ಮಹೀಂದ್ರಾ ಮರಾಜೋ ಪೆಟ್ರೋಲ್ ವರ್ಷನ್ ಬಿಡುಗಡೆಯ ಮಾಹಿತಿ ಬಹಿರಂಗ
ಮಹೀಂದ್ರಾ ಸಂಸ್ಥೆಯು ಮರಾಜೋ ಎಂಪಿವಿ ಆವೃತ್ತಿಯಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ಆವೃತ್ತಿಯನ್ನು ಪರಿಚಯಿಸುತ್ತಿದ್ದು, ಹೊಸ ಕಾರು 1.5-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳುತ್ತಿದೆ.

ಡೀಸೆಲ್ ಮಾದರಿಗಳಿಂತಲೂ ಹೆಚ್ಚು ಪೆಟ್ರೋಲ್ ಕಾರು ಮಾದರಿಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಡೀಸೆಲ್ ಎಂಜಿನ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಸಂಸ್ಥೆಯು ಇದೇ ಮೊದಲ ಬಾರಿಗೆ ತನ್ನ ಪ್ರಮುಖ ಎಸ್‌ಯುವಿ ಮತ್ತು ಎಂಪಿವಿ ಕಾರುಗಳಲ್ಲಿ ಪೆಟ್ರೋಲ್ ಎಂಜಿನ್ ಜೋಡಣೆಗೆ ಹೆಚ್ಚು ಆಸಕ್ತಿ ವಹಿಸಿದೆ. ಇದೀಗ ಮರಜೋ ಕೂಡಾ 163-ಬಿಎಚ್‌ಪಿ ಉತ್ಪಾದನೆ ಮಾಡಬಲ್ಲ 1.5-ಲೀಟರ್ ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದ್ದು, ಹೊಸ ಕಾರು ಮುಂದಿನ ಮೇ ಆರಂಭದಲ್ಲಿ ಖರೀದಿಗೆ ಲಭ್ಯವಿರಲಿದೆ.

ಇನ್ನು ಮುಂದಿನ ತಿಂಗಳು ಏಪ್ರಿಲ್ 1ರಿಂದ ದೇಶಾದ್ಯಂತ ಬಿಎಸ್-6 ಎಮಿಷನ್ ನಿಯಮವು ಕಡ್ಡಾಯವಾಗಿ ಜಾರಿಗೆ ಬರುತ್ತಿದ್ದು, ಮಹೀಂದ್ರಾ ಸಂಸ್ಥೆಯು ತನ್ನ ಜನಪ್ರಿಯ ಡೀಸೆಲ್ ಕಾರುಗಳ ಎಂಜಿನ್ ಆಯ್ಕೆಯಲ್ಲೂ ಭಾರೀ ಬದಲಾವಣೆ ಪರಿಚಯಿಸುತ್ತಿದೆ.

ಹೊಸ ಎಮಿಷನ್ ನಿಯಮದಿಂದಾಗಿ ಮರಾಜೊ ಎಂಪಿವಿ ಕಾರಿನ ವೆರಿಯೆಂಟ್‌ಗಳಲ್ಲಿ ಕೆಲವು ಬದಲಾವಣೆ ತಂದಿರುವ ಮಹೀಂದ್ರಾ ಸಂಸ್ಥೆಯು ಟಾಪ್ ಎಂಡ್ ಮಾದರಿಯಾದ ಎಂ8 ವೆರಿಯೆಂಟ್ ಅನ್ನು 2020ರ ಆವೃತ್ತಿಯಲ್ಲಿ ಕೈಬಿಟ್ಟಿದ್ದು, ಎಂಜಿನ್ ಸಾಮರ್ಥ್ಯಕ್ಕೆ ಅನುಗುಣವಾಗಿ ಪರ್ಫಾಮೆನ್ಸ್‌ನಲ್ಲೂ ಕೆಲವು ಬದಲಾವಣೆಗಳನ್ನು ತರಲಾಗಿದೆ.

ಹೀಗಾಗಿ ಎರಡನೇ ಟಾಪ್ ಎಂಡ್ ಮಾದರಿಯಾಗಿದ್ದ ಎಂ6 ಆವೃತ್ತಿಯೇ ಇದೀಗ ಅಗ್ರಸ್ಥಾನದಲ್ಲಿ ಮಾರಾಟವಾಗಲಿದ್ದು, ಹೊಸ ಕಾರು ಮತ್ತಷ್ಟು ದುಬಾರಿಯಾಗಲಿದ್ದು, ಹೊಸ ಕಾರುಗಳಲ್ಲಿ ಮಾಲಿನ್ಯ ತಗ್ಗಿಸುವಿಕೆ ಮತ್ತು ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಪ್ರಮುಖ ಆಕರ್ಷಣೆಯಾಗಲಿದೆ. ಸದ್ಯ ಸ್ಕಾರ್ಪಿಯೋ, ಎಕ್ಸ್‌ಯುವಿ500, ಹೊಸ ತಲೆಮಾರಿನ ಥಾರ್ ಮತ್ತು ಫೇಸ್‌ಲಿಫ್ಟ್ ಮಾದರಿಗಳಾದ ಎಕ್ಸ್‌ಯುವಿ300 ಡೀಸೆಲ್, ಮರಾಜೋ ಆವೃತ್ತಿಗಳನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಉನ್ನತಿಕರಿಸುತ್ತಿದ್ದು, ಬಿಎಸ್-6 ಎಂಜಿನ್ ಹೊಂದಿರುವ ಎಕ್ಸ್‌ಯುವಿ300 ಪೆಟ್ರೋಲ್ ಆವೃತ್ತಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ.

ಸದ್ಯ ಮಾರುಕಟ್ಟೆಯಲ್ಲಿರುವ ಇನ್ನುಳಿದ ಕಾರು ಮಾದರಿಗಳನ್ನು ಸಹ ಹೊಸ ನಿಯಮದಂತೆ ಬಿಡುಗಡೆ ಮಾಡುತ್ತಿದ್ದು, ಮಾಹಿತಿಗಳ ಪ್ರಕಾರ, ನ್ಯೂ ಜನರೇಷನ್ ಆವೃತ್ತಿಗಳಲ್ಲಿ ಸಾಕಷ್ಟು ಸುಧಾರಿತ ಗುಣಮಟ್ಟದ ಬಿಡಿಭಾಗಗಳು, ಎಂಜಿನ್ ಸೌಲಭ್ಯ ಮತ್ತು ಪರ್ಫಾಮೆನ್ಸ್‌ನಲ್ಲಿ ಗ್ರಾಹಕರ ಆಕರ್ಷಣೆ ಕಾರಣವಾಗಲಿವೆ.

ಜೊತೆಗೆ ಹೊಸ ನಿಯಮ ಅನುಸಾರ ಬಿಎಸ್-6 ಆವೃತ್ತಿಗಳಲ್ಲಿ ಹಲವು ಸುರಕ್ಷಾ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಲಾಗಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಮರಾಜೋ ಮತ್ತು ಥಾರ್ ಕಾರುಗಳಲ್ಲಿ ಇನ್ಮುಂದೆ ಎಲ್ಲಾ ಮಾದರಿಗಳಲ್ಲೂ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್, ಲೆದರ್ ಸೀಟ್‌ಗಳ ಸೌಲಭ್ಯಗಳಿರಲಿವೆ.

ಹಾಗೆಯೇ 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಮರಾಜೋ ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.
Source: Autocarindia


Click it and Unblock the Notifications








