ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಥಾರ್

ಮಹೀಂದ್ರಾ ಕಂಪನಿಯು ತನ್ನ ಎರಡನೇ ತಲೆಮಾರಿನ ಥಾರ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡುವ ಮೊದಲು ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಮಹೀಂದ್ರಾ ಥಾರ್ ಸ್ಪಾಟ್ ಟೆಸ್ಟ್ ನಲ್ಲಿ ಇಂಟಿರಿಯರ್ ಮಾಹಿತಿಗಳು ಬಹಿರಂಗಗೊಂಡಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಥಾರ್

2020ರ ಮಹೀಂದ್ರಾ ಥಾರ್ ಎಸ್‍‍ಯುವಿಯ ಪ್ರೊಡಕ್ಷನ್ ಸ್ಪೆಕ್‍ನ ಸ್ಪೈ ಚಿತ್ರ ಮತ್ತು ವೀಡಿಯೋವನ್ನು ಬಹಿರಂಗಪಡಿಸಿದೆ. ಸ್ಪೈ ಚಿತ್ರಗಳನ್ನು ಮತ್ತು ವೀಡಿಯೋವನ್ನು ಆಟೋಮೊಬೈಲ್ ಎಂಥುಹಾಸಿಸ್ಟ್ ಎಂಬ ಯೂಟ್ಯೂಬ್ ಚಾನೆಲ್‍‍ನಲ್ಲಿ ಬಹಿರಂಗಪಡಿಸಲಾಗಿದೆ. ಹೊಸ ಥಾರ್‍‍ನಲ್ಲಿ ಫ್ಲೋಟಿಂಗ್ ಟಚ್‍‍ಸ್ಕ್ರೀನ್ ಇನ್ಫೋಟೇನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದು ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ವನ್ನು ಒಳಗೊಂಡಿದೆ ಎಂದು ನಿರೀಕ್ಷಿಸಲಾಗಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಥಾರ್

2020ರ ಥಾರ್‍‍‍ನಲ್ಲಿರುವ ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ತನ್ನ ಬ್ರ್ಯಾಂಡ್‍ನ ಸರಣಿಯಲ್ಲಿರುವ ಟಿ‍ಯುವಿ 300 ಎಸ್‍‍ಯುವಿಯಲ್ಲಿರುವ ಕ್ಲಸ್ಟರ್‍‍ಗೆ ಹೋಲುವಂತಿದೆ. ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಡಿಜಿಟಲ್ ಡಿಸ್‍‍ಪ್ಲೇ ಯುನಿ‍‍ಟ್‍ನೊಂದಿಗೆ ಎರಡೂ ಅನಲಾಗ್ ಡಯಲ್‍ಗಳನ್ನು ಒಳಗೊಂಡಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಥಾರ್

ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಥಾರ್ ಆಟೋಮ್ಯಾಟಿಕ್ ತಾಪಮಾನ ನಿಯಂತ್ರಣ ಯುನಿಟ್‍(ಎಫ್‍ಎ‍ಟಿ‍ಸಿ) ಅನ್ನು ಸಹ ಹೊಂದಿದೆ. ಇದು ಪ್ರಸ್ತುತ ಮಾದರಿಗೆ ಹೋಲಿಸಿದರೆ ಹೆಚ್ಚು ಪ್ರೀಮಿಯಂ ಲುಕ್ ಅನ್ನು ಹೊಂದಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಥಾರ್

ಹೊಸ ಮಹೀಂದ್ರಾ ಥಾರ್‍‍ನ 4×4 ಲಿವರ್ ವಿಭಿನ್ನವಾಗಿದೆ. ಇದರಲ್ಲಿ 2ಡಬ್ಲ್ಯುಡಿ(ಆರ್‍‍ಡಬ್ಲ್ಯುಡಿ) ಹೈ, 4ಡಬ್ಲ್ಯುಡಿ ಹೈ ಮತ್ತು 4 ಡಬ್ಲ್ಯು ಡಿ ಲೋ ಎಂಬ ಮೂರು ಮೋಡ್‍‍ಗಳಿವೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಥಾರ್

