ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಮಹೀಂದ್ರಾ ಥಾರ್
ಐಕಾನಿಕ್ ಆಫ್-ರೋಡರ್ ಥಾರ್ ಅನ್ನು ಈ ವರ್ಷದ ಮಧ್ಯದಲ್ಲಿ ಬಿಡುಗಡೆಗೊಳಿಸುವುದಾಗಿ ಮಹೀಂದ್ರಾ ಕಂಪನಿಯು ಖಚಿತಪಡಿಸಿದೆ. ಮಹೀಂದ್ರಾ ಕಂಪನಿಯು ಈ ಥಾರ್ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆ ಮಾಡುವ ಮೊದಲು ಸ್ಪಾಟ್ ಟೆಸ್ಟ್ ನಡೆಸಲಾಗಿದೆ.

ಕಳೆದ ತಿಂಗಳು ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಈ ಥಾರ್ ಎಸ್‍ಯುವಿಯನ್ನು ಪ್ರದರ್ಶಿಸುತ್ತಾರೆ ಎಂಬ ವರದಿಗಳು ಪ್ರಕಟವಾಗಿತ್ತು. ನಂತರ ಮಹೀಂದ್ರಾ ಕಂಪನಿಯು ಥಾರ್ ಎಸ್‍ಯುವಿಯನ್ನು ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸುವುದಿಲ್ಲವೆಂದು ಖಚಿತಪಡಿಸಿದರು. ಇದೀಗ ಮಹೀಂದ್ರಾ ಕಂಪನಿಯು ಬಹುನಿರೀಕ್ಷಿತ ಹೊಸ ಥಾರ್ ಅನ್ನು ಮುಂದಿನ ತಿಂಗಳು ಪ್ರತ್ಯೇಕ ಕಾರ್ಯಕ್ರಮವೊಂದರಲ್ಲಿ ಅನಾವರಣಗೊಳಿಸಲು ಸಜ್ಜಾಗುತ್ತಿದೆ.

ಹೊಸ ಥಾರ್ ನಲ್ಲಿ ಹಲವಾರು ಹೊಸ ಫೀಚರ್ಸ್‍ಗಳನ್ನು ಅಳವಡಿಸಲಾಗುತ್ತಿದೆ. ಈ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೂ ಮುನ್ನ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಹೊಸ ಥಾರ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಐಎಬಿ ಬಹಿರಂಗಪಡಿಸಿದೆ.

ಹೊಸ ಥಾರ್‍ನಲ್ಲಿ ಫ್ಲೋಟಿಂಗ್ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದು ಆ್ಯಪಲ್ ಕಾರ್‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ವನ್ನು ಒಳಗೊಂಡಿದೆ ಎಂದು ನಿರೀಕ್ಷಿಸಲಾಗಿದೆ.

2020ರ ಥಾರ್‍ನಲ್ಲಿರುವ ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ತನ್ನ ಬ್ರ್ಯಾಂಡ್‍ನ ಸರಣಿಯಲ್ಲಿರುವ ಟಿಯುವಿ 300 ಎಸ್‍ಯುವಿಯಲ್ಲಿರುವ ಕ್ಲಸ್ಟರ್ ಅನ್ನು ಹೋಲುವಂತಿದೆ. ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಡಿಜಿಟಲ್ ಡಿಸ್‍ಪ್ಲೇ ಯುನಿಟ್‍ನೊಂದಿಗೆ ಎರಡು ಅನಲಾಗ್ ಡಯಲ್‍ಗಳನ್ನು ಒಳಗೊಂಡಿದೆ.

ಹೊಸ ಮಹೀಂದ್ರಾ ಥಾರ್‍ನ 4×4 ಲಿವರ್ ವಿಭಿನ್ನವಾಗಿದೆ. ಇದರಲ್ಲಿ 2ಡಬ್ಲ್ಯುಡಿ(ಆರ್‍ಡಬ್ಲ್ಯುಡಿ) ಹೈ, 4ಡಬ್ಲ್ಯುಡಿ ಹೈ ಮತ್ತು 4 ಡಬ್ಲ್ಯು ಡಿ ಲೋ ಎಂಬ ಮೂರು ಮೋಡ್‍ಗಳಿವೆ. 2020ರ ಮಹೀಂದ್ರಾ ಥಾರ್ ಎಸ್‍ಯುವಿಯನ್ನು ಸಾಫ್ಟ್ ಟಾಪ್ ಹಾಗೂ ಹಾರ್ಡ್ ಟಾಪ್ - ಎಂಬ ಎರಡು ಡೋರ್ ಬಾಡಿ ಸ್ಟೈಲ್‌ಗಳಲ್ಲಿ ನೀಡಲಾಗುವುದು.

