ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್ ವರ್ಷನ್

ಮಹೀಂದ್ರಾ ಈಗಾಗಲೇ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸುವ ಮೂಲಕ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಮುಂಬರುವ ದಿನಗಳಲ್ಲಿ ಮತ್ತೆ ಮೂರು ಹೊಸ ಮಾದರಿಯ ಎಲೆಕ್ಟ್ರಿಕ್ ಕಾರು ಆವೃತ್ತಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್ ವರ್ಷನ್

ಸದ್ಯ ಮಾರುಕಟ್ಟೆಯಲ್ಲಿ ಇ-ವೆರಿಟೋ ಹೊರತುಪಡಿಸಿ ಹೊಸ ಸುರಕ್ಷಾ ನಿಯಮಗಳ ಅನ್ವಯ ಇ2ಒ ಪ್ಲಸ್ ಮಾದರಿಯ ಉತ್ಪಾದನೆಯನ್ನ ಸ್ಥಗಿತಗೊಳಿಸಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆ ಮತ್ತು ಕೇಂದ್ರ ಸರ್ಕಾರದ ಹೊಸ ನಿಯಮಾವಳಿಗಳ ಪ್ರಕಾರ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಪಡಿಸುತ್ತಿದೆ. ಇದರಲ್ಲಿ ಕೆಯುವಿ100 ಕಾರಿನ ಎಲೆಕ್ಟ್ರಿಕ್ ವರ್ಷನ್ ಸೇರಿದಂತೆ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಮತ್ತು ಫೋರ್ಡ್ ಜೊತೆಗಿನ ಸಹಭಾಗಿತ್ವದ ಯೋಜನೆ ಅಡಿಯಲ್ಲಿ ಆಸ್ಪೈರ್ ಎಲೆಕ್ಟ್ರಿಕ್ ಸೆಡಾನ್ ಕಾರನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ.

ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್ ವರ್ಷನ್

ಇದಕ್ಕಾಗಿಯೇ ಮಹೀಂದ್ರಾ ಸಂಸ್ಥೆಯು ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಮಹತ್ವದ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಅತ್ಯತ್ತಮ ಮೈಲೇಜ್ ನೀಡಬಲ್ಲ ಬ್ಯಾಟರಿ ಬಳಕೆಯನ್ನು ಮಾಡುತ್ತಿದೆ.

ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್ ವರ್ಷನ್

ಸದ್ಯ ಮಹೀಂದ್ರಾ ಸಂಸ್ಥೆಯು ಹೊಸ ನಿಯಮಗಳಿಗೆ ಅನುಗುಣವಾಗಿ ತನ್ನ ಭವಿಷ್ಯ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆ ನೀಡುವ ಉದ್ದೇಶದಿಂದ ಈ ಹಿಂದಿನ ಇ2ಓ ಪ್ಲಸ್ ಕಾರಿನ ಉತ್ಪಾದನೆ ಸ್ಥಗಿತಗೊಳಿಸಿ ಹೊಸ ಕಾರು ಉತ್ಪನ್ನಗಳ ಮೇಲೆ ಹೆಚ್ಚಿನ ಗಮನಹರಿಸುತ್ತಿದೆ.

ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್ ವರ್ಷನ್

ಪ್ರಸ್ತತ ಮಾರುಕಟ್ಟೆಯಲ್ಲಿ ಇ-ವೆರಿಟೊ ಸೆಡಾನ್ ಕಾರನ್ನು ಮಾತ್ರವೇ ಮಾರಾಟ ಮಾಡುತ್ತಿರುವ ಮಹೀಂದ್ರಾ ಸಂಸ್ಥೆಯು ಮುಂಬರುವ ಮೇ ಅಥವಾ ಜೂನ್ ಹೊತ್ತಿಗೆ ಕೆಯುವಿ100 ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ಸಿದ್ದವಾಗುತ್ತಿದ್ದು, ತದನಂತರವಷ್ಟೇ ಎಕ್ಸ್‌ಯುವಿ300 ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡುವ ಯೋಜನೆಯಲ್ಲಿದೆ. ಮಾಹಿತಿಗಳ ಪ್ರಕಾರ ಹೊಸ ಕೆಯುವಿ100 ಎಲೆಕ್ಟ್ರಿಕ್ ಉತ್ಪಾದನಾ ಆವೃತ್ತಿಯು ಮುಂದಿನ ತಿಂಗಳು 5ರಿಂದ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ಪ್ರದರ್ಶನಗೊಳ್ಳಲಿದ್ದು, ಬಜೆಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಿರಲಿದೆ.

ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್ ವರ್ಷನ್

ಮಧ್ಯಮ ಗಾತ್ರದ ಮೈಕ್ರೊ ಎಸ್‌ಯುವಿ ಆಯ್ಕೆ ಮಾಡುವ ಗ್ರಾಹಕರಿಗೆ ಉತ್ತಮ ಆಯ್ಕೆಯನ್ನು ನೀಡುತ್ತಿರುವ ಮಹೀಂದ್ರಾ ಸಂಸ್ಥೆಯು ಹೊಸ ಎಲೆಕ್ಟ್ರಿಕ್ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಈಗಾಗಲೇ ಪೂರ್ಣಗೊಳಿಸಿದ್ದು, ಹೊಸ ತಂತ್ರಜ್ಞಾನ ಪ್ರೇರಿತ ಲೀಥಿಯಂ ಅಯಾನ್ 15.9kWh ಬ್ಯಾಟರಿ ಪ್ಯಾಕ್ ಸೌಲಭ್ಯವನ್ನು ಪಡೆದುಕೊಂಡಿರಲಿದೆಯೆಂತೆ.

ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್ ವರ್ಷನ್

ಈ ಮೂಲಕ ಪ್ರತಿ ಚಾರ್ಜ್‌ಗೆ 130-150 ಕಿ.ಮಿ ಮೈಲೇಜ್ ನೀಡುವ ಗುಣಲಕ್ಷಣಗಳನ್ನು ಹೊಂದಿದ್ದು, ಸಾಮಾನ್ಯ ಕಾರಿನ ಮಾದರಿಯಲ್ಲೇ ವೇಗ ಮತ್ತು ಎಂಜಿನ್ ಕಾರ್ಯಕ್ಷಮತೆ ಒದಗಿಸಲು ಇದು ಸಹಕಾರಿಯಾಗಿದೆ.

ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್ ವರ್ಷನ್

ಇದಲ್ಲದೇ ಹೊಸ ಕಾರಿನಲ್ಲಿ ಇ-ವೆರಿಟೊ ಕಾರಿಗಿಂತಲೂ ಉತ್ತಮ ಫೀಚರ್ಸ್‌ಗಳನ್ನು ಜೋಡಣೆ ಮಾಡಲಾಗಿದ್ದು, ಡಿಸಿ ಚಾರ್ಜಿಂಗ್ ಸೌಲಭ್ಯಗಳೊಂದಿಗೆ ಮಾರುತಿ ಸುಜುಕಿ ಸಂಸ್ಥೆಯ ವ್ಯಾಗನ್ ಆರ್ ಎಲೆಕ್ಟ್ರಿಕ್ ಮತ್ತು ಟಾಟಾ ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರಿಗೆ ಇದು ಪೈಪೋಟಿಯಾಗಲಿದೆ.

ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್ ವರ್ಷನ್

ಹೊಸ ಕಾರಿನಲ್ಲಿ ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್‌ಗಳಿಗೆ ಮಾತ್ರವೇ ಒತ್ತು ನೀಡದ ಮಹೀಂದ್ರಾ ಸಂಸ್ಥೆಯು ಪ್ರಯಾಣಿಕ ಸುರಕ್ಷತೆ ಮತ್ತು ಗುಣಮಟ್ಟದ ಮೇಲೂ ಹೆಚ್ಚಿನ ಗಮನಹರಿಸಿದ್ದು, ಹೊಸ ಕಾರಿನಲ್ಲಿ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಸೇರಿದಂತೆ ಹಲವು ಸುರಕ್ಷಾ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್ ವರ್ಷನ್

ಬೆಲೆ ಮತ್ತು ಬಿಡುಗಡೆಯ ದಿನಾಂಕ(ಅಂದಾಜು)

ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಫೀಚರ್ಸ್ ಮತ್ತು ಅತ್ಯುತ್ತಮ ಬ್ಯಾಟರಿ ಆಯ್ಕೆ ಹೊಂದಲಿರುವ ಕೆಯುವಿ100 ಎಲೆಕ್ಟ್ರಿಕ್ ಕಾರು ಆಟೋ ಎಕ್ಸ್‌ಪೋ ದಲ್ಲಿ ಪ್ರದರ್ಶನಗೊಂಡ ನಂತರ ಮೇ ಅಥವಾ ಜೂನ್ ಹೊತ್ತಿಗೆ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ.7 ಲಕ್ಷದಿಂದ ರೂ.10 ಲಕ್ಷದೊಳಗೆ ಬೆಲೆ ಪಡೆದುಕೊಳ್ಳಲಿದೆ.

Most Read Articles

Kannada
English summary
Mahindra Electric is planning to launch a sub-9 lakh electric car in the Auto Expo as it aims to expand its portfolio to newer segments.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X