2021ರ ಜನವರಿಯಿಂದ ಥಾರ್ ಉತ್ಪಾದನೆಯ ಹೆಚ್ಚಳಕ್ಕೆ ನಿರ್ಧರಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ನ್ಯೂ ಜನರೇಷನ್ ಥಾರ್ ಕಾರು ಮಾದರಿಯೊಂದಿಗೆ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಮಾದರಿಗೆ ಈಗಾಗಲೇ 25 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ದಾಖಲಾಗಿದೆ.

2021ರ ಜನವರಿಯಿಂದ ಥಾರ್ ಉತ್ಪಾದನೆಯ ಹೆಚ್ಚಳಕ್ಕೆ ನಿರ್ಧಾರ

ಬೇಡಿಕೆ ತಕ್ಕಂತೆ ಥಾರ್ ಪೂರೈಕೆ ಮಾಡಲು ಸಾಧ್ಯವಾಗದ ಮಹೀಂದ್ರಾ ಕಂಪನಿಯು ಇದುವರೆಗೆ ಸುಮಾರು ಮೂರು ಸಾವಿರ ಯುನಿಟ್ ಮಾತ್ರವೇ ವಿತರಣೆ ಮಾಡಿದೆ. ಮಹೀಂದ್ರಾ ಕಂಪನಿಯು ಥಾರ್ ಕಾರು ಮಾದರಿಯ 2 ಸಾವಿರ ಯುನಿಟ್‌ಗಾಗಿ ಮಾತ್ರ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಭಾರೀ ಪ್ರಮಾಣದ ಬೇಡಿಕೆಯಿಂದಾಗಿ ಹೊಸ ಕಾರಿನ ಕಾಯುವಿಕೆ ಅವಧಿಯು 8 ರಿಂದ 10 ತಿಂಗಳಿಗೆ ಏರಿಕೆಯಾಗಿದೆ.

2021ರ ಜನವರಿಯಿಂದ ಥಾರ್ ಉತ್ಪಾದನೆಯ ಹೆಚ್ಚಳಕ್ಕೆ ನಿರ್ಧಾರ

ಬೇಡಿಕೆಗೆ ತಕ್ಕಂತೆ ಪೂರೈಕೆ ಹೆಚ್ಚಿಸುವ ಸಲುವಾಗಿ ನಾಸಿಕ್ ಕಾರು ಉತ್ಪಾದನಾ ಘಟಕದಲ್ಲಿ ಕಾರು ಉತ್ಪಾದನೆಯನ್ನು ಪ್ರತಿ ತಿಂಗಳು 2 ಸಾವಿರ ಯುನಿಟ್‌ನಿಂದ 3 ಸಾವಿರ ಯುನಿಟ್‌ಗೆ ಏರಿಕೆ ಮಾಡಲಾಗುತ್ತಿದ್ದು, 2021ರ ಜನವರಿ 1ರಿಂದಲೇ ಉತ್ಪಾದನಾ ಪ್ರಮಾಣದಲ್ಲಿ ಏರಿಕೆಯಾಗಲಿದೆ.

2021ರ ಜನವರಿಯಿಂದ ಥಾರ್ ಉತ್ಪಾದನೆಯ ಹೆಚ್ಚಳಕ್ಕೆ ನಿರ್ಧಾರ

ಉತ್ಪಾದನಾ ಪ್ರಮಾಣ ಹೆಚ್ಚಳವಾದಲ್ಲಿ ಹೊಸ ಕಾರಿನ ಖರೀದಿ ಪ್ರಕ್ರಿಯೆ ಸರಳಗೊಳ್ಳುವುದಲ್ಲದೆ ಕಾಯುವಿಕೆ ಅವಧಿಯಲ್ಲಿ ಸಾಕಷ್ಟು ಇಳಿಕೆಯಾಗಲಿದ್ದು, ಇದುವರೆಗೆ 2,569 ಯುನಿಟ್ ಥಾರ್ ಮಾತ್ರ ವಿತರಣೆ ಮಾಡಲಾಗಿದೆ.

2021ರ ಜನವರಿಯಿಂದ ಥಾರ್ ಉತ್ಪಾದನೆಯ ಹೆಚ್ಚಳಕ್ಕೆ ನಿರ್ಧಾರ

ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ನ್ಯೂ ಜನರೇಷನ್ ಮಾದರಿಯೊಂದಿಗೆ ಎಂಜಿನ್, ವಿನ್ಯಾಸ ಮತ್ತು ತಾಂತ್ರಿಕ ಅಂಶಗಳಲ್ಲಿ ಸಾಕಷ್ಟು ಬದಲಾವಣೆ ಪಡೆದುಕೊಂಡಿದೆ.

2021ರ ಜನವರಿಯಿಂದ ಥಾರ್ ಉತ್ಪಾದನೆಯ ಹೆಚ್ಚಳಕ್ಕೆ ನಿರ್ಧಾರ

ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ. ವೆರಿಯೆಂಟ್ ಬದಲಾವಣೆ ನಂತರ ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.90 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

2021ರ ಜನವರಿಯಿಂದ ಥಾರ್ ಉತ್ಪಾದನೆಯ ಹೆಚ್ಚಳಕ್ಕೆ ನಿರ್ಧಾರ

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

2021ರ ಜನವರಿಯಿಂದ ಥಾರ್ ಉತ್ಪಾದನೆಯ ಹೆಚ್ಚಳಕ್ಕೆ ನಿರ್ಧಾರ

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

2021ರ ಜನವರಿಯಿಂದ ಥಾರ್ ಉತ್ಪಾದನೆಯ ಹೆಚ್ಚಳಕ್ಕೆ ನಿರ್ಧಾರ

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

More from DriveSpark

Article Published On: Thursday, December 10, 2020, 8:45 [IST]
English summary
Mahindra To Increase New-Gen Thar Production From Next Month. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+