ಎಸ್‍ಯುವಿಯ ಹೊರಭಾಗವು ಜೀಪ್ ಶೈಲಿಯ ವಿನ್ಯಾಸವನ್ನು ಹೊಂದಿದ್ದರೆ, ಇಂಟಿರಿಯರ್ ಅನ್ನು ಹೆಚ್ಚು ಅಪ್‍ಡೇಟ್ ಮಾಡಲಾಗಿದೆ. ಮಾರುಕಟ್ಟೆಯಲ್ಲಿರುವ ಥಾರ್ 2.5 ಲೀಟರ್ ಡೀಸೆಲ್ ಬಿಎಸ್ 4 ಎಂಜಿನ್ ಹೊಂದಿದೆ. ಈ ಎಂಜಿನ್ 105 ಬಿಹೆಚ್‌ಪಿ ಪವರ್ ಹಾಗೂ 247 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ಅಳವಡಿಸಲಾಗಿದೆ.

ಹೊಸ ಥಾರ್ 120 ಬಿಹೆಚ್‌ಪಿ ಪವರ್ ಉತ್ಪಾದಿಸುವ 2.0 ಲೀಟರ್ ಡೀಸೆಲ್ ಬಿಎಸ್ 6 ಎಂಜಿನ್ ಹೊಂದಿರಲಿದೆ. ಹೊಸ ಫೀಚರ್, ದೊಡ್ಡ ಗಾತ್ರದ ಬಾಡಿ, ಬಲಶಾಲಿಯಾದ ಬಿಎಸ್ 6 ಡೀಸೆಲ್ ಎಂಜಿನ್ ಹೊಂದಲಿರುವ ಹೊಸ ಥಾರ್‌ನ ಬೆಲೆಯು ಮಾರುಕಟ್ಟೆಯಲ್ಲಿರುವ ಥಾರ್‌ಗಿಂತ ಹೆಚ್ಚಾಗುವ ಸಾಧ್ಯತೆಗಳಿವೆ.

ಹೊಸ 2020ರ ಥಾರ್ 2 ಡೋರಿನ ರೂಪಾಂತರವಾಗಿದೆ. ಹೊಸ ಥಾರ್‍ನಲ್ಲಿ 5 ಸ್ಪೋಕ್ ವಿನ್ಯಾಸದ ದೊಡ್ಡ ಅಲಾಯ್ ವ್ಹೀಲ್‍ಗಳನ್ನು ಅಳವಡಿಸಲಾಗಿದೆ. ಅಲಾಯ್ ವ್ಹೀಲ್‍ಗಳಲ್ಲಿ 235 ಅಥವಾ 245 ಸೆಕ್ಷನ್ ಟಯರ್‍ಗಳನ್ನು ನೀಡಲಾಗುವುದು.

ಹೊಸ ಥಾರ ಮಾರುಕಟ್ಟೆಯಲ್ಲಿರುವ ಥಾರ್‍ಗಿಂತ ಹೆಚ್ಚು ಬೆಲೆಯನ್ನು ಹೊಂದಿರಲಿದೆ. ಹೊಸ ಮಹೀಂದ್ರಾ ಎಸ್‍ಯುವಿಯು ಶೀಘ್ರದಲ್ಲೇ ಹೊಸ ಫೀಚರ್ಸ್‍ಗಳೊಂದಿಗೆ ಬಿಡುಗಡೆಯಾಗಲಿದೆ. ಮುಂದಿನ ವರ್ಷ ಬಿಡುಗಡೆಯಾಗಲಿರುವ ಮಹೀಂದ್ರಾ ಥಾರ್ ಬಿಎಸ್-6 ಎಂಜಿನ್ ಅನ್ನು ಹೊಂದಿರಲಿದೆ.


Click it and Unblock the Notifications