2020ರ ಮಹೀಂದ್ರಾ ಥಾರ್ ಎಸ್‍‍ಯುವಿಯನ್ನು ಸಾಫ್ಟ್ ಟಾಪ್ ಹಾಗೂ ಹಾರ್ಡ್ ಟಾಪ್ - ಎಂಬ ಎರಡು ಡೋರ್ ಬಾಡಿ ಸ್ಟೈಲ್‌ಗಳಲ್ಲಿ ನೀಡಲಾಗುವುದು. ಎಸ್‍‍ಯುವಿಯ ಹೊರಭಾಗವು ಜೀಪ್ ಶೈಲಿಯ ವಿನ್ಯಾಸವನ್ನು ಹೊಂದಿದ್ದರೆ, ಇಂಟಿರಿಯರ್ ಅನ್ನು ಹೆಚ್ಚು ಅಪ್‍‍ಡೇಟ್ ಮಾಡಲಾಗಿದೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಥಾರ್

ಮಾರುಕಟ್ಟೆಯಲ್ಲಿರುವ ಥಾರ್ 2.5 ಲೀಟರ್ ಡೀಸೆಲ್ ಬಿಎಸ್ 4 ಎಂಜಿನ್‌ ಹೊಂದಿದೆ. ಈ ಎಂಜಿನ್ 105 ಬಿ‍‍ಹೆಚ್‌ಪಿ ಪವರ್ ಹಾಗೂ 247 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍‍ನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್‌ ಅಳವಡಿಸಲಾಗಿದೆ. ಈ ಎಸ್‍‍ಯುವಿಯ ಬೆಲೆ ಎಕ್ಸ್ ಶೋರೂಂ ದರದಂತೆ ರೂ.9.64 ಲಕ್ಷದಿಂದ 10.1 ಲಕ್ಷಗಳಾಗಿದೆ.

MOST READ: ಹೊಸ ಲುಕ್‍‍ನಲ್ಲಿ ಮಿಂಚಿದ ಮಾಡಿಫೈ ಕಿಯಾ ಸೆಲ್ಟೋಸ್

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಥಾರ್

ಹೊಸ ಥಾರ್ ಹೆಚ್ಚು ಬಲಶಾಲಿಯಾದ 120 ಬಿ‍‍ಹೆಚ್‌ಪಿ ಪವರ್ ಉತ್ಪಾದಿಸುವ 2.0 ಲೀಟರ್ ಡೀಸೆಲ್ ಬಿಎಸ್ 6 ಎಂಜಿನ್ ಹೊಂದಿರಲಿದೆ. ಹೊಸ ಫೀಚರ್, ದೊಡ್ಡ ಗಾತ್ರದ ಬಾಡಿ, ಬಲಶಾಲಿಯಾದ ಬಿಎಸ್ 6 ಡೀಸೆಲ್ ಎಂಜಿನ್ ಹೊಂದಲಿರುವ ಹೊಸ ಥಾರ್‌ನ ಬೆಲೆಯು ಮಾರುಕಟ್ಟೆಯಲ್ಲಿರುವ ಥಾರ್‌ಗಿಂತ ಹೆಚ್ಚಿರುವ ಸಾಧ್ಯತೆಗಳಿವೆ.

MOST READ: ನವೆಂಬರ್ ತಿಂಗಳಲ್ಲಿ ಮಾರಾಟವಾದ ರಾಯಲ್ ಎನ್‍‍ಫೀಲ್ಡ್ ಬೈಕ್‍‍ಗಳೆಷ್ಟು ಗೊತ್ತಾ?

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಥಾರ್

ಹೊಸ 2020ರ ಥಾರ್ 2 ಡೋರಿನ ರೂಪಾಂತರವಾಗಿದೆ. ಹೊಸ ಥಾರ್‍‍ನಲ್ಲಿ 5 ಸ್ಪೋಕ್ ವಿನ್ಯಾಸದ ದೊಡ್ಡ ಅಲಾಯ್ ವ್ಹೀಲ್‍‍ಗಳನ್ನು ಅಳವಡಿಸಲಾಗಿದೆ. ಅಲಾಯ್ ವ್ಹೀಲ್‍‍ಗಳಲ್ಲಿ 235 ಅಥವಾ 245 ಸೆಕ್ಷನ್ ಟಯರ್‍‍ಗಳಿವೆ. ಈ ವರ್ಷದ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮಹೀಂದ್ರಾ ಥಾರ್ ಅನ್ನು ಪ್ರದರ್ಶಿಸುವ ಸಾಧ್ಯತೆಗಳಿವೆ.

Image Courtesy: Automobile Enthusiast's/YouTube

Article Published On: Thursday, January 2, 2020, 13:28 [IST]
English summary
Spy Pics: 2020 Mahindra Thar Spotted Testing Again Ahead Of India Launch - Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+