ಜನವರಿ 1ರಿಂದ ವಾಹನಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಮಹೀಂದ್ರಾ

2021ರ ಜನವರಿ 1ರಿಂದ ವಿವಿಧ ವಾಹನ ಉತ್ಪಾದನಾ ಕಂಪನಿಗಳು ಕಾರುಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಮಹೀಂದ್ರಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರುಗಳು ಮತ್ತು ವಾಣಿಜ್ಯ ವಾಹನ ಬೆಲೆಯಲ್ಲಿ ಶೇ.2ರಿಂದ ಶೇ.3ರಷ್ಟು ಹೆಚ್ಚಳಕ್ಕೆ ಮಾಡುವ ಸುಳಿವು ನೀಡಿದೆ.

ಜನವರಿ 1ರಿಂದ ವಾಹನಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಮಹೀಂದ್ರಾ

ಬಿಡಿಭಾಗಗಳ ಬೆಲೆ ಹೆಚ್ಚಳದಿಂದಾಗಿ ಹೊಸ ವಾಹನಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿರುವ ಕಾರು ಉತ್ಪಾದನಾ ಕಂಪನಿಗಳು ಜನವರಿ 1ರಿಂದಲೇ ಹೊಸ ದರ ಜಾರಿಗೊಳಿಸಲಿದ್ದು, ವಿವಿಧ ವೆರಿಯೆಂಟ್ ಮತ್ತು ಮಾದರಿಗಳಿಗೆ ಅನುಗುಣವಾಗಿ ಶೇ.2ರಿಂದ ಶೇ.3ರಷ್ಟು ಹೆಚ್ಚಳ ಮಾಡುವ ನಿರ್ಧಾರ ಮಾಡಿವೆ. ಮಹೀಂದ್ರಾ ಕೂಡಾ ಕಾರುಗಳು ಮತ್ತು ವಾಣಿಜ್ಯ ಬೆಲೆಯಲ್ಲಿ ಹೆಚ್ಚಳ ಮಾಡುವ ನಿರ್ಧಾರ ಪ್ರಕಟಿಸಿದ್ದು, ಹೊಸ ದರ ಪಟ್ಟಿಯನ್ನು ಜನವರಿ 1ರಂದು ಬಿಡುಗಡೆ ಮಾಡಲಿವೆ.

ಜನವರಿ 1ರಿಂದ ವಾಹನಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಬೆಲೆ ಹೆಚ್ಚಳ ನಿರ್ಧಾರಕ್ಕೂ ಮುನ್ನ ಮಾರುತಿ ಸುಜುಕಿ, ಹ್ಯುಂಡೈ ಮತ್ತು ಕಿಯಾ ಮೋಟಾರ್ಸ್ ಸೇರಿದಂತೆ ಪ್ರಮುಖ ಕಾರು ಕಂಪನಿಗಳು ಬೆಲೆ ಹೆಚ್ಚಳ ಮಾಡುವುದಾಗಿ ಹೇಳಿಕೊಂಡಿದ್ದು, ಯಾವ ಕಾರಿನ ಬೆಲೆಯಲ್ಲಿ ಎಷ್ಟು ಹೆಚ್ಚಳ ಮಾಡಲಾಗುತ್ತಿದೆ ಎನ್ನುವ ಯಾವುದೇ ಮಾಹಿತಿ ನೀಡಿಲ್ಲ.

ಜನವರಿ 1ರಿಂದ ವಾಹನಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಮಹೀಂದ್ರಾ

ಕಳೆದ ಅಗಸ್ಟ್‌ನಲ್ಲಿ ವಿವಿಧ ವಾಹನ ಮಾದರಿಗಳ ಬೆಲೆ ಹೆಚ್ಚಳ ಮಾಡಿದ್ದ ಬಹುತೇಕ ಆಟೋ ಕಂಪನಿಗಳು ಇದೀಗ ಮತ್ತೆ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಮಹೀಂದ್ರಾ ಹೊಸ ವಾಹನಗಳ ಬೆಲೆಯು ರೂ.10 ಸಾವಿರದಿಂದ ರೂ. 50 ಸಾವಿರ ತನಕ ಹೆಚ್ಚಳವಾಗುವ ಸಾಧ್ಯತೆಗಳಿವೆ.

