15 ಸಾವಿರ ಯುನಿಟ್ ಬುಕ್ಕಿಂಗ್ ಜೊತೆಗೆ ಹೊಸ ದಾಖಲೆಗೆ ಕಾರಣವಾದ ಮಹೀಂದ್ರಾ ಹೊಸ ಥಾರ್

ಮಹೀಂದ್ರಾ ಕಂಪನಿಯು ಈ ಮೊದಲ ವಾರದಲ್ಲಿ ತನ್ನ ಬಹುನೀರಿಕ್ಷಿತ ನ್ಯೂ ಜನರೇಷನ್ ಥಾರ್ ಆಫ್-ರೋಡಿಂಗ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡಿತ್ತು. ಆಕರ್ಷಕ ಬೆಲೆಯೊಂದಿಗೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿರುವ ಥಾರ್ ಕಾರು ಮಾದರಿಯು ಇದುವರೆಗೆ ಸುಮಾರು 15 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

ಹೊಸ ದಾಖಲೆಗೆ ಕಾರಣವಾದ ಮಹೀಂದ್ರಾ ಹೊಸ ಥಾರ್

ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆ ಮುಂಚೂಣಿ ಸಾಧಿಸುತ್ತಿದ್ದು, 2020ರ ಥಾರ್ ಖರೀದಿ ಮಾಡಿರುವ ಗ್ರಾಹಕರಲ್ಲಿ ಬಹುತೇಕರು ಹೊಸದಾಗಿ ಆಫ್ ಕೌಶಲ್ಯದ ಆಸಕ್ತಿಯೊಂದಿಗೆ ಥಾರ್ ಮಾಲೀಕತ್ವ ಪಡೆದುಕೊಂಡವರಾಗಿದ್ದಾರೆ. ಶೇ.57ರಷ್ಟು ಗ್ರಾಹಕರು ಹೊಸದಾಗಿ ಆಫ್ ರೋಡಿಂಗ್ ಕಾರು ಖರೀದಿ ಮಾಡುತ್ತಿರುವ ಗ್ರಾಹಕರಾಗಿದ್ದು, ಮ್ಯಾನುವಲ್‌ಗಿಂತಲೂ ಹೆಚ್ಚು ಆಟೋಮ್ಯಾಟಿಕ್ ಮಾದರಿಗಳಿಗೆ ಹೆಚ್ಚು ಬೇಡಿಕೆ ಹರಿದುಬಂದಿದೆ.

ಹೊಸ ದಾಖಲೆಗೆ ಕಾರಣವಾದ ಮಹೀಂದ್ರಾ ಹೊಸ ಥಾರ್

ಹೊಸ ಥಾರ್ ಕಾರು ಮಾದರಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.

ಹೊಸ ದಾಖಲೆಗೆ ಕಾರಣವಾದ ಮಹೀಂದ್ರಾ ಹೊಸ ಥಾರ್

ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 9.80 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತ್ಯುತ್ತಮ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

ಹೊಸ ದಾಖಲೆಗೆ ಕಾರಣವಾದ ಮಹೀಂದ್ರಾ ಹೊಸ ಥಾರ್

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಹೊಸ ಕಾರಿನ ಹೊರಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಲಾಗಿದೆ. ಮರುವಿನ್ಯಾಸಗೊಳಿಸಲಾದ ಸೆವೆನ್ ಸ್ಲಾಟ್ ಗ್ರಿಲ್, ವೃತ್ತಾಕಾರವಾದ ಹೆಡ್‌ಲ್ಯಾಂಪ್, 18-ಇಂಚಿನ ಆಕರ್ಷಕ ಅಲಾಯ್ ವೀಲ್ಹ್, ಡ್ಯುಯಲ್ ಟೋನ್ ಬಂಪರ್, ಸ್ಕಫ್ ಪ್ಲೇಟ್, ಬಾಕ್ಸಿ ಮಾದರಿಯಲ್ಲಿರುವ ಟೈಲ್ ಲೈಟ್‌ನೊಂದಿಗೆ ಮಾರ್ಡನ್ ಶೈಲಿ ಪಡೆದುಕೊಂಡಿದೆ.

