Just In
Don't Miss!
- Sports
ಯುವರಾಜ್ ಸಿಂಗ್ ಕೋಚಿಂಗ್ ಬಹಳ ಉಪಯೋಗಕ್ಕೆ ಬಂತು: ಗಿಲ್
- News
ಖಾತೆ ಹಂಚಿಕೆ ಕುರಿತಂತೆ ಡಾ. ಸುಧಾಕರ್ ವಿಚಾರದಲ್ಲಿ ಎಲ್ಲರೂ ತಟಸ್ಥ ನಿಲುವು ತಾಳಿದ್ಯಾಕೆ?
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಮಹೀಂದ್ರಾ ನ್ಯೂ ಜನರೇಷನ್ ಸ್ಕಾರ್ಪಿಯೋ
ಕಾರು ಮಾರಾಟದಲ್ಲಿ ಹಲವಾರು ಹೊಸ ಬದಲಾವಣೆಗಳೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಮಹೀಂದ್ರಾ ಕಂಪನಿಯು ಕಾಲಕ್ಕೆ ತಕ್ಕಂತೆ ಹಲವಾರು ಮಾರ್ಪಾಡುಗಳನ್ನು ಅಳವಡಿಸಿಕೊಂಡಿದ್ದು, ಇದೀಗ ತನ್ನ ಜನಪ್ರಿಯ ಸ್ಕಾರ್ಪಿಯೋ ಮಾದರಿಯ ನ್ಯೂ ಜನರೇಷನ್ ಆವೃತ್ತಿಯಲ್ಲಿ ಮತ್ತಷ್ಟು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿದೆ.

2021ರ ಆರಂಭದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ನ್ಯೂ ಜನರೇಷನ್ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಕಾರು ಮಾದರಿಗಳು ಹೊಸ ಲೋಗೋದೊಂದಿಗೆ ರಸ್ತೆಗಿಳಿಯುವುದು ಬಹುತೇಕ ಖಚಿತವಾಗಿದ್ದು, ಇದೀಗ ಲಭ್ಯವಾಗಿರುವ ಹೊಸ ಮಾಹಿತಿಗಳ ಪ್ರಕಾರ ಸ್ಕಾರ್ಪಿಯೋ ಎಸ್‌ಯುವಿ ಕಾರು ಹೊಸ ಹೆಸರಿನೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದೆ. ಹೌದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ ಹೆಸರುವ ನ್ಯೂ ಜನರೇಷನ್ ಮಾದರಿಯೊಂದಿಗೆ ಸ್ಕಾರ್ಪಿಯೊನ್ ಆಗಿ ಬದಲಾಗಲಿದೆ.

ಹೊಸ ಕಾರಿನ ಹೆಸರು ಕೇಂದ್ರ ಸಾರಿಗೆ ಇಲಾಖೆಯಲ್ಲಿ ದಾಖಲಿಸಲಾಗಿರುವ ಹಕ್ಕು ಸ್ವಾಮ್ಯ ಪ್ರತಿಯಲ್ಲಿ ಸ್ಕಾರ್ಪಿಯೊನ್(ScorpioN) ಎಂದು ನಮೂದಿಸಲಾಗಿದ್ದು, ಹೊಸ ಹೆಸರನ್ನು ಸ್ಕಾರ್ಪಿಯೊನ್ ಎಂದು ಕರೆಯಲಾಗುತ್ತೊ ಅಥವಾ ಸ್ಕಾರ್ಪಿಯೋ ಎನ್ ಎಂದು ಪ್ರತ್ಯೇಕವಾಗಿ ಹೆಸರಿಸಲಾಗುತ್ತದೊ ಎನ್ನುವ ಸ್ಪಷ್ಟತೆಯಿಲ್ಲ.

ಆದರೆ ನ್ಯೂ ಜನರೇಷನ್ ಸ್ಕಾರ್ಪಿಯೋ ಕಾರು ScorpioN ಹೆಸರಿನೊಂದಿಗೆ ರಸ್ತೆಗಳಿಯಲಿದ್ದು, ಹೊಸ ಕಾರು ವಿನ್ಯಾಸದಲ್ಲಿ ಮಾತ್ರವಲ್ಲ ಎಂಜಿನ್ ಆಯ್ಕೆಯಲ್ಲೂ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿರಲಿವೆ.

ಹೊಸ ಸ್ಕಾರ್ಪಿಯೋ ಕಾರು ಮಾದರಿಯು 2021ರ ಮಾರ್ಚ್ ಒಳಗಾಗಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯಗಳಿದ್ದು, ಹೊಸ ಸ್ಕಾರ್ಪಿಯೋ ಈ ಬಾರಿ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್‌ಗೆ ಪೂರಕವಾದ 2.2-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಮಾದರಿಯಲ್ಲೂ ಮಾದರಿಯಲ್ಲೂ ಖರೀದಿಗೆ ಲಭ್ಯವಾಗುವ ಎಲ್ಲಾ ಸಾಧ್ಯತೆಗಳಿವೆ.

ಥಾರ್ ನ್ಯೂ ಜನರೇಷನ್ ಮಾದರಿಯಲ್ಲೂ ಈಗಾಗಲೇ ಹೊಸದಾಗಿ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ನೀಡಲಾಗಿದ್ದು, ಸ್ಕಾರ್ಪಿಯೋ ಮತ್ತು ಎಕ್ಸ್‌ಯುವಿ ಮಾದರಿಗಳಲ್ಲೂ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಬಹುದಾಗಿದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಮಲ್ಟಿ ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಕ್ರೂಸ್ ಕಂಟ್ರೋಲ್, ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯವಿರಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇದಲ್ಲದೆ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

ಮತ್ತೊಂದು ಪ್ರಮುಖ ಆಕರ್ಷಣೆ ಅಂದರೆ ಮಹೀಂದ್ರಾ ಕಂಪನಿಯು ಹೊಸ ಕಾರುಗಳ ಮೂಲಕ ಕ್ರ್ಯಾಶ್ ಟೆಸ್ಟಿಂಗ್ ಸಾಕಷ್ಟು ಸುಧಾರಣೆ ಕಂಡಿರುವುದು ವಾಹನ ಮಾರಾಟ ಮಾರಾಟ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದ್ದು, ಹೊಸ ತಾಂತ್ರಿಕ ಸೌಲಭ್ಯಗಳಿಂದಾಗಿ ವಾಹನಗಳ ಬೆಲೆಯಲ್ಲೂ ತುಸು ಹೆಚ್ಚಳವಾದರೂ ಗುಣಮಟ್ಟದ ಉತ್ಪನ್ನಗಳನ್ನು ಸಿದ್ದಪಡಿಸುವಲ್ಲಿ ಯಶಸ್ವಿಯಾಗುತ್ತಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ ಕಾರು ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ 2.2-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.44 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.31 ಲಕ್ಷ ಬೆಲೆ ಹೊಂದಿದೆ.