ದೀಪಾವಳಿ ಸಂಭ್ರಮಕ್ಕಾಗಿ ಎರಡನೇ ಹಂತದಲ್ಲಿ 1 ಸಾವಿರ ಥಾರ್ ಕಾರು ವಿತರಣೆಗೆ ಸಜ್ಜಾದ ಮಹೀಂದ್ರಾ
ದೇಶಾದ್ಯಂತ ದೀಪಾವಳಿ ಸಂಭ್ರಮ ಇಂದಿನಿಂದ ಜೋರಾಗಿದ್ದು, ಹೊಸ ವಾಹನಗಳ ಮಾರಾಟವು ಕೂಡಾ ಈ ಹಿಂದಿಗಿಂತಲೂ ಹೆಚ್ಚು ಬೇಡಿಕೆ ಪಡೆದುಕೊಂಡಿದೆ. ಮಹೀಂದ್ರಾ ಹೊಸ ಥಾರ್ ಕಾರು ಮಾದರಿಯು ಈಗಾಗಲೇ ಬುಕ್ಕಿಂಗ್ ಪ್ರಮಾಣದಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಎರಡನೇ ಹಂತದಲ್ಲಿ ಒಟ್ಟು 1 ಸಾವಿರ ಕಾರು ವಿತರಣೆಗೆ ಸಿದ್ದವಾಗಿದೆ.

ದಸರಾ ಸಂಭ್ರಮದ ವೇಳೆ ಮೊದಲ ಬ್ಯಾಚ್‌ನಲ್ಲಿ ಬರೋಬ್ಬರಿ 500 ಯುನಿಟ್ ವಿತರಣೆ ಮಾಡಿದ್ದ ಮಹೀಂದ್ರಾ ಕಂಪನಿಯು ಇದೀಗ ಎರಡನೇ ಬ್ಯಾಚ್ ವಿತರಣೆ ಮಾಡುತ್ತಿದ್ದು, ದೀಪಾವಳಿ ವಿಶೇಷತೆಗಾಗಿ ಒಟ್ಟು ಒಂದು ಸಾವಿರ ಯುನಿಟ್ ವಿತರಣೆ ಮಾಡುವುದಾಗಿ ಹೇಳಿಕೊಂಡಿದೆ. ಸದ್ಯ ಮಹೀಂದ್ರಾ ನ್ಯೂ ಜನರೇಷನ್ ಕಾರು ಖರೀದಿಗೆ ಬುಕ್ಕಿಂಗ್ ನಂತರ ಕನಿಷ್ಠ 6 ವಾರಗಳಿಂದ ಗರಿಷ್ಠ 24 ವಾರಗಳ ಕಾಯಬೇಕಿದ್ದು, ಕಾಯುವಿಕೆಯ ಅವಧಿಯು ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗುತ್ತದೆ.

ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಈಗಾಗಲೇ 20 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿದೆ.

ಥಾರ್ ಎಎಕ್ಸ್ ವೆರಿಯೆಂಟ್‌ನಲ್ಲಿ ಮೊದಲ ಮೂರು ಮಾದರಿಗಳ ಮಾಹಿತಿಯನ್ನು ಈಗಾಗಲೇ ಅಧಿಕೃತ ವೆಬ್‌ಸೈಟ್‌ನಿಂದ ತೆಗೆದುಹಾಕಲಾಗಿದ್ದು, ಥಾರ್ ಕಾರಿನ ಆರಂಭಿಕ ಮಾದರಿಯು ಬೆಲೆಯು ಇದೀಗ ಆರಂಭಿಕವಾಗಿ ರೂ. 9.80 ಲಕ್ಷದಿಂದ ರೂ.11.90 ಲಕ್ಷಕ್ಕೆ ಏರಿಕೆಯಾಗಿದೆ.

ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಸ್ಟ್ಯಾಂಡರ್ಡ್ ಟಾಪ್ ಪೆಟ್ರೋಲ್ ಮ್ಯಾನುವಲ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಪೆಟ್ರೋಲ್ ಮ್ಯಾನುವಲ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಡೀಸೆಲ್ ಮ್ಯಾನುವಲ್ ಆವೃತ್ತಿಗಳ ಸ್ಥಗಿತ ನಂತರದ ಎಎಕ್ಸ್ ಫೋರ್ ಸೀಟರ್ ಕನ್ವರ್ಟಿಬಲ್ ಡೀಸೆಲ್ ಮ್ಯಾನುವಲ್ ಮಾದರಿಯು ಆರಂಭಿಕ ಮಾದರಿಯಾಗಿದೆ. ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತ್ಯುತ್ತಮ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಹೊಸ ಕಾರಿನ ಹೊರಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಲಾಗಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

ಥಾರ್ ಡೀಸೆಲ್ ಮಾದರಿಯು 132-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಪೆಟ್ರೋಲ್ ಮಾದರಿಯು 152-ಬಿಎಚ್‌ಪಿ, 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು. ಈ ಮೂಲಕ ಪ್ರಯಾಣಿಕರ ಸುರಕ್ಷತೆಯಲ್ಲೂ ಗಮನಸೆಳೆಯಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.


Click it and Unblock the Notifications








