Just In
- 24 min ago Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- 1 hr ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- 2 hrs ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- 5 hrs ago ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
Don't Miss!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Finance ಬೆಂಗಳೂರಿಗೆ ಪ್ರತ್ಯೇಕ ನ್ಯಾವಿಗೇಟಿಂಗ್ ಅಪ್ಲಿಕೇಶನ್, ಟೆಕ್ ಕಂಪೆನಿಯೊಂದಿಗೆ ಒಪ್ಪಂದ
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Movies ಕಲರ್ಫುಲ್ ಲೈಟು.. ಡಿಂಪಲ್ ಸ್ಮೈಲು.. 'ಸಂಜು ವೆಡ್ಸ್ ಗೀತಾ 2' ಒಂದು ಹಾಡಿನ ಸೆಟ್ಟಿಗೆ ಬರೋಬ್ಬರಿ ₹50 ಲಕ್ಷ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾಗಲಿದೆ ಹೊಸ ಮಹೀಂದ್ರಾ ಟಿಯುವಿ 300 ಎಸ್ಯುವಿ
ಮಹೀಂದ್ರಾ ಕಂಪನಿಯು ತನ್ನ ಅಧಿಕೃತ ವೆಬ್ಸೈಟ್ನಿಂದ ಟಿಯುವಿ 300 ಎಸ್ಯುವಿಯ ಹೆಸರನ್ನು ಇತ್ತೀಚೆಗೆ ತೆಗೆದುಹಾಕಲಾಗಿತ್ತು. ಈ ಮಹೀಂದ್ರಾ ಟಿಯುವಿ 300 ಕಾಂಪ್ಯಾಕ್ಟ್ ಎಸ್ಯುವಿಯನ್ನು ಶಾಶ್ವತವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸುವ ಸಾಧ್ಯತೆಗಳಿದೆ ಎಂದು ವರದಿಗಳು ಪ್ರಕಟವಾಗಿತ್ತು.
ಆದರೆ ಟೀಂ ಬಿಹೆಚ್ಪಿ ಮಹೀಂದ್ರಾ ಟಿಯುವಿ 300 ಎಸ್ಯುವಿ ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಣಗೊಂಡು ಇದೇ ತಿಂಗಳು ಬಿಡುಗಡೆಯಾಗಲಿದೆ ಎಂದು ವರದಿ ಮಾಡಿದೆ. ಮಹೀಂದ್ರಾ ಟಿಯುವಿ 300 ಅನ್ನು 2015ರಲ್ಲಿ ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ಈ ಕಾಂಪ್ಯಾಕ್ಟ್ ಎಸ್ಯುವಿಯನ್ನು 2019ರಲ್ಲಿ ನವೀಕರಿಸಿತು. ಈ ಕಾಂಪ್ಯಾಕ್ಟ್ ಎಸ್ಯುವಿಯನ್ನು ಕಲವು ಕಾಸ್ಮೆಟಿಕ್ ಬದಲಾವಣೆಗಳ ನವೀಕರಣಗಳನ್ನು ಮಾಡಿದ್ದರು. ಜೊತೆಗೆ ಕೆಲವು ಹೊಸ ಫೀಚರ್ ಗಳನ್ನು ಅಳವಡಿಸಿದ್ದರು.
ಬಿಎಸ್-4 ಮಹೀಂದ್ರಾ ಟಿಯುವಿ 300 ಕ್ಯಾಂಪಕ್ಟ್ ಎಸ್ಯುವಿಯಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 3,750 ಆರ್ಪಿಎಂನಲ್ಲಿ 100 ಬಿಹೆಚ್ಪಿ ಪವರ್ ಮತ್ತು 1,600 ಆರ್ಪಿಎಂನಲ್ಲಿ 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿ
ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಮಹೀಂದ್ರಾ ಟಿಯುವಿ 300 ಕ್ಯಾಂಪಕ್ಟ್ ಎಸ್ಯುವಿ ಬಾಕ್ಸೀ ವಿನ್ಯಾಸವನ್ನು ಹೊಂದಿದೆ.
