಿದೆ.

ಬಿಎಸ್-6 ಎಫೆಕ್ಟ್- 2020ರ ಮರಾಜೋ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ

ಮಹೀಂದ್ರಾ ಸಂಸ್ಥೆಯು ಸದ್ಯ ಸ್ಕಾರ್ಪಿಯೋ, ಎಕ್ಸ್‌ಯುವಿ500, ಹೊಸ ತಲೆಮಾರಿನ ಥಾರ್ ಮತ್ತು ಫೇಸ್‌ಲಿಫ್ಟ್ ಮಾದರಿಗಳಾದ ಎಕ್ಸ್‌ಯುವಿ300 ಡೀಸೆಲ್, ಮರಾಜೋ ಆವೃತ್ತಿಗಳನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಉನ್ನತಿಕರಿಸುತ್ತಿದ್ದು, ಬಿಎಸ್-6 ಎಂಜಿನ್ ಹೊಂದಿರುವ ಎಕ್ಸ್‌ಯುವಿ300 ಪೆಟ್ರೋಲ್ ಆವೃತ್ತಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ.

ಬಿಎಸ್-6 ಎಫೆಕ್ಟ್- 2020ರ ಮರಾಜೋ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ

ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಇನ್ನುಳಿದ ಕಾರು ಮಾದರಿಗಳನ್ನು ಸಹ ಹೊಸ ನಿಯಮದಂತೆ ಬಿಡುಗಡೆ ಮಾಡುತ್ತಿದ್ದು, ಮಾಹಿತಿಗಳ ಪ್ರಕಾರ, ನ್ಯೂ ಜನರೇಷನ್ ಆವೃತ್ತಿಗಳಲ್ಲಿ ಸಾಕಷ್ಟು ಸುಧಾರಿತ ಗುಣಮಟ್ಟದ ಬಿಡಿಭಾಗಗಳು, ಎಂಜಿನ್ ಸೌಲಭ್ಯ ಮತ್ತು ಪರ್ಫಾಮೆನ್ಸ್‌ನಲ್ಲಿ ಗ್ರಾಹಕರ ಆಕರ್ಷಣೆ ಕಾರಣವಾಗಲಿವೆ.

ಬಿಎಸ್-6 ಎಫೆಕ್ಟ್- 2020ರ ಮರಾಜೋ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ

ಬೆಲೆ ಹೆಚ್ಚಳ ಬಿಸಿ

ಹೌದು, ಬಿಎಸ್-6 ಕಾರುಗಳ ಬೆಲೆಯಲ್ಲಿ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಪೆಟ್ರೋಲ್ ಕಾರುಗಳು ರೂ.10 ಸಾವಿರದಿಂದ ರೂ.30 ಸಾವಿರ ಮತ್ತು ಡೀಸೆಲ್ ಕಾರುಗಳು ರೂ.80 ಸಾವಿರದಿಂದ ರೂ.1.50 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ. ಇದೀಗ ಬಿಡುಗಡೆಯಾಗಲಿರುವ ಮಾರಾಜೋ ಕೂಡಾ ದುಬಾರಿ ಬೆಲೆ ಪಡೆಯಲಿದ್ದು, ಟಾಪ್ ಎಂಡ್ ಮಾದರಿಯನ್ನು ತೆಗೆದುಹಾಕಿ ಅದೇ ಬೆಲೆಯಲ್ಲಿ ಎರಡನೇ ಸ್ಥಾನದಲ್ಲಿರುವ ಎಂ6 ಆವೃತ್ತಿಯನ್ನು ಟಾಪ್ ಎಂಡ್ ಮಾದರಿಯಾಗಿ ಮಾರಾಟ ಮಾಡಲಿದೆ.

ಬಿಎಸ್-6 ಎಫೆಕ್ಟ್- 2020ರ ಮರಾಜೋ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ

ಜೊತೆಗೆ ಹೊಸ ನಿಯಮ ಅನುಸಾರ ಬಿಎಸ್-6 ಆವೃತ್ತಿಗಳಲ್ಲಿ ಹಲವು ಸುರಕ್ಷಾ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಲಾಗಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಮರಾಜೋ ಮತ್ತು ಥಾರ್ ಕಾರುಗಳಲ್ಲಿ ಇನ್ಮುಂದೆ ಎಲ್ಲಾ ಮಾದರಿಗಳಲ್ಲೂ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್, ಲೆದರ್ ಸೀಟ್‌ಗಳ ಸೌಲಭ್ಯಗಳಿರಲಿವೆ.

ಬಿಎಸ್-6 ಎಫೆಕ್ಟ್- 2020ರ ಮರಾಜೋ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ

ಹಾಗೆಯೇ 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

ಬಿಎಸ್-6 ಎಫೆಕ್ಟ್- 2020ರ ಮರಾಜೋ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ

ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

ಬಿಎಸ್-6 ಎಫೆಕ್ಟ್- 2020ರ ಮರಾಜೋ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ

ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಮರಾಜೋ ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.

ಬಿಎಸ್-6 ಎಫೆಕ್ಟ್- 2020ರ ಮರಾಜೋ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ

ಇದಲ್ಲದೇ ಫೋರ್ಡ್ ಜೊತೆ ಹೊಸ ಕಾರುಗಳ ಅಭಿವೃದ್ದಿ ಮತ್ತು ಮಾರಾಟಕ್ಕೆ ಕೈಜೋಡಿಸಿರುವ ಮಹೀಂದ್ರಾ ಸಂಸ್ಥೆಯು ಸಹಭಾಗಿತ್ವ ಯೋಜನೆಯಲ್ಲಿ ಆಸ್ಪೈರ್ ಎಲೆಕ್ಟ್ರಿಕ್ ಮತ್ತು ಎಕ್ಸ್‌ಯುವಿ100 ಎಲೆಕ್ಟ್ರಿಕ್ ಕಾರುಗಳನ್ನು 2020ರ ಮಧ್ಯಂತರದಲ್ಲಿ ಬಿಡುಗಡೆ ಮಾಡಲಿದೆ.

Most Read Articles

Kannada
English summary
Mahindra Marazzo BS6 Model Specifications Leaked Ahead of Launch.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X