ಇದೇ ತಿಂಗಳು 15ಕ್ಕೆ ಅನಾವರಣಗೊಳ್ಳಲಿದೆ ನ್ಯೂ ಜನರೇಷನ್ ಮಹೀಂದ್ರಾ ಥಾರ್
ಮಾಹಾಮಾರಿ ಕರೋನಾ ವೈರಸ್‌ನಿಂದಾಗಿ ನ್ಯೂ ಜನರೇಷನ್ ಥಾರ್ ಕಾರು ಮಾದರಿಯ ಬಿಡುಗಡೆಯನ್ನು ಮುಂಡೂಡಿಕೆ ಮಾಡಿರುವ ಮಹೀಂದ್ರಾ ಕಂಪನಿಯು ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಮುಂದುವರಿಸಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು ಇದೇ ತಿಂಗಳು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಸದ್ಯ ವೈರಸ್ ಭೀತಿಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನ ಮಾದರಿಗಳನ್ನು ಹೊರತುಪಡಿಸಿ ಹೊಸ ವಾಹನ ಬಿಡುಗಡೆಯನ್ನು ಮುಂದೂಡಿಕೆ ಮಾಡಲಾಗುತ್ತಿದ್ದು, ಕೆಲ ಹೊಸ ವಾಹನ ಮಾದರಿಗಳ ಬಿಡುಗಡೆಯ ಯೋಜನೆಯನ್ನೇ ಕೈಬಿಡಲಾಗುತ್ತಿದೆ. ಮಹೀಂದ್ರಾ ಕಂಪನಿಯು ಕೂಡಾ ಲಾಕ್‌ಡೌನ್ ಸಂಕಷ್ಟದಿಂದಾಗಿ ಕೆಲವು ಹೊಸ ವಾಹನಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದು, ಇದೇ ತಿಂಗಳು ಬಿಡುಗಡೆಯಾಗಬೇಕಿದ್ದ ನ್ಯೂ ಜನರೇಷನ್ ಥಾರ್ ಮತ್ತು ಎಕ್ಸ್‌ಯುವಿ500 ಕಾರುಗಳ ಬಿಡುಗಡೆಯನ್ನು ವರ್ಷಾಂತ್ಯಕ್ಕೆ ನಿಗದಿಮಾಡಿದೆ.

ಆದರೆ ಲಭ್ಯವಾಗಿರುವ ಹೊಸ ಮಾಹಿತಿಗಳ ಪ್ರಕಾರ ಹೊಸ ಕಾರನ್ನು ವರ್ಷಾಂತ್ಯದಲ್ಲೇ ಬಿಡುಗಡೆ ಮಾಡಲಿರುವ ಮಹೀಂದ್ರಾ ಕಂಪನಿಯು ಇದೇ ತಿಂಗಳು 15ರಂದು ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸುತ್ತಿದೆ ಎನ್ನಲಾಗಿದ್ದು, ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಾಗಿ ಹೊಸ ಕಾರು ಅಧಿಕೃತವಾಗಿ ಅನಾವರಣಗೊಳ್ಳಲಿದೆ.

ಸದ್ಯಕ್ಕೆ ಎಕ್ಸ್‌ಯುವಿ500, ಸ್ಕಾರ್ಪಿಯೋ ಕಾರುಗಳ 2020ರ ಮಾದರಿಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಮಾತ್ರವೇ ಬಿಡುಗಡೆ ಮಾಡಲಾಗಿದ್ದು, ಹೊಸ ವಿನ್ಯಾಸ ಮತ್ತು ವಿವಿಧ ಎಂಜಿನ್ ಆಯ್ಕೆ ಹೊಂದಿದ್ದ ನ್ಯೂ ಜನರೇಷನ್ ಮಾದರಿಗಳ ಬಿಡುಗಡೆಯು ಕರೋನಾ ವೈರಸ್ ಮುಂದೂಡಿಕೆಯಾಗುತ್ತಲೇ ಇದೆ.

ಹೊಸ ಥಾರ್ ಮಾದರಿಯು ಈ ಬಾರಿ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಎರಡು ಆವೃತ್ತಿಗಳಲ್ಲೂ ಖರೀದಿಗೆ ಲಭ್ಯವಿಲಿರುವ ಹೊಸ ಕಾರು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿವೆ.

ಹೊಸ ಥಾರ್ ನಲ್ಲಿ ಈ ಬಾರಿ ನವೀಕರಿಸಿದ 2.2-ಡೀಸೆಲ್ ಎಂಜಿನ್ ಜೊತೆಗೆ ಹೊಸದಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಭಾರತದಲ್ಲಿ ಸದ್ಯ ಬಿಎಸ್-6 ನಿಯಮವು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿದ್ದು, ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಆಟೋ ಕಂಪನಿಗಳು ಬಿಎಸ್-6 ಎಂಜಿನ್ ಪ್ರೇರಿತ ಡೀಸೆಲ್ ವಾಹನಗಳನ್ನು ಬಿಡುಗಡೆಗೊಳಿಸಿವೆ.

ಹೊಸ ಎಂಜಿನ್‌ನಿಂದಾಗಿ ಥಾರ್ ಕಾರು ಈ ಬಾರಿ ಆಫ್-ರೋಡ್ ಪ್ರಿಯರನ್ನು ಮತ್ತಷ್ಟು ಸೆಳೆಯಲಿದ್ದು, ಹೊಸ ಕಾರಿನ ಡೀಸೆಲ್ ಮತ್ತು ಪೆಟ್ರೋಲ್ ಎರಡು ಮಾದರಿಯಲ್ಲೂ ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಜೊತೆಗೆ ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಮಹೀಂದ್ರಾ ಹೊಸ ಕಾರುಗಳಲ್ಲಿ ಈ ಬಾರಿ ಹಲವಾರು ಬದಲಾವಣೆಗಳಾಗಿದ್ದು, ಬ್ಯಾಕ್ಔಟ್ ಅಯಾಲ್ ವೀಲ್ಹ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.


Click it and Unblock the Notifications