ಕಾರು ಖರೀದಿ ಯೋಜನೆಯಲ್ಲಿರುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಮಹೀಂದ್ರಾ

ಮಹಾಮಾರಿ ಕರೋನಾ ವೈರಸ್ ಮಟ್ಟಹಾಕಲು ಶ್ರಮಿಸುತ್ತಿರುವ ಕರೋನಾ ವಾರಿಯರ್ಸ್‌ಗೆ ಮಹೀಂದ್ರಾ ಕಂಪನಿಯು ಹೊಸ ಆಫರ್‌ವೊಂದನ್ನು ಘೋಷಿಸಿದ್ದು, ಕಾರು ಖರೀದಿ ಯೋಜನೆಯಲ್ಲಿರುವ ಕರೋನಾ ವಾರಿಯರ್ಸ್ ಹಲವಾರು ಸುಲಭ ಹಣಕಾಸು ಸೌಲಭ್ಯ ಮತ್ತು ಡಿಸ್ಕೌಂಟ್ ಆಫರ್‌ಗಳನ್ನು ನೀಡುತ್ತಿದೆ.

ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಮಹೀಂದ್ರಾ

ವೈರಸ್ ಮಟ್ಟಹಾಕಲು ಈಗಾಗಗಲೇ ಹಲವಾರು ಯೋಜನೆಗಳಿಗೆ ಹಣಕಾಸು ಸಹಾಯ ಮಾಡಿರುವ ಮಹೀಂದ್ರಾ ಕಂಪನಿಯು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೆ ವೈದ್ಯಕೀಯ ಉಪಕರಣಗಳ ಸಹಾಯ ಹಸ್ತ ಚಾಚಿದ್ದು, ಇದೀಗ ಕಾರು ಖರೀದಿ ಯೋಜನೆಯಲ್ಲಿರುವ ಫ್ರಂಟ್ ಲೈನ್ ವಾರಿಯರ್ಸ್‌ಗೂ ಹಲವು ಆಫರ್‌ಗಳನ್ನು ನೀಡುತ್ತಿದೆ. ಸೀಮಿತ ಅವಧಿಗಾಗಿ ವಿವಿಧ ಆಫರ್ ಲಭ್ಯವಿದ್ದು, ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್ ಗರಿಷ್ಠ ಲಾಭ ಪಡೆದುಕೊಳ್ಳಬಹುದು.

ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಮಹೀಂದ್ರಾ

ಕೋವಿಡ್-19ರ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ಆರೋಗ್ಯ ಕಾರ್ಯಕರ್ತರು, ಪೊಲೀಸರು ಮಾತ್ರವಲ್ಲದೇ ರೈಲ್ವೆ ಮತ್ತು ವಿಮಾನಯಾನ ಸಿಬ್ಬಂದಿಯ ಜೊತೆಗೆ ಪತ್ರಕರ್ತರಿಗೂ ಮಹೀಂದ್ರಾ ಹೊಸ ಆಫರ್ ಅನ್ವಯವಾಗುವಂತೆ ಘೋಷಣೆ ಮಾಡಲಾಗಿದೆ.

ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಮಹೀಂದ್ರಾ

ಆಯ್ದ ಕಾರು ಮಾದರಿಗಳ ಖರೀದಿ ಮೇಲೆ ಕರೋನಾ ವಾರಿಯರ್ಸ್ ರೂ.66,500 ಲಾಭ ಪಡೆದುಕೊಳ್ಳಬಹುದಾಗಿದ್ದು, ಕಾರು ಖರೀದಿಯನ್ನು ಸುಲಭವಾಗಿಸಲು ವಿವಿಧ ಮಾದರಿಯ ಸರಳ ಇಎಂಐ ಮರುಪಾವತಿಯ ಆಯ್ಕೆಗಳನ್ನು ನೀಡಲಾಗುತ್ತಿದೆ.

ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಮಹೀಂದ್ರಾ

ಹಾಗೆಯೇ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ, ಧೀರ್ಘಾವಧಿಯ ಸಾಲ ಸೌಲಭ್ಯದ ಜೊತೆಗೆ ಕಾರು ಖರೀದಿಸಿದ ಮೊದಲ ಮೂರು ತಿಂಗಳು ಅತಿ ಕಡಿಮೆ ಇಎಂಐ ಪಾವತಿ ಆಯ್ಕೆ ನೀಡಲಾಗುತ್ತಿದ್ದು, ಸಾಮಾನ್ಯ ಗ್ರಾಹಕರಿಗೂ ಅನ್ವಯವಾಗುವಂತೆ 'ಬೈ ನೌವ್ ಪೇ 2021' ಆಫರ್ ಸಹ ಪ್ರಮುಖವಾಗಿದೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಮಹೀಂದ್ರಾ

ಇದರಲ್ಲಿ ಯಾವುದೇ ಹೆಚ್ಚುವರಿ ಲಾಭವಿಲ್ಲವಾದರೂ ಸದ್ಯದ ಆರ್ಥಿಕ ಪರಿಸ್ಥಿತಿಯಿಂದಾಗಿ ಕಾರು ಯೋಜನೆಯನ್ನು ಮುಂದಕ್ಕೆ ಹಾಕಿರುವ ಗ್ರಾಹಕರಿಗೆ ಅನುಕೂಲಕರವಾಗಿದ್ದು, ಹೊಸ ಕಾರುನ್ನು ಇದೀಗ ಖರೀದಿಸಿ 2021ರಿಂದ ಇಎಂಐ ಮರು ಪಾವತಿಸುವಂತೆ ಸಾಲ ನೀಡಲಾಗುತ್ತಿದೆ.

ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಮಹೀಂದ್ರಾ

ಹೊಸ ಸಾಲ ಸೌಲಭ್ಯಗಳಿಗಾಗಿ ವಿವಿಧ ರಾಷ್ಟ್ರೀಕೃತ ಬ್ಯಾಂಕ್ ಮತ್ತು ವಾಣಿಜ್ಯ ಬ್ಯಾಂಕ್ ಜೊತೆಗೂಡಿ ವಾಹನ ಸಾಲಗಳನ್ನು ನೀಡಲಾಗುತ್ತಿದ್ದು, ಬಹುತೇಕ ಕಾರುಗಳ ಖರೀದಿ ಮೇಲೆ ಶೇ.100ರಷ್ಟು ಆನ್-ರೋಡ್ ಲೋನ್ ಲಭ್ಯವಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಮಹೀಂದ್ರಾ

ಇನ್ನು ಆಟೋ ಉದ್ಯಮ ಸೇರಿದಂತೆ ಎಲ್ಲಾ ವಲಯದಲ್ಲೂ ಕರೋನಾ ಮಹಾಮಾರಿಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದೆ. ಸದ್ಯಕ್ಕೆ ಆಟೋ ಉದ್ಯಮಕ್ಕೆ ಕೆಲವು ವಿನಾಯ್ತಿಗಳನ್ನು ನೀಡಲಾಗಿದ್ದರೂ ಕೂಡಾ ವಾಹನ ಖರೀದಿದಾರರು ಇಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಮಹೀಂದ್ರಾ

ಲಾಕ್‌ಡೌನ್‌ನಿಂದ ಬಹುತೇಕ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗದ ಅಭದ್ರತೆ ಇದೀಗ ಅತಿ ದೊಡ್ಡ ಸಮಸ್ಯೆಯಾಗಿ ಕಾಡತೋಡಗಿದೆ. ಹೀಗಿರುವಾಗ ಹೊಸ ವಾಹನಗಳ ಮಾರಾಟವನ್ನು ಸರಿದಾರಿಗೆ ತರಲು ಯತ್ನಿಸುತ್ತಿರುವ ಆಟೋ ಕಂಪನಿಯು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದು, ಹೊಸ ವಾಹನ ಖರೀದಿದಾರರಿಗೆ ಇಎಂಐ ತಗ್ಗಿಸಿ ಅತಿ ಸುಲಭವಾದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಮಹೀಂದ್ರಾ

ಲಾಕ್‌ಡೌನ್‌ಗೂ ಮೊದಲು ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಮಾರಾಟ ಮಳಿಗೆಗಳು ಪುನಾರಂಭಗೊಂಡ ನಂತರವೂ ವಾಹನ ಖರೀದಿ ಬದಲು ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆಯಿಡುತ್ತಿರುವುದು ಆಟೋ ಕಂಪನಿಗಳನ್ನು ಚಿಂತೆಗೀಡು ಮಾಡಿದೆ.

More from DriveSpark

Article Published On: Thursday, June 11, 2020, 18:41 [IST]
English summary
Mahindra Special Ownership Schemes Introduced For Covid-19 Warriors India Details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+