ಪ್ರಸಕ್ತ ಹಣಕಾಸು ವರ್ಷದಲ್ಲಿ ಮೂರು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಮುನ್ನಡೆ ಸಾಧಿಸಿರುವ ಮಹೀಂದ್ರಾ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಎಲೆಕ್ಟ್ರಿಕ್ ವಾಹನಗಳ ಮಾದರಿಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದು, ಹೊಸ ಯೋಜನೆಗಾಗಿ ಬೃಹತ್ ಪ್ರಮಾಣದ ಬಂಡವಾಳ ಹೂಡಿಕೆ ಮಾಡುತ್ತಿದೆ.

ಮೂರು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಮಹೀಂದ್ರಾ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಟ್ರಿಯೊ ಜೊರ್ ಎಲೆಕ್ಟ್ರಿಕ್ ರಿಕ್ಷಾ ಮತ್ತು ಇ-ವೆರಿಟೋ ಮಾದರಿಯನ್ನು ಮಾತ್ರವೇ ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಮೂರು ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುವ ಸಿದ್ದತೆಯಲ್ಲಿದೆ. ಬಿಡುಗಡೆಯಾಗುವ ಹೊಸ ಎಲೆಕ್ಟ್ರಿಕ್ ವಾಹನಗಳ ಪಟ್ಟಿಯಲ್ಲಿ ಇಕೆಯುವಿ 100, ಅಟಾಮ್ ಕ್ವಾರ್ಡ್ರಿಸೈಕಲ್ ವಾಹನವು ಪ್ರಮುಖವಾಗಿದ್ದು, ಮತ್ತೊಂದು ಎಲೆಕ್ಟ್ರಿಕ್ ವಾಹನ ವಾಣಿಜ್ಯ ಬಳಕೆಯ ಮಾದರಿಯಾಗಿರಲಿದೆ ಎನ್ನಲಾಗಿದೆ.

ಮೂರು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಇಕೆಯುವಿ 100 ಎಲೆಕ್ಟ್ರಿಕ್ ಕಾರು ಮಾದರಿಯನ್ನ ಈಗಾಗಲೇ ಬಿಡುಗಡೆ ಮಾಡಲಾಗಿದ್ದರೂ ಕರೋನಾ ವೈರಸ್ ಪರಿಣಾಮ ಆಟೋ ಉತ್ಪಾದನೆ ಕುಂಠಿತಗೊಂಡಿದ್ದರಿಂದ ಹೊಸ ಕಾರಿನ ವಿತರಣೆಯನ್ನು ಶೀಘ್ರದಲ್ಲೇ ಆರಂಭಿಸುವುದಾಗಿ ಮಹೀಂದ್ರಾ ಹೇಳಿಕೊಂಡಿದೆ.

ಮೂರು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಮತ್ತೊಂದು ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಯಾದ ಇಎಕ್ಸ್‌ಯುವಿ300 ಕಾರು 2021ರ ಮಧ್ಯಂತರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಯು ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ.

ಮೂರು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಮಹೀಂದ್ರಾ ಕಂಪನಿಯು ಸದ್ಯ ಹೊಸ ನಿಯಮಗಳಿಗೆ ಅನುಗುಣವಾಗಿ ತನ್ನ ಭವಿಷ್ಯದ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆ ನೀಡುವ ಉದ್ದೇಶದಿಂದ ಈ ಹಿಂದಿನ ಇ2ಓ ಪ್ಲಸ್ ಕಾರಿನ ಉತ್ಪಾದನೆ ಸ್ಥಗಿತಗೊಳಿಸಿ ಹೊಸ ಕಾರು ಉತ್ಪನ್ನಗಳ ಮೇಲೆ ಹೆಚ್ಚಿನ ಗಮನಹರಿಸುತ್ತಿದೆ.

ಮೂರು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಗ್ರಾಹಕರ ಬೇಡಿಕೆಯೆಂತೆ ವಿಶೇಷ ಫೀಚರ್ಸ್ ಮತ್ತು ಅತ್ಯುತ್ತಮ ಬ್ಯಾಟರಿ ಆಯ್ಕೆ ಹೊಂದಲಿರುವ ಹೊಸ ಎಲೆಕ್ಟ್ರಿಕ್ ಪ್ರಯಾಣಿಕರ ಕಾರುಗಳು ಮತ್ತು ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಯ ಮೇಲೂ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಮೂರು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಜೊತೆಗೆ ಭಾರತ ಮತ್ತು ಚೀನಾ ಗಡಿ ವಿವಾದದಿಂದಾಗಿ ಚೀನಿ ಮಾರುಕಟ್ಟೆಯಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದ ಎಲೆಕ್ಟ್ರಿಕ್ ವಾಹನಗಳ ಬಿಡಿಭಾಗಗಳ ಕೊರತೆ ಇದೀಗ ದೇಶಿಯ ಮಾರುಕಟ್ಟೆಯಲ್ಲಿ ತೀವ್ರವಾಗುತ್ತಿದ್ದು, ಭವಿಷ್ಯದ ದೃಷ್ಠಿಯಿಂದ ಹಲವಾರು ಆಟೋ ಕಂಪನಿಗಳು ಇವಿ ಬಿಡಿಭಾಗಗಳ ಉತ್ಪಾದನೆಯನ್ನು ಭಾರತದಲ್ಲೇ ಕೈಗೊಳ್ಳುವತ್ತ ಹೊಸ ಯೋಜನೆ ಜಾರಿಗೆ ಸಿದ್ದವಾಗಿವೆ.

ಮೂರು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಹಾಗೆಯೇ ಎಲೆಕ್ಟ್ರಿಕ್ ವಾಹನಗಳ ಪ್ರಮುಖ ತಾಂತ್ರಿಕ ಅಂಶವಾಗಿರುವ ಲೀಥಿಯಂ ಅಯಾನ್ ಬ್ಯಾಟರಿಯನ್ನು ಚೀನಿ ಮಾರುಕಟ್ಟೆಯಿಂದ ಆಮದು ಬದಲಾಗಿ ಭಾರತದಲ್ಲೇ ಸಿದ್ದಪಡಿಸಬೇಕಾದ ಅನಿವಾರ್ಯತೆ ಹೆಚ್ಚುತ್ತಿದ್ದು, ಇದಕ್ಕಾಗಿ ಈಗಾಗಲೇ ಹಲವಾರು ಆಟೋ ಕಂಪನಿಗಳು ಭಾರೀ ಪ್ರಮಾಣದ ಹೂಡಿಕೆ ಮಾಡಿವೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಮೂರು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಭಾರತದಲ್ಲೇ ಸಿದ್ದಪಡಿಸಲಾದ ಎಲೆಕ್ಟ್ರಿಕ್ ವಾಹನಗಳ ಬಿಡಿಭಾಗಗಳು ಮತ್ತು ಬ್ಯಾಟರಿ ಸಂಪನ್ಮೂಲದಿಂದಾಗಿ ಇವಿ ವಾಹನಗಳ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗಲಿದ್ದು, ಮುಂಬರುವ 1 ವರ್ಷದ ಅವಧಿಯಲ್ಲಿ ಹಲವು ಕಂಪನಿಗಳು ಸ್ವದೇಶಿ ನಿರ್ಮಿತ ಎಲೆಕ್ಟ್ರಿಕ್ ಬಿಡಿಭಾಗಗಳನ್ನು ಬಳಕೆ ಮಾಡಲಿವೆ.

Most Read Articles

Kannada
English summary
Mahindra To Launch Three Electric Vehicles In Current Financial Year. Read in Kannada.
Story first published: Wednesday, July 1, 2020, 14:34 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X