ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಫೋರ್ಡ್-ಮಹೀಂದ್ರಾ ನಿರ್ಮಾಣದ ಹೊಸ ಕಾರು

ಭಾರತದಲ್ಲಿ ಹೊಸ ಕಾರುಗಳ ಅಭಿವೃದ್ದಿಗಾಗಿ ಸಹಭಾಗಿತ್ವ ಯೋಜನೆಗೆ ಚಾಲನೆ ನೀಡಿರುವ ಮಹೀಂದ್ರಾ ಮತ್ತು ಫೋರ್ಡ್ ಕಂಪನಿಗಳು ಮುಂದಿನ ಎರಡು ವರ್ಷಗಳಲ್ಲಿ ಹಲವಾರು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲಿದ್ದು, ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಯನ್ನು ಸಹ ಮಾಡಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಫೋರ್ಡ್-ಮಹೀಂದ್ರಾ ನಿರ್ಮಾಣದ ಹೊಸ ಕಾರು

ಮಹೀಂದ್ರಾ ಕಂಪನಿಯು ಶೇ.51ರಷ್ಟು ಮತ್ತು ಫೋರ್ಡ್ ಕಂಪನಿಯು ಶೇ.49ರಷ್ಟು ಹೂಡಿಕೆಯೊಂದಿಗೆ ಸಹಭಾಗಿತ್ವ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಹೊಸ ಯೋಜನೆಗಾಗಿ ಬರೋಬ್ಬರಿ ರೂ. 4,300 ಕೋಟಿ ಬಂಡವಾಳ ಹೂಡಿಕೆ ಮಾಡಿವೆ. ಹೊಸ ಯೋಜನೆ ಅಡಿ ಸಾಮಾನ್ಯ ಕಾರು ಮಾದರಿಗಳಲ್ಲದೆ ಎಲೆಕ್ಟ್ರಿಕ್ ಕಾರು ಮಾದರಿಗಳು ಸಹ ಸೇರಿದ್ದು, ಸಹಭಾಗಿತ್ವ ಯೋಜನೆ ಅಡಿ ನಿರ್ಮಾಣವಾಗುವ ಮೊದಲ ಕಾರು 2021ರ ಆರಂಭದಲ್ಲಿ ರಸ್ತೆಗಿಳಿಯಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಫೋರ್ಡ್-ಮಹೀಂದ್ರಾ ನಿರ್ಮಾಣದ ಹೊಸ ಕಾರು

ಹೊಸ ಸಹಭಾಗಿತ್ವ ಯೋಜನೆಯಿಂದ ಎರಡು ಕಂಪನಿಗಳಿಗೂ ಸಾಕಷ್ಟು ಲಾಭವಿದ್ದು, ಕಾರು ಉತ್ಪಾದನೆಗೆ ವಿಫುಲ ಅವಕಾಶ ದೊರೆಯುವುದಲ್ಲದೆ ಫೋರ್ಡ್ ಕಾರುಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವ ಮೂಲಕ ಮಹೀಂದ್ರಾ ಕೂಡಾ ಉತ್ತಮ ಆದಾಯ ಕಂಡುಕೊಳ್ಳಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಫೋರ್ಡ್-ಮಹೀಂದ್ರಾ ನಿರ್ಮಾಣದ ಹೊಸ ಕಾರು

ಜೊತೆಗೆ ಗುಜರಾತ್‌ನಲ್ಲಿರುವ ಫೋರ್ಡ್ ಕಾರು ಉತ್ಪಾದನಾ ಘಟಕದಲ್ಲಿ ಮಹೀಂದ್ರಾ ಕಾರುಗಳ ಉತ್ಪಾದನೆಗೂ ಅವಕಾಶ ಸಿಗುವುದರಿಂದ ಉತ್ತರ ಭಾರತದ ಪ್ರಮುಖ ನಗರಗಳಲ್ಲಿನ ಕಾರು ಬೇಡಿಕೆಯನ್ನು ಸರಿಯಾದ ಸಮಯಕ್ಕೆ ಪೂರೈಕೆ ಮಾಡಲು ಸಹಕಾರಿಯಾಗಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಫೋರ್ಡ್-ಮಹೀಂದ್ರಾ ನಿರ್ಮಾಣದ ಹೊಸ ಕಾರು

ಇದರೊಂದಿಗೆ ಹೊಸ ಕಾರುಗಳ ಉತ್ಪಾದನೆಯ ವೆಚ್ಚ ಇಳಿಕೆಗಾಗಿ ಬಜೆಟ್ ಬೆಲೆಯ ಬಿಡಿಭಾಗಗಳನ್ನು ಒದಗಿಸಲಿರುವ ಮಹೀಂದ್ರಾ ಕಂಪನಿಯು ಕಾರು ಮಾರಾಟದಲ್ಲಿ ಮತ್ತೊಂದು ಹಂತದ ಬೆಳವಣಿಗೆ ಕಾರಣವಾಗಲಿದ್ದು, ಸಹಭಾಗಿತ್ವದ ಯೋಜನೆ ಅಡಿ ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಫೋರ್ಡ್-ಮಹೀಂದ್ರಾ ನಿರ್ಮಾಣದ ಹೊಸ ಕಾರು