ಮಹೀಂದ್ರಾ ಕಂಪನಿಯು ತನ್ನ ಹೊಸ ಟಿಯುವಿ300 ಎಸ್ಯುವಿಯನ್ನು ಭಾರತೀಯ ರಸ್ತೆಗಳಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಿದ್ದಾರೆ. ಈ ಎಸ್ಯುವಿಯ ಹೊರಭಾಗದಲ್ಲಿ ಸಣ್ಣ ಮಟ್ಟದ ಕಾಸ್ಮೆಟಿಕ್ ನವೀಕರಣಗಳನ್ನು ನಡೆಸಿ ಬಿಡುಗಡೆಗೊಳಿಸಬಹುದು.
MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ
ಹೊಸ ಟಿಯುವಿ300 ಎಸ್ಯುವಿಯ ಮುಂಭಾಗ ಹೊಸ ಗ್ರಿಲ್ ಸ್ಲಿಮ್ಮರ್ ಸ್ಲ್ಯಾಟ್ಗಳು, ನವೀಕರಿಸಿದ ಬಂಪರ್ ವಿನ್ಯಾಸ, ಸ್ಪೋರ್ಟಿಯರ್ ಏರ್ ಡ್ಯಾಮ್, ಹೊಸ ಹೆಡ್ಲ್ಯಾಂಪ್ಗಳು ಮತ್ತು ಹಿಂಭಾಗ ಟೈಲ್ ಲ್ಯಾಂಪ್ಗಳು ಹೊಂದಿರಲಿವೆ.
ಹೊಸ ಟಿಯುವಿ300 ಎಸ್ಯುವಿಗಳ ಇಂಟಿರಿಯರ್ ನಲ್ಲಿ ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ಇನ್ಪೋಟೇನೆಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ. ಇದರೊಂದಿಗೆ ಈ ಎಸ್ಯುವಿಗಳು ನೂತನ ಪೀಚರ್ ಗಳನ್ನು ಒಳಗೊಂಡಿರುತ್ತದೆ ಎಂದು ನಿರೀಕ್ಷಿಸುತ್ತೇವೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಇನ್ನು ಮಹೀಂದ್ರಾ ಕಂಪನಿಯು ಹೊಸ ತಲೆಮಾರಿನ ಎಕ್ಸ್ಯುವಿ 500 ಮತ್ತು ಸ್ಕಾರ್ಪಿಯೋ ಎಸ್ಯುವಿಗಳ ಬಿಡುಗಡೆಯನ್ನು ಮುಂದೂಡಲಾಗಿದೆ. ಹೊಸ ತಲೆಮಾರಿನ ಎಕ್ಸ್ಯುವಿ 500 ಮತ್ತು ಸ್ಕಾರ್ಪಿಯೋ ಎಸ್ಯುವಿಗಳ ಬಿಡುಗಡೆಯನ್ನು ಮುಂದಿನ ಹಣಕಾಸು ವರ್ಷಕ್ಕೆ ಮುಂದೂಡಲಾಗಿದೆ.
ಮಹೀಂದ್ರಾ ಕಂಪನಿಯು ಟಿಯುವಿ 300 ಎಸ್ಯುವಿಯನ್ನು 2015ರಲ್ಲಿ ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಎಸ್ಯುವಿಯ ಬಾಕ್ಸೀ ವಿನ್ಯಾಸವು ಜನಸಾಮಾನ್ಯರನ್ನು ಸೆಳೆಯುವಲ್ಲಿ ಸಣ್ಣ ಮಟ್ಟದ ವೈಫಲ್ಯವನ್ನು ಕಂಡಿದೆ. ಈ ಕ್ಯಾಂಪಕ್ಟ್ ಎಸ್ಯುವಿಯು ಇದೇ ತಿಂಗಳು ಬಿಡುಗಡೆಯಾಗಲಿದೆ.