ಹೊಸ ದಾಖಲೆಗೆ ಕಾರಣವಾದ ಮಹೀಂದ್ರಾ ಹೊಸ ಥಾರ್

ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದ್ದು, ಗ್ರಾಹಕರು ತಮ್ಮ ಬೇಡಿಕೆ ಅನುಗುಣವಾಗಿ ಎಎಕ್ಸ್ ಮ್ಯಾನುವಲ್ ಮತ್ತು ಎಲ್ಎಕ್ಸ್ ಮಾದರಿಯಲ್ಲಿ ಕನ್ವರ್ಟಿಬಲ್ ಮತ್ತು ಹಾರ್ಡ್ ಟಾಪ್ ಆಯ್ಕೆ ಮಾಡಬಹುದಾಗಿದೆ.

ಹೊಸ ದಾಖಲೆಗೆ ಕಾರಣವಾದ ಮಹೀಂದ್ರಾ ಹೊಸ ಥಾರ್

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

ಹೊಸ ದಾಖಲೆಗೆ ಕಾರಣವಾದ ಮಹೀಂದ್ರಾ ಹೊಸ ಥಾರ್

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

ಹೊಸ ದಾಖಲೆಗೆ ಕಾರಣವಾದ ಮಹೀಂದ್ರಾ ಹೊಸ ಥಾರ್

ಥಾರ್ ಡೀಸೆಲ್ ಮಾದರಿಯು 132-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಪೆಟ್ರೋಲ್ ಮಾದರಿಯು 152-ಬಿಎಚ್‌ಪಿ, 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು. ಈ ಮೂಲಕ ಪ್ರಯಾಣಿಕರ ಸುರಕ್ಷತೆಯಲ್ಲೂ ಗಮನಸೆಳೆಯಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ದಾಖಲೆಗೆ ಕಾರಣವಾದ ಮಹೀಂದ್ರಾ ಹೊಸ ಥಾರ್

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

ಹೊಸ ದಾಖಲೆಗೆ ಕಾರಣವಾದ ಮಹೀಂದ್ರಾ ಹೊಸ ಥಾರ್

ಹಾಗೆಯೇ ಎಲ್ಇಡಿ ಡಿಆರ್‌ಎಲ್ ಫಾಗ್ ಲ್ಯಾಂಪ್ಸ್, ಎಂಟು ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಆಟೋ ಎಸಿ, ಇಎಸ್‌ಪಿ ಮತ್ತು 226-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್‌ನೊಂದಿಗೆ ಆಫ್ ರೋಡ್‌ನಲ್ಲಿ ಮತ್ತಷ್ಟು ಗಮನಸೆಳೆಯಲಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ದಾಖಲೆಗೆ ಕಾರಣವಾದ ಮಹೀಂದ್ರಾ ಹೊಸ ಥಾರ್

ಖರೀದಿಗೆ ಲಭ್ಯವಿರುವ ಬಣ್ಣಗಳು

ಹೊಸ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು ಆರು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ರೆಡ್ ರೆಜ್, ಮೈಸ್ಟಿಕ್ ಕಾಪರ್, ಅಕ್ವಾಮೆರಿನ್, ನಪೊಲಿ ಬ್ಲ್ಯಾಕ್, ರಾಕಿ ಬಿಝ್ ಮತ್ತು ಗ್ಲ್ಯಾಲಾಕ್ಸಿ ಗ್ರೇ ಬಣ್ಣಗಳನ್ನು ಹೊಂದಿದೆ.

More from DriveSpark

Article Published On: Monday, October 19, 2020, 17:21 [IST]
English summary
New Mahindra Thar booking crosses 15,000 units. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+