ಪ್ರಸ್ತುತ ಮಾರುಕಟ್ಟೆಯಲ್ಲಿ ರೂ.15 ಲಕ್ಷದಿಂದ ರೂ.19 ಲಕ್ಷ ಬೆಲೆ ಅಂತರದಲ್ಲಿ ಬಲಿಷ್ಠವಾದ ಸಿ-ಸೆಗ್ಮೆಂಟ್ ಎಸ್‌ಯುವಿ ಹೆಚ್ಚಿನ ಬೇಡಿಕೆಯಿದ್ದು, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರುಗಳು ಉತ್ತಮ ಬೇಡಿಕೆ ಪಡೆದುಕೊಂಡಿರುವುದು ಫೋರ್ಡ್-ಮಹೀಂದ್ರಾ ಸಹಭಾಗಿತ್ವದ ಹೊಸ ಕಾರುಗಳಿಗೆ ಪ್ರಮುಖ ಪ್ರೇರಣೆಯಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಫೋರ್ಡ್-ಮಹೀಂದ್ರಾ ನಿರ್ಮಾಣದ ಹೊಸ ಕಾರು

ಹಾಗೆಯೇ ಬಿ-ಸೆಗ್ಮೆಂಟ್‌ನಲ್ಲಿ ಬಿಡುಗಡೆಯಾಗಲಿರುವ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ರೂ. 12 ಲಕ್ಷದಿಂದ ರೂ. 16 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಸಹಭಾಗಿತ್ವದ ಆಧಾರದ ಮೇಲೆ ಹೊಸ ಕಾರುಗಳ ನಿರ್ಮಾಣ, ಎಂಜಿನ್ ಅಭಿವೃದ್ದಿಗಾಗಿ ಪರಸ್ಪರ ಸಹಕರಿಸುವ ಮೂಲಕ ಎಸ್‌ಯುವಿ ಕಾರುಗಳ ಮೇಲೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಫೋರ್ಡ್-ಮಹೀಂದ್ರಾ ನಿರ್ಮಾಣದ ಹೊಸ ಕಾರು

ಗ್ರಾಹಕರ ಬೇಡಿಕೆಯೆಂತೆ ಒಟ್ಟು 9 ಹೊಸ ಕಾರುಗಳನ್ನು ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದ್ದು, ಫೋರ್ಡ್ ಎಕ್ಸ್‌ಪ್ಲೊರರ್ ಮಾದರಿಯಲ್ಲಿ ನಿರ್ಮಾಣಗೊಳ್ಳಲಿರುವ ಹೊಸ ಕಾರು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಫೋರ್ಡ್-ಮಹೀಂದ್ರಾ ನಿರ್ಮಾಣದ ಹೊಸ ಕಾರು

ಹೊಸ ಕಾರು 163-ಬಿಎಚ್‌ಪಿ ಪ್ರೇರಿತ 1.5-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದ್ದು, ಹೊಸ ಕಾರಿನಲ್ಲಿ ಡೀಸೆಲ್ ಎಂಜಿನ್ ಪರಿಚಯಿಸುವ ಸಾಧ್ಯತೆಗಳು ಕಡಿಮೆ ಎನ್ನಲಾಗುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಫೋರ್ಡ್-ಮಹೀಂದ್ರಾ ನಿರ್ಮಾಣದ ಹೊಸ ಕಾರು

ಪೆಟ್ರೋಲ್ ಎಂಜಿನ್ ಮಾದರಿಯಲ್ಲೇ ಎರಡು ಆಯ್ಕೆಗಳನ್ನು ನೀಡಬಹುದಾದ ಸಾಧ್ಯತೆಗಳಿದ್ದು, ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಮುಂದಿನ ಕೆಲವೇ ದಿನಗಳಲ್ಲಿ ಆರಂಭಿಸಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಫೋರ್ಡ್-ಮಹೀಂದ್ರಾ ನಿರ್ಮಾಣದ ಹೊಸ ಕಾರು

ಮಾಹಿತಿಗಳ ಪ್ರಕಾರ, ಮಹೀಂದ್ರಾ ಮತ್ತು ಫೋರ್ಡ್ ಕಂಪನಿಗಳ ಜಂಟಿ ಯೋಜನೆ ಅಡಿ ನಿರ್ಮಾಣಗೊಳ್ಳಲಿರುವ ಹೊಸ ಕಾರು ಆವೃತ್ತಿಗಳು 2021-22ರ ಆರ್ಥಿಕ ವರ್ಷದಲ್ಲಿ ಬಿಡುಗಡೆಯಾಗಲಿದ್ದು, ತದನಂತರ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಒಟ್ಟು 9 ವಿವಿಧ ನಮೂನೆಯ ಹೊಸ ಎಸ್‌ಯುವಿ, ಎಂಪಿವಿ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿವೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಫೋರ್ಡ್-ಮಹೀಂದ್ರಾ ನಿರ್ಮಾಣದ ಹೊಸ ಕಾರು

ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಕೆಲವು ಕಾರು ಮಾದರಿಗಳು ಫೋರ್ಡ್ ಹೆಸರಿನಲ್ಲಿ ಬಿಡುಗಡೆಯಾಗಲಿದ್ದರೆ ಇನ್ನು ಕೆಲವು ಕಾರುಗಳು ಮಹೀಂದ್ರಾ ಹೆಸರಿನಲ್ಲಿ ಬಿಡುಗಡೆಯಾಗಲಿದ್ದು, ಒಟ್ಟಿನಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟ ವಿಭಾಗದಲ್ಲಿ ಭರ್ಜರಿ ಪೈಪೋಟಿ ಏರ್ಪಡಲಿದೆ.

Most Read Articles

Kannada
English summary
Mahindra soon to launch Hyundai Creta rival in partnership with Ford. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X