ಫೋರ್ ಡೋರ್ ವರ್ಷನ್‌ನಲ್ಲೂ ಬಿಡುಗಡೆಯಾಗಲಿದೆ ಮಹೀಂದ್ರಾ ಥಾರ್
ಮಹೀಂದ್ರಾ ಕಳೆದ ವಾರವಷ್ಟೇ ತನ್ನ ಜನಪ್ರಿಯ ಆಫ್ ರೋಡ್ ಎಸ್‍ಯುವಿ ಮಾದರಿಯಾದ ಥಾರ್ ನ್ಯೂ ಜನರೇಷನ್ ಆವೃತ್ತಿಯನ್ನು ಅನಾವರಣಗೊಳಿಸಿದ್ದು, ಟು ಡೋರ್ ಮಾದರಿಯಾಗಿರುವ ಹೊಸ ಕಾರು ಅಕ್ಟೋಬರ್ 2ಕ್ಕೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ.

ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಮಾದರಿಗಳಲ್ಲಿ ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ನಾಲ್ಕು ಆಸನ ಸೌಲಭ್ಯದೊಂದಿಗೆ ಟು ಡೋರ್ ವೈಶಿಷ್ಟ್ಯತೆ ಹೊಂದಿದ್ದು, ಇದು ಆಫ್-ರೋಡ್ ವಾಹನಗಳ ಪ್ರಮುಖ ಆಕರ್ಷಣೆ ಎನ್ನಬಹುದು. ಆದರೂ ಭಾರತೀಯ ಗ್ರಾಹಕರಿಗೆ ಫೋರ್ ಡೋರ್ ಕಾರು ಮಾದರಿಗಳೆ ಹೆಚ್ಚು ಆಕರ್ಷಕ ಎನ್ನಬಹುದಾಗಿದ್ದು, ಹೊಸ ಥಾರ್ ಕೂಡಾ ಮುಂಬರುವ ಕೆಲವೇ ದಿನಗಳಲ್ಲಿ ಟೂ ಡೋರ್ ಮಾದರಿಯ ಜೊತೆ ಜೊತೆಗೆ ಫೋರ್ ಡೋರ್ ಮಾದರಿಯನ್ನು ಸಹ ಪಡೆದುಕೊಳ್ಳಲಿದೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ.

ನ್ಯೂ ಜನರೇಷನ್ ಕಾರು ಮಾದರಿಯಲ್ಲಿ ಈ ಬಾರಿ ಪ್ರಮುಖ ಬದಲಾವಣೆ ಅಂದರೆ ಅದು ಎಂಜಿನ್ ಆಯ್ಕೆ. ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಲಿದೆ ಎನ್ನಬಹುದು.

ಇದರ ಹೊರತಾಗಿ ಹೊಸ ಕಾರಿನ ಹೊರಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಮರುವಿನ್ಯಾಸಗೊಳಿಸಲಾದ ಸೆವೆನ್ ಸ್ಲಾಟ್ ಗ್ರಿಲ್, ವೃತ್ತಾಕಾರದವಾದ ಹೆಡ್‌ಲ್ಯಾಂಪ್, 18-ಇಂಚಿನ ಆಕರ್ಷಕ ಅಲಾಯ್ ವೀಲ್ಹ್, ಡ್ಯುಯಲ್ ಬಂಪರ್, ಸ್ಕಫ್ ಪ್ಲೇಟ್, ಬಾಕ್ಸಿ ಮಾದರಿಯಲ್ಲಿ ಟೈಲ್ ಲೈಟ್‌ನೊಂದಿಗೆ ಮಾರ್ಡನ್ ಶೈಲಿ ಪಡೆದುಕೊಂಡಿದೆ.

ದೂರದಿಂದ ನೋಡಿದಾಗ ಹೊಸ ಥಾರ್ ಕಾರಿನ ವಿನ್ಯಾಸಗಳು ಜೀಪ್ ರ‍್ಲ್ಯಾಂಗ್ಲರ್ ಮಾದರಿಯ ಹೋಲಿಕೆ ಪಡೆದುಕೊಳ್ಳುತ್ತಾದರೂ ಹಲವು ತಾಂತ್ರಿಕ ಸೌಲಭ್ಯಗಳು ಮಹೀಂದ್ರಾ ವೈಶಿಷ್ಟ್ಯತೆಗಳು ಗ್ರಾಹಕರನ್ನು ಸೆಳೆಯಲಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿವೆ.

ಇನ್ನು ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

ಜೊತೆಗೆ 50:50 ಅನುಪಾತದ ರಿಯರ್ ಸೀಟುಗಳಲ್ಲೂ ಮಡಿಕೆ ಮಾಡಬಹುದಾದ ಸೌಲಭ್ಯ ನೀಡಲಾಗಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹಾರ್ಡ್ ಟಾಪ್ ಮತ್ತು ಸಾಫ್ಟ್ ಟಾಪ್ ಮಾದರಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೊಸ ಥಾರ್‌ನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಡೀಸೆಲ್ ಮಾದರಿಯು 132-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಪೆಟ್ರೋಲ್ ಮಾದರಿಯು 152-ಬಿಎಚ್‌ಪಿ, 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಇನ್ನುಳಿದಂತೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಹಾಗೆಯೇ ಎಲ್ಇಡಿ ಡಿಆರ್‌ಎಲ್ ಫಾಗ್ ಲ್ಯಾಂಪ್ಸ್, ಎಂಟು ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಆಟೋ ಎಸಿ, ಇಎಸ್‌ಪಿ ಮತ್ತು 226-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್‌ನೊಂದಿಗೆ ಆಫ್ ರೋಡ್‌ನಲ್ಲಿ ಮತ್ತಷ್ಟು ಗಮನಸೆಳೆಯಲಿದ್ದು, ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.10 ಲಕ್ಷದಿಂದ ಟಾಪ್ ಎಂಡ್ ಮಾದರಿಯು 15 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿವೆ.


Click it and Unblock the Notifications