ಲಾಕ್‌ಡೌನ್ ಸಡಿಲಿಕೆ ನಂತರ ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಅಟಾಮ್ ಕ್ವಾರ್ಡ್ರಿಸೈಕಲ್

ಕರೋನಾ ವೈರಸ‌್‌ನಿಂದಾಗಿ ಆಟೋ ಉದ್ಯಮವು ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ಸಂಕಷ್ಟದ ಪರಿಸ್ಥಿತಿಯಲ್ಲೂ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸಲು ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಆಟೋ ಉತ್ಪಾದನಾ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಅಟಾಮ್ ಕ್ವಾರ್ಡ್ರಿಸೈಕಲ್

ವೈರಸ್ ಭೀತಿ ಹಿನ್ನಲೆಯಲ್ಲಿ ಹಲವಾರು ಕಾರು ಮಾದರಿಗಳ ಬಿಡುಗಡೆಯು ಮುಂದೂಡಿಕೆಯಾಗಿರುವುದಲ್ಲದೆ ಕೆಲ ಕಾರು ಮಾದರಿಗಳ ಬಿಡುಗಡೆಯ ಯೋಜನೆಯನ್ನೇ ಕೈಬಿಡುವ ಪರಿಸ್ಥಿತಿ ಎದುರಾಗಿದ್ದು, ಮಹೀಂದ್ರಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬಿಡುಗಡೆ ಯೋಜನೆಯನ್ನು ಮುಂದೂಡಿಕೆ ಮಾಡಿದೆ. ಆದರೆ ಹೊಸ ವಾಹನಗಳ ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಮುಂದುವರಿಸಲಾಗಿದ್ದು, ಲಾಕ್‌ಡೌನ್ ಸಡಿಲಿಕೆ ನಂತರ ಮೊದಲ ಬಾರಿಗೆ ಅಟಾಮ್ ಕ್ವಾರ್ಡ್ರಿಸೈಕಲ್ ಮತ್ತು ಹೊಸ ಥಾರ್ ಕಾರು ಸಾರ್ವಜನಿಕವಾಗಿ ಕಾಣಿಸಿಕೊಂಡಿವೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಅಟಾಮ್ ಕ್ವಾರ್ಡ್ರಿಸೈಕಲ್

ಮಹೀಂದ್ರಾ ಕಂಪನಿಯು ಸದ್ಯ ಹೊಸ ಸುರಕ್ಷಾ ಕ್ರಮಗಳೊಂದಿಗೆ ಉದ್ಯಮ ವ್ಯವಹಾರಗಳನ್ನು ಮುನ್ನಡೆಸುತ್ತಿದ್ದು, ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾಗಿದ್ದ ವಿವಿಧ ಮಾದರಿಯ ಕಾರುಗಳು ಮತ್ತು ಕ್ವಾರ್ಡ್ರಿಸೈಕಲ್ ಬಿಡುಗಡೆಗೆ ಸಿದ್ದತೆ ನಡೆಸಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಅಟಾಮ್ ಕ್ವಾರ್ಡ್ರಿಸೈಕಲ್

ಇದರಲ್ಲಿ ಎಲೆಕ್ಟ್ರಿಕ್ ಕಾರು ಮಾದರಿಗಳು ಸಹ ಪ್ರಮುಖವಾಗಿದ್ದು, ಬಹುನೀರಿಕ್ಷಿತ ಎಲೆಕ್ಟ್ರಿಕ್ ವಾಹನ ಮಾದರಿಗಳಾದ ಇಎಕ್ಸ್‌ಯುವಿ300 ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ಅನ್ನು ಇದೇ ವರ್ಷಾಂತ್ಯಕ್ಕೆ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಅಟಾಮ್ ಕ್ವಾರ್ಡ್ರಿಸೈಕಲ್

ಹಾಗೆಯೇ ಸಾಮಾನ್ಯ ಮಾದರಿಯಾದ ಥಾರ್ ಕೂಡಾ ನ್ಯೂ ಜನರೇಷನ್ ಮಾದರಿಯೊಂದಿಗೆ ರಸ್ತೆಗಿಳಿದಿದ್ದು, ಮುಂಬರುವ ಅಗಸ್ಟ್‌ನಲ್ಲಿ ಖರೀದಿಗೆ ಲಭ್ಯವಿರಲಿದೆ. ರೋಡ್ ಟೆಸ್ಟಿಂಗ್ ವೇಳೆ ಕ್ವಾರ್ಡ್ರಿಸೈಕಲ್ ಮತ್ತು ಥಾರ್ ಒಟ್ಟಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಅಟಾಮ್ ಕ್ವಾರ್ಡ್ರಿಸೈಕಲ್

ಇನ್ನು ಮಹೀಂದ್ರಾ ಕಂಪನಿಯು ಸದ್ಯ ಹೊಸ ನಿಯಮಗಳಿಗೆ ಅನುಗುಣವಾಗಿ ತನ್ನ ಭವಿಷ್ಯದ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆ ನೀಡುವ ಉದ್ದೇಶದಿಂದ ಈ ಹಿಂದಿನ ಇ2ಓ ಪ್ಲಸ್ ಕಾರಿನ ಉತ್ಪಾದನೆ ಸ್ಥಗಿತಗೊಳಿಸಿ ಹೊಸ ಕಾರು ಉತ್ಪನ್ನಗಳ ಮೇಲೆ ಹೆಚ್ಚಿನ ಗಮನಹರಿಸುತ್ತಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಅಟಾಮ್ ಕ್ವಾರ್ಡ್ರಿಸೈಕಲ್

ಗ್ರಾಹಕರ ಬೇಡಿಕೆಯೆಂತೆ ವಿಶೇಷ ಫೀಚರ್ಸ್ ಮತ್ತು ಅತ್ಯುತ್ತಮ ಬ್ಯಾಟರಿ ಆಯ್ಕೆ ಹೊಂದಲಿರುವ ಎಲೆಕ್ಟ್ರಿಕ್ ಪ್ರಯಾಣಿಕರ ಕಾರುಗಳು ಮತ್ತು ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಯ ಮೇಲೂ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

MOST READ: ಅಕ್ಟೋಬರ್ 1ರಿಂದ ಹೊಸ ಸ್ಟಿಕ್ಕರ್ ಹೊಂದಲಿವೆ ಬಿಎಸ್ 6 ವಾಹನಗಳು

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಅಟಾಮ್ ಕ್ವಾರ್ಡ್ರಿಸೈಕಲ್

ಇದರಲ್ಲಿ ಅಟಾಮ್ ಕ್ವಾರ್ಡ್ರಿಸೈಕಲ್ ಎಲೆಕ್ಟ್ರಿಕ್ ವಾಹನವು ಒಂದಾಗಿದ್ದು, ಈ ವಾಹನವು 15kW ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಅನಾವರಣ ಹೊರತುಪಡಿಸಿ ಅಟಾಮ್ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿ ಬಿಟ್ಟುಕೊಟ್ಟಿಲ್ಲವಾದರೂ ಈ ಹೊಸ ಎಲೆಕ್ಟ್ರಿಕ್ ವಾಹನವು ಬಜಾಜ್ ಬಿಡಗಡೆ ಮಾಡಲಿರುವ ಎಲೆಕ್ಟ್ರಿಕ್ ಕ್ಯೂಟ್ ಕ್ವಾರ್ಡ್ರಿಸೈಕಲ್‌ಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Most Read Articles

Kannada
English summary
2020 Mahindra Thar & Atom Quadricycle Spied Testing Ahead Of India Launch. Read in Kannada.
Story first published: Tuesday, June 9, 2020, 12:05 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X