ವೈದ್ಯಕೀಯ ಉಪಕರಣಗಳ ಜೊತೆ ಹ್ಯಾಂಡ್ ಸ್ಯಾನಿಟೈಜರ್ ಉತ್ಪಾದನೆಗೂ ಚಾಲನೆ ನೀಡಿದ ಮಹೀಂದ್ರಾ

ಮಹಾಮಾರಿ ಕರೋನಾ ವೈರಸ್ ತಡೆಯಲು ಹಲವಾರು ಕಠಿಣ ಕ್ರಮಗಳೊಂದಿಗೆ ಹರಸಾಹಸಪಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಕ್ಕೆ ಕೈಜೋಡಿಸಿರುವ ಆಟೋ ಉತ್ಪಾದನಾ ಕಂಪನಿಗಳು ವೈದ್ಯಕೀಯ ಉಪಕರಣಗಳ ಉತ್ಪಾದನೆ ಚಾಲನೆ ನೀಡಿರುವುದು ಸರ್ಕಾರಗಳ ಪ್ರಯತ್ನಕ್ಕೆ ಮತ್ತಷ್ಟು ಬಲತುಂಬಿವೆ.

ವೈದ್ಯಕೀಯ ಉಪಕರಣಗಳ ಜೊತೆ ಹ್ಯಾಂಡ್ ಸ್ಯಾನಿಟೈಜರ್ ಉತ್ಪಾದನೆಗೂ ಚಾಲನೆ ನೀಡಿದ ಮಹೀಂದ್ರಾ

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಹಲವು ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುತ್ತಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.

ವೈದ್ಯಕೀಯ ಉಪಕರಣಗಳ ಜೊತೆ ಹ್ಯಾಂಡ್ ಸ್ಯಾನಿಟೈಜರ್ ಉತ್ಪಾದನೆಗೂ ಚಾಲನೆ ನೀಡಿದ ಮಹೀಂದ್ರಾ

ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ವೈದ್ಯಕೀಯ ಉಪಕರಣಗಳ ಜೊತೆ ಹ್ಯಾಂಡ್ ಸ್ಯಾನಿಟೈಜರ್ ಉತ್ಪಾದನೆಗೂ ಚಾಲನೆ ನೀಡಿದ ಮಹೀಂದ್ರಾ

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಚಾಲನೆ ನೀಡಿವೆ.

ವೈದ್ಯಕೀಯ ಉಪಕರಣಗಳ ಜೊತೆ ಹ್ಯಾಂಡ್ ಸ್ಯಾನಿಟೈಜರ್ ಉತ್ಪಾದನೆಗೂ ಚಾಲನೆ ನೀಡಿದ ಮಹೀಂದ್ರಾ

ದೇಶದ ಜನಪ್ರಿಯ ಆಟೋ ಕಂಪನಿಗಳಲ್ಲಿ ಒಂದಾಗಿರುವ ಮಹೀಂದ್ರಾ ಕೂಡಾ ಈಗಾಗಲೇ ಅಗ್ಗದ ಬೆಲೆ ಉತ್ತಮ ತಂತ್ರಜ್ಞಾನ ಪ್ರೇರಿತ ವೆಂಟಿಲೆಟರ್‌ಗಳ ಉತ್ಪಾದನೆಗೆ ಚಾಲನೆ ನೀಡಿರುವುದಲ್ಲದೇ ಇದೀಗ ಫೇಸ್ ಶೀಲ್ಡ್, ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಜರ್ ಉತ್ಪನ್ನಗಳು ಸಹ ಕೆಲವು ಪ್ರಮುಖ ವೈದ್ಯಕೀಯ ಉತ್ಪನ್ನಗಳ ಅಭಿವೃದ್ದಿ ಕಂಪನಿಗಳ ಜೊತೆ ಸೇರಿ ಉತ್ಪಾದನೆ ಶುರು ಮಾಡಿದೆ.

MOST READ: ಕರೋನಾ ವೈರಸ್: ವೆಂಟಿಲೆಟರ್ ಉತ್ಪಾದನೆ ಚಾಲನೆ ನೀಡಿದ ಮಾರುತಿ ಸುಜುಕಿ

ವೈದ್ಯಕೀಯ ಉಪಕರಣಗಳ ಜೊತೆ ಹ್ಯಾಂಡ್ ಸ್ಯಾನಿಟೈಜರ್ ಉತ್ಪಾದನೆಗೂ ಚಾಲನೆ ನೀಡಿದ ಮಹೀಂದ್ರಾ

ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿರುವ ಮಹೀಂದ್ರಾ ಕಂಪನಿಯು ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗುತ್ತಿವೆ.

ವೈದ್ಯಕೀಯ ಉಪಕರಣಗಳ ಜೊತೆ ಹ್ಯಾಂಡ್ ಸ್ಯಾನಿಟೈಜರ್ ಉತ್ಪಾದನೆಗೂ ಚಾಲನೆ ನೀಡಿದ ಮಹೀಂದ್ರಾ

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ವೈದ್ಯಕೀಯ ಉಪಕರಣಗಳ ಉತ್ಪಾದನೆ ಚಾಲನೆ ನೀಡಿರುವುದು ಪ್ರಮುಖ ಬದಲಾವಣೆಯಾಗಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ವೈದ್ಯಕೀಯ ಉಪಕರಣಗಳ ಜೊತೆ ಹ್ಯಾಂಡ್ ಸ್ಯಾನಿಟೈಜರ್ ಉತ್ಪಾದನೆಗೂ ಚಾಲನೆ ನೀಡಿದ ಮಹೀಂದ್ರಾ

ಇನ್ನು ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ಈ ವೇಳೆ ವೈದ್ಯಕೀಯ ಉಪಕರಣಗಳ ಕೊರತೆಯು ಎದ್ದುಕಾಣುತ್ತಿದೆ. ಈ ಹಿನ್ನಲೆಯಲ್ಲಿ ಸದ್ಯ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿವೆ.

ವೈದ್ಯಕೀಯ ಉಪಕರಣಗಳ ಜೊತೆ ಹ್ಯಾಂಡ್ ಸ್ಯಾನಿಟೈಜರ್ ಉತ್ಪಾದನೆಗೂ ಚಾಲನೆ ನೀಡಿದ ಮಹೀಂದ್ರಾ

ವೆಂಟಿಲೆಟರ್, ಮಾಸ್ಕ್‌, ಟೆಸ್ಟಿಂಗ್ ಕಿಟ್ ಉತ್ಪಾದನೆಗೆ ಪ್ರಮುಖ ಆಟೋ ಕಂಪನಿಗಳು ಒಪ್ಪಿಗೆ ಸೂಚಿಸಿದ್ದು, ಮಾಹಾಮಾರಿ ಕರೋನಾ ವೈರಸ್ ಹೊಡೆದೊಡಿಸಲು ಒಗ್ಗಟ್ಟಿನ ಹೋರಾಟ ಅನಿವಾರ್ಯವಾಗಿದೆ.

Most Read Articles

Kannada
English summary
Mahindra start producing hand sanitizers along with ventilators face shields details. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X