ಬಿಡುಗಡೆಯಾಗಲಿರುವ ಮಹೀಂದ್ರಾ ನಿರ್ಮಾಣದ ಟಾಪ್ 5 ಹೊಸ ಕಾರುಗಳಿವು..!
ಹೊಸ ಎಮಿಷನ್ ಜಾರಿ ನಂತರ ವಾಹನ ಉತ್ಪಾದನೆಯಲ್ಲಿ ಸಾಕಷ್ಟು ಹೊಸ ಬದಲಾವಣೆಗಳನ್ನು ಪರಿಚಯಿಸಿರುವ ಮಹೀಂದ್ರಾ ಕಂಪನಿಯು ಹೊಸ ಮಾದರಿಯ ಕಾರು ಮಾರಾಟದೊಂದಿಗೆ ಪ್ರತಿಸ್ಪರ್ಧಿ ಕಾರು ಕಂಪನಿಗಳಿಂತಲೂ ಹೆಚ್ಚು ಮುನ್ನಡೆ ಕಾಯ್ದುಕೊಂಡಿದೆ.

ಕಾರು ಮಾರಾಟದಲ್ಲಿ ಸದ್ಯ ಟಾಟಾ ಮೋಟಾರ್ಸ್ ಜೊತೆ ತೀವ್ರ ಪೈಪೋಟಿ ನಡೆಸುತ್ತಿರುವ ಮಹೀಂದ್ರಾ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಪರಿಚಯಿಸಲು ಸಿದ್ದವಾಗಿದ್ದು, ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿನ ಕೆಲವು ಕಾರು ಮಾದರಿಗಳ ನ್ಯೂ ಜನರೇಷನ್ ಆವೃತ್ತಿಗಳು ಸಹ ಒಳಗೊಂಡಿವೆ. ಜೊತೆಗೆ ಹೊಸ ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳು ಸಹ ಬಿಡುಗಡೆಯಾಗಲಿದ್ದು, ಟಾಪ್ 5 ಕಾರು ಮಾದರಿಗಳ ಮಾಹಿತಿ ಇಲ್ಲಿದೆ ನೋಡಿ.

ಇಕೆಯುವಿ100 ಎಲೆಕ್ಟ್ರಿಕ್
ಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯಾದ ಇಕೆಯುವಿ100 ಕಾರು ಮಾದರಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದರೂ ಕರೋನಾ ವೈರಸ್ ಪರಿಣಾಮ ಹೊಸ ಕಾರಿನ ಅಧಿಕೃತ ವಿತರಣೆಯನ್ನು ಮುಂದೂಡಿದ್ದ ಮಹೀಂದ್ರಾ ಕಂಪನಿಯು ಮುಂಬರುವ 2021ರ ಮಾರ್ಚ್ ವೇಳೆಗೆ ಪುನಾರಂಭಗೊಳಿಸುವುದಾಗಿ ಮಹೀಂದ್ರಾ ಹೇಳಿಕೊಂಡಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಅತ್ಯುತ್ತಮ ಬೆಲೆಯ ಎಲೆಕ್ಟ್ರಿಕ್ ಕಾರು ಮಾದರಿಗಳಲ್ಲಿ ಒಂದಾಗಿರುವ ಇಕೆಯುವಿ100 ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ.8.25 ಲಕ್ಷ ಬೆಲೆ ಹೊಂದಿದ್ದು, 15.9kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿದೆ.

ಇಎಕ್ಸ್‌ಯುವಿ300
ಇಕೆಯುವಿ100 ಕಾರಿಗಿಂತಲೂ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಮಾದರಿಯು ತುಸು ದುಬಾರಿ ಬೆಲೆಯೊಂದಿಗೆ ಅತಿ ಹೆಚ್ಚು ಮೈಲೇಜ್ ಪ್ರೇರಿತ ಲೀಥಿಯಂ ಅಯಾನ್ ಬ್ಯಾಟರಿ ಬಳಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರಿನ ಕುರಿತಂತೆ ಮಹೀಂದ್ರಾ ಸಂಸ್ಥೆಯು ಕೆಲವು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದೆ. ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು ಇವಿ ನೆಕ್ಸಾನ್ ಮಾದರಿಯಲ್ಲೇ ಬೆಲೆ ಪಡೆದುಕೊಳ್ಳಲಿದ್ದರೂ ನೆಕ್ಸಾನ್ ಕಾರಿಗಿಂತಲೂ ಹೆಚ್ಚು ಮೈಲೇಜ್ ಹೊಂದಿದ್ದು, ಪ್ರತಿ ಚಾರ್ಜ್‌ಗೆ 350ಕಿ.ಮೀ ನಿಂದ 370ಕಿ.ಮೀ ಮೈಲೇಜ್ ರೇಂಜ್ ಹೊಂದಿರಲಿದೆಯೆಂತೆ.

ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ.15 ಲಕ್ಷದಿಂದ ರೂ.17 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, ಹೊಸ ಕಾರು ಮುಂಬರುವ 2021ರ ಮಧ್ಯಂತರದಲ್ಲಿ ಬಿಡುಗಡೆಯಾಗಲಿದೆ.

ಅಟಾಮ್ ಕ್ವಾರ್ಡ್ರಿಸೈಕಲ್
ಅಟಾಮ್ ಕ್ವಾರ್ಡ್ರಿಸೈಕಲ್ ಎಲೆಕ್ಟ್ರಿಕ್ ವಾಹನವು 15kW ಸಾಮರ್ಥ್ಯದ ಲೀಥಿಯಂ ಅಲಾಯ್ ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ 110ಕಿ.ಮೀ ನಿಂದ 130ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಹೊಸ ಎಲೆಕ್ಟ್ರಿಕ್ ವಾಹನವು ವಾಣಿಜ್ಯ ಬಳಕೆಯ ವಾಹನ ಮಾದರಿಯಾಗಲಿದೆ.

ಅನಾವರಣ ಹೊರತುಪಡಿಸಿ ಅಟಾಮ್ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿ ಬಿಟ್ಟುಕೊಟ್ಟಿಲ್ಲವಾದರೂ ಈ ಹೊಸ ಎಲೆಕ್ಟ್ರಿಕ್ ವಾಹನವು ಮುಂದಿನ ವರ್ಷ ಬಜಾಜ್ ಬಿಡಗಡೆ ಮಾಡಲಿರುವ ಎಲೆಕ್ಟ್ರಿಕ್ ಕ್ಯೂಟ್ ಕ್ವಾರ್ಡ್ರಿಸೈಕಲ್‌ಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ನ್ಯೂ ಜನರೇಷನ್ ಎಕ್ಸ್‌ಯುವಿ500
ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯ ಬಿಡುಗಡೆಗೆ ಸಜ್ಜಾಗಿರುವ ಮಹೀಂದ್ರಾ ಕಂಪನಿಯು ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಹಲವಾರು ಹೊಸ ಪ್ರೀಮಿಯಂ ಸೌಲಭ್ಯಗಳೊಂದಿಗೆ ಎಸ್‌ಯುವಿ ಪ್ರಿಯರನ್ನು ಸೆಳೆಯುವ ತವಕದಲ್ಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಎರಡನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗುತ್ತಿರುವ ಎಕ್ಸ್‌ಯುವಿ500 ಕಾರು ಮಾದರಿಯು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ. ಸದ್ಯ ಬಿಎಸ್-6 ಎಕ್ಸ್‌ಯುವಿ500 ಮಾದರಿಯು ಸದ್ಯ ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದ್ದು, ನ್ಯೂ ಜನರೇಷನ್ ಮಾದರಿಯು ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದೆ.

ನ್ಯೂ ಜನರೇಷನ್ ಸ್ಕಾರ್ಪಿಯೋ
ಇದೇ ವರ್ಷ ಜೂನ್ ಅಥವಾ ಜುಲೈ ಅವಧಿಯಲ್ಲಿ ಬಿಡುಗಡೆಯಾಗಬೇಕಿದ್ದ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500 ಕಾರುಗಳ ಬಿಡುಗಡೆಯನ್ನು ಇದೇ ವರ್ಷಾಂತ್ಯಕ್ಕೆ ಇಲ್ಲವೇ 2021ರ ಆರಂಭದಲ್ಲಿ ಬಿಡುಗಡೆ ಮಾಡಲಿದ್ದು, ಹೊಸ ಕಾರುಗಳು ಸದ್ಯ ಬಿಎಸ್-6 ಎಂಜಿನ್‌ನೊಂದಿಗೆ ಮಾರಾಟಗೊಳ್ಳುತ್ತಿವೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮಹೀಂದ್ರಾ ನ್ಯೂ ಜನರೇಷನ್ ಕಾರು ಮಾದರಿಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಿಎಸ್-6 ಆವೃತ್ತಿಗಳಿಂತಲೂ ಭಾರೀ ಬದಲಾವಣೆಯೊಂದಿಗೆ ರಸ್ತೆಗಿಳಿಯುತ್ತಿದ್ದು, ಎಂಜಿನ್ ಆಯ್ಕೆಯಲ್ಲೂ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿರಲಿವೆ.


Click it and Unblock the Notifications