ಜನವರಿ 1ರಿಂದ ವಾಹನಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಮಹೀಂದ್ರಾ

ಇನ್ನು ಕರೋನಾ ವೈರಸ್ ಪರಿಣಾಮ ಆರಂಭ ದಿನಗಳಲ್ಲಿ ಕುಸಿತ ಕಂಡಿದ್ದ ಹೊಸ ವಾಹನಗಳ ಮಾರಾಟವು ತದನಂತರದ ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಮಹೀಂದ್ರಾ ಕೂಡಾ ಹೊಸ ಕಾರು ಮಾರಾಟದಲ್ಲಿ ಭರ್ಜರಿಯಾಗಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಲಾಕ್‌ಡೌನ್ ನಂತರ ಏಪ್ರಿಲ್ ಮತ್ತು ಮೇ ತಿಂಗಳಿನ ಹೊಸ ವಾಹನ ಮಾರಾಟದಲ್ಲಿ ಸಾಕಷ್ಟು ಇಳಿಕೆಯಾಗಿದ್ದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಕಂಪನಿಗಳು ನಂತರದ ದಿನಗಳಲ್ಲಿ ಹಲವಾರು ಆಫರ್‌ಗಳನ್ನು ನೀಡುವ ಮೂಲಕ ವಾಹನ ಮಾರಾಟದಲ್ಲಿ ಹಂತ ಹಂತವಾಗಿ ಚೇತರಿಕೆ ಕಂಡಿದ್ದವು.

ಜನವರಿ 1ರಿಂದ ವಾಹನಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಮಹೀಂದ್ರಾ

ಕಾರುಗಳ ಮಾರಾಟವನ್ನು ಸುಧಾರಿಸಲು ಈಗಲೂ ಕೂಡಾ ಆಫರ್‌ಗಳನ್ನು ಮುಂದುವರಿಸಿರುವ ಮಹೀಂದ್ರಾ ಕಂಪನಿಯು ಇಯರ್ ಎಂಡ್ ಆಫರ್ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ವರ್ಷಾಂತ್ಯದಲ್ಲಿ ಕಾರು ಖರೀದಿದಾರರಿಗೆ ಅತ್ಯುತ್ತಮ ಕೊಡುಗೆಗಳನ್ನು ಪ್ರಕಟಿಸಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಜನವರಿ 1ರಿಂದ ವಾಹನಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಮಹೀಂದ್ರಾ

ಮಹೀಂದ್ರಾ ವಿವಿಧ ಕಾರುಗಳ ಮೇಲೆ ರೂ.20 ಸಾವಿರದಿಂದ ರೂ.3.06 ಲಕ್ಷ ಗಳವರೆಗೆ ಭರ್ಜರಿ ಇಯರ್ ಎಂಡ್ ಆಫರ್ ಪಡೆದುಕೊಳ್ಳಬಹುದಾಗಿದ್ದು, ಬೊಲೆರೊ ಮೇಲೆ ಒಟ್ಟು ರೂ.20,550 ಗಳವರೆಗೆ ಮತ್ತು ಸ್ಕಾರ್ಪಿಯೋ ಎಸ್‍ಯುವಿಯ ಮೇಲೆ ರೂ.60,000 ಗಳವರೆಗೆ ರಿಯಾಯ್ತಿ ಪಡೆಯಬಹುದು.

ಜನವರಿ 1ರಿಂದ ವಾಹನಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಮಹೀಂದ್ರಾ

ಹಾಗೆಯೇ ಎಕ್ಸ್‌ಯುವಿ500 ಎಸ್‍ಯುವಿಯ ಮೇಲೆ ಒಟ್ಟು ರೂ.56,760 ದವರೆಗೆ ರಿಯಾಯಿತಿಯನ್ನು ಘೋಷಿಸಿದ್ದು, ಕೆಯುವಿ100 ಮಾದರಿಯ ಮೇಲೆ ಒಟ್ಟು ರೂ.62,055 ಮತ್ತು ಮರಾಜೋ ಮಾದರಿಯ ಮೇಲೆ ಒಟ್ಟು ರೂ.41,000 ತನಕ ರಿಯಾಯಿತಿ ಘೋಷಿಸಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಜನವರಿ 1ರಿಂದ ವಾಹನಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ300 ಕಾರು ಮಾದರಿಯ ರೂ.45,000 ತನಕ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಅಲ್ಟುರಾಸ್ ಜಿ4 ಎಸ್‍ಯುವಿಯ ಮೇಲೆ ರೂ.3.06 ಲಕ್ಷ ಗಳವರೆಗೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ.

Most Read Articles

Kannada
English summary
Mahindra Passenger, Commercial Vehicles Prices To Be Increased From January 2021. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X