ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಮಹೀಂದ್ರಾ

ಕರೋನಾ ವೈರಸ್‌ ಪರಿಣಾಮ ಕಾರು ಮಾರಾಟದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಪ್ರಮುಖ ಆಟೋ ಕಂಪನಿಗಳು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಹೊಸ ವಾಹನ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಆಫರ್‌ಗಳು ಮತ್ತು ಸರಳ ಸಾಲ ಸೌಲಭ್ಯಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ.

ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಮಹೀಂದ್ರಾ

ಲಾಕ್‌ಡೌನ್‌ನಿಂದಾಗಿ ಏಪ್ರಿಲ್, ಮೇ ಮತ್ತು ಜೂನ್ ಅವಧಿಯಲ್ಲಿ ಭಾರೀ ಪ್ರಮಾಣದ ಮಾರಾಟ ಕುಸಿತ ಕಂಡಿದ್ದ ಆಟೋ ಕಂಪನಿಗಳು ಜುಲೈ ಮತ್ತು ಅಗಸ್ಟ್ ಅವಧಿಯಲ್ಲಿನ ವಾಹನ ಮಾರಾಟದಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದು, ಸೆಪ್ಟೆಂಬರ್ ಅವಧಿಯಲ್ಲಿ ಮಾರಾಟದಲ್ಲಿ ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿಟ್ಟುಕೊಂಡಿವೆ. ಈ ನಿಟ್ಟಿನಲ್ಲಿ ಗ್ರಾಹಕರನ್ನು ಸೆಳೆಯುತ್ತಿರುವ ಆಟೋ ಕಂಪನಿಗಳು ಹಲವಾರು ಆಫರ್‌ಗಳನ್ನು ನೀಡುತ್ತಿದ್ದು, ಮಹೀಂದ್ರಾ ಕೂಡಾ ಗರಿಷ್ಠ ಆಫರ್ ಘೋಷಣೆ ಮಾಡಿದೆ.

ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ವಿವಿಧ ಕಾರುಗಳ ಖರೀದಿ ಮೇಲೆ ಗರಿಷ್ಠ ರೂ. 2.40 ಲಕ್ಷದಷ್ಟು ಆಫರ್ ಲಭ್ಯವಿರಲಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್‌ಬ್ಯಾಕ್, ಎಕ್ಸ್‌ಚೆಂಜ್, ಲೊಯಾಲಿಟಿ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಆಕ್ಸೆಸರಿಸ್‌ಗಳ ಮೇಲೆ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ500 ಕಾರು ಖರೀದಿಯ ಮೇಲೆ ರೂ.60 ಸಾವಿರದಷ್ಟು ಡಿಸ್ಕೌಂಟ್ ನೀಡುತ್ತಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಡಿಸ್ಕೌಂಟ್ ಲಭ್ಯವಿದೆ. ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಕ್ಯಾಶ್ ಬ್ಯಾಕ್ ಆಫರ್ ನೀಡಲಾಗುತ್ತಿದೆ.

ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಮಹೀಂದ್ರಾ

ಸ್ಕಾರ್ಪಿಯೋ ಕಾರು ಖರೀದಿಯ ಮೇಲೂ ರೂ.60 ಸಾವಿರ ತನಕ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್ ಬೋನಸ್, ಕ್ಯಾಶ್ ಡಿಸ್ಕೌಂಟ್ ಮತ್ತು ಎಸ್5 ವೆರಿಯೆಂಟ್ ಮೇಲೆ ಹೆಚ್ಚುವರಿಯಾಗಿ ರೂ.10 ಸಾವಿರ ಕ್ಯಾಶ್ ಡಿಸ್ಕೌಂಟ್ ಲಭ್ಯವಿದೆ.

ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಮಹೀಂದ್ರಾ

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಎಕ್ಸ್‌ಯುವಿ300 ಕಾರು ಖರೀದಿಯ ಮೇಲೆ ಒಟ್ಟು ರೂ. 29,500 ಡಿಸ್ಕೌಂಟ್ ಲಭ್ಯವಿದ್ದು, ಹೊಸ ಆಫರ್‌ನಲ್ಲಿ ಎಕ್ಸ್‌ಚೆಂಜ್ ಬೋನಸ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಮಹೀಂದ್ರಾ

ಇದಲ್ಲದೆ ಕಳೆದ ಹಿಂದಷ್ಟೇ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಕಾರಿನ ಬೆಲೆಯಲ್ಲಿ ಇಳಿಕೆ ಸಹ ಮಾಡಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.1 ಸಾವಿರದಿಂದ ರೂ.87 ಸಾವಿರ ತನಕ ಬೆಲೆ ಇಳಿಕೆ ಮಾಡಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಗ್ರಾಹಕರ ಆಕರ್ಷಣೆಗಾಗಿ ಬೆಲೆ ಇಳಿಕೆಯ ನಿರ್ಧಾರ ಪ್ರಕಟಿಸಿದೆ.

ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಮೊನ್ನೆಯಷ್ಟೇ ತನ್ನ ಜನಪ್ರಿಯ ಎಂಪಿವಿ ಕಾರು ಮಾದರಿಯಾದ ಮರಾಜೋ ಆವೃತ್ತಿಯನ್ನು ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಿಸಿ ಬಿಡುಗಡೆ ಮಾಡಿದ್ದು, ಬಿಡುಗಡೆ ಕೆಲವೇ ದಿನದಲ್ಲಿ ಹೊಸ ಕಾರು ಖರೀದಿ ಮೇಲೆ ರೂ.25 ಸಾವಿರದಷ್ಟು ಎಕ್ಸ್‌ಚೆಂಜ್ ಮತ್ತು ಕ್ಯಾಶ್ ಡಿಸ್ಕೌಂಟ್ ಘೋಷಣೆ ಮಾಡಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಮಹೀಂದ್ರಾ

ಇನ್ನು ಮಹೀಂದ್ರಾ ಕಂಪನಿ ತನ್ನ ಹೈ ಎಂಡ್ ಎಸ್‌ಯುವಿ ಕಾರು ಮಾದರಿಯಾದ ಅಲ್ಟುರಾಸ್ ಜಿ4 ಕಾರು ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ್ದು, ಹೊಸ ಕಾರು ಖರೀದಿಸುವ ಗ್ರಾಹಕರಿಗೆ ರೂ. 2.40 ಲಕ್ಷದಷ್ಟು ಆಫರ್ ನೀಡುತ್ತಿದೆ. ಹೊಸ ಆಫರ್‌ನಲ್ಲಿ ರೂ.50 ಸಾವಿರ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಲಭ್ಯವಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯಕ್ಕೆ ಮುಕ್ತಾಯಗೊಳ್ಳಲಿವೆ.

More from DriveSpark

Article Published On: Wednesday, September 9, 2020, 10:55 [IST]
English summary
Mahindra Offers Exciting Discounts For Selected Models In 2020 September. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+